ಬಂಗಾಳ ಚುನಾವಣೆ | 30 ವರ್ಷಗಳ ಬಳಿಕ ವಿಧಾನಸಭೆಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಸ್ಪರ್ಧೆ

Date:

ಮುಂದಿನ ತಿಂಗಳು (ಏಪ್ರಿಲ್) ನಡೆಯಲಿರುವ ಪಶ್ಚಿಮ ಬಂಗಾಳ ಚುನಾವಣೆಗೆ ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿಲ್ಲ. ಆದಾಗ್ಯೂ, ಪಕ್ಷದ ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಸುಮಾರು 30 ವರ್ಷಗಳ ಬಳಿಕ ಮತ್ತೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಸ್ಪರ್ಧೆಯ ಇರಾದೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ಚೌಧರಿ, “ನನ್ನ ಪಕ್ಷವು ನಾನು ಬಹರಾಂಪುರದಿಂದ ಸ್ಪರ್ಧಿಸಬೇಕೆಂದು ಬಯಸುತ್ತಿದೆ. ಒಬ್ಬ ಪಕ್ಷದ ಕಾರ್ಯಕರ್ತನಾಗಿ ನಾನು ಪಕ್ಷದ ನಿರ್ಧಾರವನ್ನು ಪಾಲಿಸುತ್ತೇನೆ. ಏಕೆಂದರೆ, ಇದು ಕೇವಲ ನನ್ನ ಆಯ್ಕೆಯಲ್ಲ, ಬದಲಾಗಿ ನನ್ನ ಪಕ್ಷದ ಇಚ್ಛೆಯೂ ಆಗಿದೆ. ನಾನು ಸಂಸದೀಯ ರಾಜಕಾರಣದಲ್ಲಿ ಅನುಭವ ಹೊಂದಿದ್ದರೂ, ಬಹರಾಂಪುರ ವಿಧಾನಸಭಾ ಕ್ಷೇತ್ರವು ನಾನು ಹಿಂದೆ ಪ್ರತಿನಿಧಿಸುತ್ತಿದ್ದ ಬಹರಾಂಪುರ ಲೋಕಸಭಾ ಕ್ಷೇತ್ರದ ಅಡಿಯಲ್ಲೇ ಬರುತ್ತದೆ. ಹಾಗಾಗಿ, ಇಲ್ಲಿಗೆ ನಾನು ಹೊರಗಿನವನಲ್ಲ,” ಎಂದಿದ್ದಾರೆ.

“ನಾನು ಕಾಂಗ್ರೆಸ್‌ನ ಒಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷವು ನನಗೆ ಹೇಳಿದ್ದನ್ನು ಮಾಡುತ್ತೇನೆ. ಬಂಗಾಳದ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಧ್ವಜವನ್ನು ಎತ್ತಿ ಹಿಡಿಯುವುದು ಮುಖ್ಯವಾಗಿದೆ. ಅದಕ್ಕಾಗಿಯೇ, ಪಕ್ಷವು ಎಲ್ಲ ಹಿರಿಯ ರಾಜ್ಯ ನಾಯಕರನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿದೆ. ಕೆಲವರು ಒಪ್ಪಿದರೆ, ಮತ್ತೆ ಕೆಲವರು ಒಪ್ಪಲಿಲ್ಲ. ನಾನು ಈ ಪಕ್ಷದ ನಿರ್ಧಾರವನ್ನು ಪಾಲಿಸಲು ನಿರ್ಧರಿಸಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹರಾಂಪುರ ವಿಧಾನಸಭಾ ಕ್ಷೇತ್ರವನ್ನು ಪ್ರಸ್ತುತ ಬಿಜೆಪಿ ಶಾಸಕ ಸುಬ್ರತಾ ಮೊಯಿತ್ರಾ (ಕಾಂಚನ್) ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿ ಅವರನ್ನೇ ಮತ್ತೆ ಕಣಕ್ಕಿಳಿಸಿದೆ. ಈ ಕ್ಷೇತ್ರಕ್ಕೆ ಟಿಎಂಸಿಯಿಂದ ಬಹರಾಂಪುರ ಪುರಸಭೆಯ ಅಧ್ಯಕ್ಷ ನಾರು ಗೋಪಾಲ್ ಮುಖರ್ಜಿ ಸ್ಪರ್ಧಿಸಿದ್ದಾರೆ.

