ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿ ಸಾಗಿಸುತ್ತಿದ್ದ 400 ಕೋಟಿ ರೂ. ಹಣ ದರೋಡೆ ಮಾಡಲಾಗಿದ್ದ ಪ್ರಕರಣ ಪ್ರಮುಖ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ. ಬಂಧಿತನನ್ನು ಬಿಲ್ಡರ್ ಉದ್ಯಮಿ ಕಿಶೋರ್ ಸಾಳ್ವೆ ಎಂದು ಗುರುತಿಸಲಾಗಿದ್ದು, ಆತ ತಾನಾಗಿಯೇ ಮಹಾರಾಷ್ಟ್ರದ ಘೋಟಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಆರೋಪಿ ಕಿಶೋರ್‌ನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಬೆಳಗಾವಿ ಬಳಿಯ ಚೋರ್ಲಾ ಘಾಟ್‌ನಲ್ಲಿ ನಡೆದಿದ್ದ 400 ಕೋಟಿ ಹೈಜಾಕ್ ಮಾಡಲಾಗಿತ್ತು. ಪ್ರಕರಣ ಸಂಬಂಧ ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಅವರು ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣವು ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ – ಮೂರು ರಾಜ್ಯಗಳಲ್ಲೂ ಸಂಚಲನ ಮೂಡಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಹಾರಾಷ್ಟ್ರ ಪೊಲೀಸ್ ಇಲಾಖೆ, ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿತ್ತು.




