ಆರ್ಥಿಕ ಸಮೀಕ್ಷೆ ಕುರಿತ ಹೇಳಿಕೆ: ರಾಹುಲ್ ಗಾಂಧಿಗೆ ನ್ಯಾಯಾಲಯದ ಸಮನ್ಸ್

Date:

ಲೋಕಸಭಾ ಚುನಾವಣೆ ವೇಳೆಯಲ್ಲಿ ಆರ್ಥಿಕ ಸಮೀಕ್ಷೆ ಕುರಿತು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಜನವರಿ 7ರೊಳಗೆ ವಿಚಾರಣೆಗೆ ಹಾಜರಾಗುವಂತೆ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯವೊಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸುಧೀರ್ ಕುಮಾರ್ ಶನಿವಾರ ನೋಟಿಸ್ ಜಾರಿ ಮಾಡಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಂಘದ ಮಂಡಲ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಮನ್ಸ್ ನೀಡಿದೆ.

ಮೊದಲಿಗೆ ಆಗಸ್ಟ್‌ನಲ್ಲಿ ಪಾಠಕ್ ಶಾಸಕರು ಮತ್ತು ಸಂಸದರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ರಾಹುಲ್ ವಿರುದ್ಧ ಮೊಕದ್ದಮೆ ದಾಖಲಿಸಲು ನ್ಯಾಯಾಲಯ ನಿರಾಕರಿಸಿದ ಹಿನ್ನೆಲೆಯಲ್ಲಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ದೇಶದಲ್ಲಿ ದುರ್ಬಲ ವರ್ಗದವರೇ ಅತಿ ಹೆಚ್ಚಿನ ಪ್ರಮಾಣದಲ್ಲಿದ್ದರೂ ಅವರು ಹೊಂದಿರುವ ಆಸ್ತಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಇದು ಹೀಗೆ ಮುಂದುವರೆದರೆ ಅತಿ ಹೆಚ್ಚು ಜನಸಂಖ್ಯೆ ಇರುವ ಜನ ಹೆಚ್ಚಿನ ಆಸ್ತಿಗೆ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳುವ ಮೂಲಕ ದುರ್ಬಲ ವರ್ಗದವರಲ್ಲಿ ದ್ವೇಷ ಮತ್ತು ಶತ್ರುತ್ವದ ವಿಷ ಬೀಜ ಬಿತ್ತಲು ರಾಹುಲ್ ಗಾಂಧಿ ಯತ್ನಿಸಿದ್ದಾರೆ ಎಂದು ಪಾಠಕ್ ಪರ ವಕೀಲ ವೀರೇಂದ್ರ ಪಾಲ್ ಗುಪ್ತಾ ಆರೋಪಿಸಿದ್ದಾರೆ.

ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶನ ನೀಡುವಂತೆ ಕೋರಿ ಆಗಸ್ಟ್‌ನಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 27 ರಂದು ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಪಾಠಕ್ ಅವರು ಸೆಷನ್ಸ್ ನ್ಯಾಯಾಲಯದಲ್ಲಿ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಿದ್ದರು.

ಹಿಂದುಳಿದ ಜಾತಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಇತರೆ ಹಿಂದುಳಿದ ಸಮುದಾಯಗಳ ಜನಸಂಖ್ಯೆ ಮತ್ತು ಸ್ಥಿತಿಯನ್ನು ನಿಖರವಾಗಿ ನಿರ್ಣಯಿಸಲು ಜಾತಿ ಗಣತಿಯನ್ನು ನಡೆಸಬೇಕು ಎಂದು ಹೈದರಾಬಾದ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...