ಅಧೀರ್ ಚೌಧರಿ ಅವರು ಮೊದಲು 1991ರಲ್ಲಿ ಮುರ್ಷಿದಾಬಾದ್ ಜಿಲ್ಲೆಯ ನಬಗ್ರಾಮ್ ಕ್ಷೇತ್ರದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಸಿಪಿಐ(ಎಂ) ನಾಯಕ ಶಿಶಿರ್ ಕುಮಾರ್ ಸರ್ಕಾರ್ ವಿರುದ್ಧ ಸುಮಾರು 1,400 ಮತಗಳ ಅಂತರದಿಂದ ಸೋತಿದ್ದರು. ಬಳಿಕ, 1996ರಲ್ಲಿ ನಬಗ್ರಾಮ್‌ನಿಂದ ಮತ್ತೆ ಸ್ಪರ್ಧಿಸಿ ಜಯಗಳಿಸಿದರು. ಮೂರು ವರ್ಷಗಳ ನಂತರ, 1999ರಲ್ಲಿ ಬಹರಾಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದರು. ಅಂದಿನಿಂದ 2024ರವರೆಗೆ ಬಹರಾಂಪುರ ಕ್ಷೇತ್ರವನ್ನು ನಿರಂತರವಾಗಿ ಅವರು ಪ್ರತಿನಿಧಿಸುತ್ತಿದ್ದರು. ಆದರೆ, 2024ರ ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ,  ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ವಿರುದ್ಧ ಸೋಲುಂಡಿದ್ದರು.

ಈ ಲೇಖನ ಓದಿದ್ದೀರಾ?: ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

ಇನ್ನು, ಕಾಂಗ್ರೆಸ್ 2021ರ ರಾಜ್ಯ ಚುನಾವಣೆಯನ್ನು ಎಡರಂಗದೊಂದಿಗೆ ಸೀಟು ಹಂಚಿಕೆ ಮಾಡಿಕೊಂಡು ಸ್ಪರ್ಧಿಸಿತ್ತು. ಅದು 91 ಸ್ಥಾನಗಳಲ್ಲಿ ಸ್ಪರ್ಧಿಸಿತ್ತಾದರೂ, 294 ಸದಸ್ಯ ಬಲದ ವಿಧಾನಸಭೆಯಲ್ಲಿ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿರಲಿಲ್ಲ.

ಕಾಂಗ್ರೆಸ್ ಮೂಲಗಳ ಪ್ರಕಾರ, ಅಧೀರ್ ಚೌಧರಿ ಅವರಲ್ಲದೆ ಇನ್ನೂ ಅನೇಕ ಹಿರಿಯ ಪಕ್ಷದ ನಾಯಕರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್‌ಗೆ ಮರಳಿದ ಮಾಜಿ ಟಿಎಂಸಿ ರಾಜ್ಯಸಭಾ ಸಂಸದೆ ಮೌಸಮ್ ಬೆನಜೀರ್ ನೂರ್, ಕಾಂಗ್ರೆಸ್ ರಾಜ್ಯಾಧ್ಯಕ್ಷ ಶುಭಂಕರ್ ಸರ್ಕಾರ್ ಹಾಗೂ ಬಂಗಾಳದ ಏಕೈಕ ಕಾಂಗ್ರೆಸ್ ಸಂಸದ ಇಶಾ ಖಾನ್ ಚೌಧರಿ ಕೂಡ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...