ಬಂಗಾಳ ಚುನಾವಣೆ | ಕೋಲ್ಕತ್ತಾದಲ್ಲಿ ಮೋದಿ ರ್‍ಯಾಲಿ: ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ

Date:

ಪಶ್ಚಿಮ ಬಂಗಾಳ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿವೆ. ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾದಲ್ಲಿ ಶನಿವಾರ (ಇಂದು) ಸಂಜೆ ರ್‍ಯಾಲಿ ನಡೆಸಲಿದ್ದಾರೆ. ಬ್ರಿಗೇಡ್ ಪರೇಡ್ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅದಕ್ಕೂ ಮುನ್ನವೇ, ಕೋಲ್ಕತ್ತಾದ ಗಿರೀಶ್ ಪಾರ್ಕ್ ಬಳಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ತಾವು ಮೋದಿ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಸಮಾವೇಶದ ಸ್ಥಳದತ್ತ ಹೋಗುತ್ತಿದ್ದಾಗ, ತಮ್ಮ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಬಿಜೆಪಿ ಬೆಂಬಲಿಗರು ಆರೋಪಿಸಿದ್ದಾರೆ.

ಸ್ಥಳೀಯ ಟಿಎಂಸಿ ಕಾರ್ಯಕರ್ತರು ಈ ಆರೋಪಗಳನ್ನು ನಿರಾಕರಿಸಿದ್ದು, ಬಿಜೆಪಿ ಬೆಂಬಲಿಗರೇ ಮೊದಲು ನಿಂದಿಸಲು ಮತ್ತು ಕಲ್ಲು ತೂರಾಟ ನಡೆಸಲು ಆರಂಭಿಸಿದರು ಎಂದು ಪ್ರತಿಪಾದಿಸಿದ್ದಾರೆ. ಸ್ಥಳೀಯ ಟಿಎಂಸಿ ನಾಯಕರ ನಿವಾಸದ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತ್ಯಕ್ಷದರ್ಶಿಗಳ ಪ್ರಕಾರ, ಎರಡೂ ಪಕ್ಷಗಳ ಬೆಂಬಲಿಗರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಘರ್ಷಣೆಯ ವೇಳೆ ಹಲವು ವಾಹನಗಳು ಹಾನಿಗೀಡಾಗಿವೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಪ್ರಧಾನಿ ಮೋದಿ ಅವರು ಬಂಗಾಳದಲ್ಲಿ 18,000 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...