ಮುಂದಿನ ವಾರ ನಾಲ್ಕು ದಿನ ಬ್ಯಾಂಕ್ ರಜೆ: ಇಲ್ಲಿದೆ ಸಂಪೂರ್ಣ ಪಟ್ಟಿ

Date:

ಮುಂದಿನ ವಾರ ಕರ್ನಾಟಕ ಸೇರಿ ದೇಶದ ಕೆಲವು ರಾಜ್ಯಗಳಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿದೆ. ದೀಪಾವಳಿ, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬ್ಯಾಂಕ್ ರಜೆ ಇರಲಿದೆ. ದೀಪಾವಳಿ ಬ್ಯಾಂಕ್ ರಜೆಗಳು ರಾಜ್ಯದ ಮೇಲೆ ಅವಲಂಬಿಸಿರುತ್ತದೆ. ಕೆಲವು ರಾಜ್ಯಗಳಲ್ಲಿ ನಾಲ್ಕು ದಿನ ರಜೆ ಇದ್ದರೆ, ಇನ್ನು ಕೆಲವು ರಾಜ್ಯಗಳಲ್ಲಿ ಮೂರು ದಿನ ಬ್ಯಾಂಕ್ ಬಂದ್ ಆಗಿರುತ್ತದೆ.

ಅಕ್ಟೋಬರ್ 31ರಂದು ದೀಪಾವಳಿ ಹಿನ್ನೆಲೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಗೋವಾ, ಪುದುಚೇರಿ, ತೆಲಂಗಾಣ, ತಮಿಳುನಾಡು, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಬ್ಯಾಂಕ್‌ಗಳಿಗೆ ರಜೆ ಇರಲಿದೆ.

ಅದರ ಮರುದಿನ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕರ್ನಾಟಕದಲ್ಲಿ ಬ್ಯಾಂಕ್ ಬಂದ್ ಆಗಿರಲಿದೆ. ಉಳಿದಂತೆ ದೀಪಾವಳಿ, ಕತ್ ಹಬ್ಬದ ಹಿನ್ನೆಲೆ ತ್ರಿಪುರಾ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಮೇಘಾಲಯ, ಸಿಕ್ಕಿಂ, ಮಣಿಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಜುಲೈನಲ್ಲಿ ಬ್ಯಾಂಕ್‌ಗಳಿಗೆ 12 ದಿನ ರಜೆ; ಪೂರ್ಣ ಪಟ್ಟಿ ಇಲ್ಲಿದೆ!

ನವೆಂಬರ್ 2ರಂದು ಬಲಿ ಪಾಡ್ಯಮಿ/ ಲಕ್ಷ್ಮೀ ಪೂಜೆ/ ವಿಕ್ರಮ್ ಸಮ್ವಂತ್ ಹೊಸ ವರ್ಷ ದಿನದ ಕಾರಣ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಸಿಕ್ಕಿಂ, ಉತ್ತರಾಖಂಡ, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ. ಅದಾದ ಬಳಿಕ ನವೆಂಬರ್ 3ರಂದು ಭಾನುವಾರವಾಗಿದ್ದು, ವಾರದ ರಜೆ ಇರಲಿದೆ.

ಈ ಪೈಕಿ ಕರ್ನಾಟಕ, ಮಹಾರಾಷ್ಟ್ರದಲ್ಲಿ ಅಕ್ಟೋಬರ್ 31ರಿಂದ ನವೆಂಬರ್ 3ರವರೆಗೆ ಸತತ ನಾಲ್ಕು ದಿನ ಬ್ಯಾಂಕ್ ರಜೆ ಇರಲಿದೆ. ಇನ್ನು ಉತ್ತರಾಖಂಡ, ಸಿಕ್ಕಿಂನಲ್ಲಿ ನವೆಂಬರ್ 1ರಿಂದ ನವೆಂಬರ್ 3ರವರೆಗೆ ಮೂರು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...