ಉತ್ತರ ಪ್ರದೇಶ | ಮಹಿಳೆಯ ಮೇಲೆ ಅತ್ಯಾಚಾರ; ಬಜರಂಗದಳ ನಾಯಕ ಬಂಧನ

Date:

ವಿವಾಹವಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಜರಂಗದಳದ ನಾಯಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಬಂಧಿತ ಸಂಘಪರಿವಾರದ ನಾಯಕನನ್ನು ದಿಲೀಪ್ ಸಿಂಗ್ ಬಜರಂಗಿ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಹೆಚ್ಚುವರಿ ಡಿಸಿಪಿ ಮಹೇಶ್ ಕುಮಾರ್, “ತನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ ಎಂದು ಹೇಳಿ ಗೋವಿಂದ ನಗರ ಪೊಲೀಸ್ ಠಾಣೆಯ ಹೊರಗೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಬಜರಂಗಿಯನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಐವರ ಕೊಲೆ ಪ್ರಕರಣ: ನೆರೆಹೊರೆಯವರ ಕಿರುಕುಳ ಕಾರಣಕ್ಕೆ ತನ್ನ ಸೋದರಿಯರನ್ನೇ ಕೊಂದನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ರ ನವೆಂಬರ್ 5ರಂದು ಮಹಿಳೆ ಬಜರಂಗಿ ವಿರುದ್ಧ ಕಲೆಕ್ಟರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. “ವಿವಾಹವಾಗುವುದಾಗಿ ಮನವೊಲಿಸಿ ನನ್ನೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ನನ್ನ ಕೆಟ್ಟ ಚಿತ್ರ, ವಿಡಿಯೋಗಳನ್ನು ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ” ಎಂದು ಮಹಿಳೆ ದೂರು ನೀಡಿದ್ದಾರೆ.

ಈ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಲು ಆರಂಭಿಸಿದ ಬಳಿಕ ಬಜರಂಗದಳದ ಕಾನ್ಪುರದ ಮಾಜಿ ಸಂಚಾಲಕ ಆಗಿದ್ದ ಬಜರಂಗಿ ಮಾತ್ರ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಸೋಮವಾರ ಬಜರಂಗಿ ಮತ್ತು ಆತನ ಬೆಂಬಲಿಗರು ಗೋವಿಂದ್ ನಗರ ಪೊಲೀಸ್ ಠಾಣೆ ಹೊರಗೆ ಸೇರಿ ಪ್ರತಿಭಟಿಸಿದ್ದಾರೆ. ಬಜರಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ಬೆನ್ನಲ್ಲೇ ಪೊಲೀಸರು ಬಜರಂಗಿಯನ್ನು ಬಂಧಿಸಿದ್ದಾರೆ. ಈಗಾಗಲೇ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪ್ರಕರಣ ಹೊಂದಿರುವ ಬಜರಂಗಿ ಮೇಲೆ ಇನ್ನೆರಡು ಪ್ರಕರಣಗಳು ಪೊಲೀಸರು ದಾಖಲಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಧಕ್ಕೆ ತಂದ ಆರೋಪ ಮತ್ತು ಆತ್ಮಹತ್ಯೆ ಯತ್ನದ ದೂರು ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...