”ಕ್ರಮಕ್ಕೆ ಸಿದ್ಧರಾಗಿ”: ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

Date:

ಸುಪ್ರೀಂ ಕೋರ್ಟ್ ಪತಂಜಲಿ ಆಯುರ್ವೇದ  ಸಹ ಸಂಸ್ಥಾಪಕ ರಾಮ್‌ದೇವ್‌ ಮತ್ತು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣ ಅವರ ದಾರಿತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಪತಂಜಲಿ ಸಂಸ್ಥೆ ಪ್ರಚಾರ ಮಾಡಿದ ಜಾಹೀರಾತುಗಳು ಕೂಡ ಈ ನೆಲದ ಕಾನೂನಿಗಿಂತ ಅತೀತವಲ್ಲ. ನ್ಯಾಯಾಲಯದ ಆದೇಶ ಉಲ್ಲಂಘಿಸಿರುವ ನೀವು ಶಿಕ್ಷೆಗೆ ಸಿದ್ಧರಾಗಿ ಎಂದು ರಾಮದೇವ್‌ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿತು.

“ಇದು ಸುಪ್ರೀಂ ಕೋರ್ಟ್‌ಗೆ ನೀಡಿದ ಭರವಸೆಯ ಸಂಪೂರ್ಣ ಉಲ್ಲಂಘನೆ. ನಿಮ್ಮ ಕ್ಷಮೆಯಾಚನೆಯಿಂದ ನಾವು ಸಮಾಧಾನಗೊಂಡಿಲ್ಲ” ಎಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಸಾದುದ್ದೀನ್‌ ಅಮಾನುಲ್ಲಾ ನೇತೃತ್ವದ ಪೀಠ ರಾಮ್‌ದೇವ್‌ ಅವರನ್ನು ತರಾಟೆಗೆ ತೆಗೆದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಕೈಗೊಂಡ ಕಾರ್ಯವು ಬರವಣಿಗೆ ರೂಪದಲ್ಲಿ ಹಾಗೂ ಆತ್ಮದಲ್ಲಿ ಇರಬೇಕು ಎಂಬುದನ್ನು ನೀವು ತಿಳಿದುಕೊಳ್ಳಬೇಕು. ನಾವು ನಿಮ್ಮ ಕ್ಷಮೆಯಾಚನೆಯನ್ನು ಏಕಾದರೂ ಒಪ್ಪಬೇಕು? ನಾವು ಪುನಃ ಹೇಳುತ್ತೇವೆ, ನಾವು ನಿಮ್ಮ ಕ್ಷಮೆಯಾಚನೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕ್ಷಮೆಯಾಚನೆ ನ್ಯಾಯಾಲಯವನ್ನು ಮನವೊಲಿಸಲು ಸಾಧ್ಯವಿಲ್ಲ. ಮಾತುಗಳಿಗಿಂತ ಕೃತಿಗೆ ಮಹತ್ವವಿದೆ” ಎಂದು ಸುಪ್ರೀಂ ಕೋರ್ಟ್ ರಾಮ್‌ದೇವ್‌ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ರಾಮ್‌ದೇವ್‌ ಹಾಗೂ ಬಾಲಕೃಷ್ಣ ವೈಯಕ್ತಿಕವಾಗಿ ಕೋರ್ಟ್‌ಗೆ ಕ್ಷಮೆಯಾಚಿಸಲು ಸಿದ್ಧರಿದ್ದಾರೆ ಎಂದು ರಾಮ್‌ದೇವ್‌ ಪರ ವಕೀಲರು ಮನವಿ ಮಾಡಿಕೊಂಡರು.

ವಕೀಲರ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸರ್ಕಾರ ಸಹ ತಮ್ಮ ಕಣ್ಣುಗಳನ್ನು ಏಕೆ ಮುಚ್ಚಿಕೊಂಡಿದೆ ಎಂಬುದೇ ನಮಗೆ ಆಶ್ಚರ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಏಪ್ರಿಲ್‌ 10ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ರಾಮ್‌ದೇವ್‌ ಹಾಗೂ ಬಾಲಕೃಷ್ಣ ಇಬ್ಬರೂ ಹಾಜರಿರಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತು.

ಕಳೆದ ಫೆ.27ರಂದು, ಪತಂಜಲಿ ಕಂಪನಿಗೆ ದಾರಿತಪ್ಪಿಸುವ ಔಷಧಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಚಾರ ಮಾಡಬಾರದೆಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಕಳೆದ ವರ್ಷದ ನವೆಂಬರ್‌ನಲ್ಲಿ ಸುಳ್ಳು ಹಾಗೂ ದಾರಿತಪ್ಪಿಸುವ ಪತಂಜಲಿ ಔಷಧ ಕಂಪನಿಗಳ ಜಾಹೀರಾತುಗಳ ವಿರುದ್ಧ ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...