ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯ: ಇಂದು ಬ್ಯಾಂಕ್‌ ನೌಕರರ ಮುಷ್ಕರ

Date:

ವಾರದಲ್ಲಿ ಐದು ದಿನ ಕೆಲಸದ ವ್ಯವಸ್ಥೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಇಂದು(ಜ.27) ರಾಷ್ಟ್ರ ವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಗ್ರಾಹಕರಿಗೆ ಹಲವು ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಜನವರಿ 23 ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ( UFBU)ಈ ಮುಷ್ಕರಕ್ಕೆ ಕರೆ ನೀಡಿದೆ.

ಇದರಿಂದಾಗಿ ಭಾರತೀಯ ಸ್ಟೇಟ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಬ್ಯಾಂಕ್ ಗಳ ಶಾಖೆಗಳಲ್ಲಿ ರೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರ್ ನಂತಹ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಖಾಸಗಿ ವಲಯದ ಬ್ಯಾಂಕ್ ಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿಲ್ಲ. ಹೀಗಾಗಿ ಖಾಸಗಿ ಬ್ಯಾಂಕ್ ಗಳ ವಹಿವಾಟು ಮೇಲೆ ಮುಷ್ಕರ ಯಾವುದೇ ಪರಿಣಾಮ ಬೀರುವ ಸಾಧ್ಯತೆ ಇಲ್ಲ.

ಯುಪಿಎ ಮತ್ತು ಇಂಟರ್ ನೆಟ್ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್ ಮಾಧ್ಯಮದ ಮೂಲಕ ಲಭ್ಯವಾಗುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದರೆ ಎಟಿಎಂಗಳಲ್ಲಿ ಹಣದ ಕೊರತೆ ಎದುರಾಗಬಹುದು.

ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್ ಬ್ಯಾಂಕ್‌ ಸೇರಿದಂತೆ ಖಾಸಗಿ ವಲಯದ ಬ್ಯಾಂಕ್‌ಗಳ ನೌಕರರು ಮುಷ್ಕರದಲ್ಲಿ ಭಾಗವಹಿಸುವುದಿಲ್ಲ. ಹೀಗಾಗಿ ಖಾಸಗಿ ಬ್ಯಾಂಕ್‌ಗಳ ವಹಿವಾಟಿನ ಮೇಲೆ ಮುಷ್ಕರದ ಯಾವುದೇ ಪರಿಣಾಮ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗುಣಮಟ್ಟ ಕುರಿತು ಮಾತಾಡಲು ಮೋದೀಜಿಗೆ ನೈತಿಕ ಹಕ್ಕು ಇಲ್ಲವೇ ಇಲ್ಲ!

ಎಸ್‌ಬಿಐ ಸೇರಿದಂತೆ ಸರ್ಕಾರಿ ಸ್ವಾಮ್ಯದ ಹಲವು ಬ್ಯಾಂಕ್‌ಗಳು ಮುಷ್ಕರದ ಕುರಿತು ಷೇರು ವಿನಿಮಯ ಕೇಂದ್ರಗಳಿಗೆ ಮಾಹಿತಿ ನೀಡಿವೆ.

ಎಲ್ಲ ಶನಿವಾರಗಳನ್ನು ರಜಾದಿನಗಳನ್ನಾಗಿ ಘೋಷಿಸುವ ಕುರಿತು ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ (ಐಬಿಎ) ಮತ್ತು ಯುಎಫ್‌ಬಿಯು ನಡುವೆ 2024ರ ಮಾರ್ಚ್‌ನಲ್ಲಿ ನಡೆದ ವೇತನ ಪರಿಷ್ಕರಣೆ ಚರ್ಚೆಗಳ ಸಂದರ್ಭದಲ್ಲಿ ಒಪ್ಪಂದವಾಗಿತ್ತು. ಆದರೆ ಸರ್ಕಾರವು ಈ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ (ಎಐಬಿಒಸಿ) ಪ್ರಧಾನ ಕಾರ್ಯದರ್ಶಿ ರೂಪಮ್ ರಾಯ್ ಹೇಳಿದ್ದಾರೆ.

‘ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ 40 ನಿಮಿಷ ಹೆಚ್ಚುವರಿ ಕೆಲಸ ಮಾಡಲು ನಾವು ಒಪ್ಪಿಕೊಂಡಿದ್ದೇವೆ. ಪ್ರತೀ ಶನಿವಾರ ರಜೆ ನೀಡಿದರೂ ಕೆಲಸದ ದಿನಗಳು ನಷ್ಟವಾಗುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಭೆಯಲ್ಲಿ ನಮ್ಮ ಬೇಡಿಕೆಗಳ ಕುರಿತು ಯಾವುದೇ ಭರವಸೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಬೇಕಾಯಿತು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಸಿ.ಎಚ್‌. ವೆಂಕಟಾಚಲಂ ತಿಳಿಸಿದ್ದಾರೆ. ಪ್ರಸ್ತುತ ನಿಯಮಗಳ ಪ್ರಕಾರ ಪ್ರತೀ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ.

ಈ ಬ್ಯಾಂಕ್‌ಗಳಲ್ಲಿ ನಾಳೆ ಅಡಚಣೆ ಸಾಧ್ಯ

ಭಾರತೀಯ ಸ್ಟೇಟ್‌ ಬ್ಯಾಂಕ್‌, ಪಂಜಾಬ್ ನ್ಯಾಷನಲ್‌ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡಾ, ಕೆನರಾ ಬ್ಯಾಂಕ್‌ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಶಾಖೆಗಳಲ್ಲಿ ಶಾಖೆಗೆ ಭೇಟಿ ನೀಡಿ ಪಡೆಯುವ ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್‌ ಮೊದಲಾದ ಸೇವೆಗಳು ಅಡಚಣೆಗೆ ಒಳಗಾಗುವ ಸಾಧ್ಯತೆ ಇದೆ. ಕೆಲವೆಡೆ ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಎದುರಾಗಬಹುದು.

ಈ ಸೇವೆಗಳು ಎಂದಿನಂತೆ ಇರಲಿದೆ

ಯುಪಿಐ ಹಾಗೂ ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಬ್ಯಾಂಕಿಂಗ್ ಸೇವೆಗಳು ಯಾವುದೇ ವ್ಯತ್ಯಯವಿಲ್ಲದೆ ಎಂದಿನಂತೆ ಕಾರ್ಯನಿರ್ವಹಿಸಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...