ಬಂಗಾಳ ಚುನಾವಣೆ | ಏ.23, 29ಕ್ಕೆ ಮತದಾನ – ಮೇ 4ರಂದು ಮತ ಎಣಿಕೆ; ಪ್ರಮುಖ ಅಂಶಗಳು

Date:

ಈ ವ‍ರ್ಷ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ವೇಳಾಪಟ್ಟಿ ಬಿಡುಗಡೆ ಮಾಡಿದೆ. ಐದು ರಾಜ್ಯಗಳ ಪೈಕಿ ಹೈ-ವೋಲ್ಟೇಜ್‌ ರಾಜ್ಯವಾಗಿರುವ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೇ 4ರಂದು ಮತ ಎಣಿಕೆ ಜರುಗಲಿದೆ, ಫಲಿತಾಂಶ ಪ್ರಕಟವಾಗಲಿದೆ.

ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ (ಕೇಂದ್ರಾಡಳಿತ ಪ್ರದೇಶ) ವಿಧಾನಸಭಾ ಚುನಾವಣೆಗಳ ನಾನಾ ದಿನಾಂಕಗಳಲ್ಲಿ ನಡೆಯಲಿವೆ. ಆದರೂ, ಫಲಿತಾಂಶ ಮಾತ್ರ ಒಂದೇ ದಿನ (ಮೇ 4) ಪ್ರಕಟವಾಗಲಿವೆ. ಅಸ್ಸಾಂ, ಕೇರಳ ಹಾಗೂ ಪುದುಚೇರಿಯ ಮತದಾರರು ಏಪ್ರಿಲ್ 9ರಂದೇ ಮತದಾನ ಮಾಡಿದರೂ, ಫಲಿತಾಂಶಕ್ಕಾಗಿ ಬರೋಬ್ಬರಿ 25 ದಿನಗಳ ಕಾಲ ಕಾಯಬೇಕಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ 2021ರ ವಿಧಾನಸಭಾ ಚುನಾವಣೆಯಲ್ಲಿ ಎಂಟು ಹಂತಗಳಲ್ಲಿ ಮತದಾನ ನಡೆದಿತ್ತು. ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಚುನಾವಣಾ ಪ್ರಕ್ರಿಯೆಗಳು ನಡೆದಿದ್ದವು. ಈ ಬಾರಿ, ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಪ್ರಕ್ರಿಯೆಗಳು 15 ದಿನಗಳಲ್ಲಿ ಮುಕ್ತಾಯಗೊಳ್ಳಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 4ನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. 2011ರ ವಿಧಾನಸಭಾ ಚುನಾವಣೆಯಲ್ಲಿ ಬಂಗಾಳದಲ್ಲಿ ಬಲಿಷ್ಠ ಎಡಪಕ್ಷಗಳ ಆಡಳಿತವನ್ನು ಉರುಳಿಸಿದ ಟಿಎಂಸಿ, ಅಂದಿನಿಂದಲೂ ಮೂರು ಅವಧಿಯ ಆಡಳಿತ ನಡೆಸಿದೆ.

71 ವರ್ಷದ ಪ್ರಬಲ ನಾಯಕಿ ಮಮತಾ ಬ್ಯಾನರ್ಜಿ ಅವರ ದೀರ್ಘಕಾಲದ ಆಡಳಿತವು ಅಧಿಕಾರ ವಿರೋಧಿ ಅಲೆ ಎದುರಿಸುತ್ತಿದೆ ಎಂಬ ಅಭಿಪ್ರಾಯಗಳಿವೆ. ಆದರೂ, ಅವರು ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ನಾಯಕಿ. ಅವರ ವಿರೋಧಿ ಪಾಳಯದಲ್ಲಿ ಅವರಿಗೆ ಸರಿಸಾಟಿಯಾದ ನಾಯಕರಾಗಲೀ, ಜನಬೆಂಬಲವಾಗಲೀ ಇಲ್ಲ. ಮಮತಾ ಅವರ ಬಲಗೈ ಭಂಟನಾಗಿದ್ದ ಸುವೇಂದು ಅಧಿಕಾರಿ ಅವರು ಚುನಾವಣೆಯಲ್ಲಿ ಬಿಜೆಪಿಯನ್ನು ಮುನ್ನಡೆಸಿದರೂ, ಟಿಎಂಸಿಯನ್ನು ಸೋಲಿಸಿ ಅಧಿಕಾರಕ್ಕೇರುವುದು ಸುಲಭವಿಲ್ಲ ಎಂಬ ಮಾತುಗಳಿವೆ.

ಮಮತಾ ಸರ್ಕಾರದ ಸಮಾಜ ಕಲ್ಯಾಣ ಯೋಜನೆಗಳು, ವಿಶೇಷವಾಗಿ ಮಹಿಳೆಯರಿಗಾಗಿ ಇರುವ ಯೋಜನೆಗಳು, ಪ್ರತಿ ಚುನಾವಣೆಯಲ್ಲೂ ಅವರನ್ನು ಬೆಂಬಲಿಸುವ ನಿಷ್ಠಾವಂತ ಮತಬ್ಯಾಂಕ್ ಅನ್ನು ಸೃಷ್ಟಿಸಿವೆ. ಈ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಬಂಗಾಳಿ ಅಸ್ಮಿತೆಯ ಸುತ್ತ ತಮ್ಮ ಪ್ರಚಾರವನ್ನು ರೂಪಿಸುತ್ತಿದ್ದಾರೆ. ಕೇಂದ್ರ ಸರ್ಕಾರವನ್ನು ‘ಬಂಗಾಳ ವಿರೋಧಿ’ ಎಂದು ಬಿಂಬಿಸುವ ಪ್ರಯತ್ನದಲ್ಲಿದ್ದಾರೆ. ಎಸ್‌ಐಆರ್ (SIR), ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ವಿಚಾರವಾಗಿ ಬಿಜೆಪಿ ವಿರುದ್ಧ ಭಾರೀ ಪ್ರಚಾರ ಮಾಡುತ್ತಿದ್ದಾರೆ. ಜೊತೆಗೆ, ಬಿಜೆಪಿಯನ್ನು ‘ಹೊರಗಿನವರು’ ಎಂದು ಬಿಂಬಿಸುತ್ತಿದ್ದಾರೆ.

ಈ ಲೇಖನ ಓದಿದ್ದೀರಾ?: ಇರಾನ್-ಅಮೆರಿಕ-ಇಸ್ರೇಲ್ ಯುದ್ಧ ಗೆದ್ದವರಾರು? ಲಾಭ ಪಡೆದವರಾರು?

ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮುನ್ನವೇ, ಮುಖ್ಯಮಂತ್ರಿ ಬ್ಯಾನರ್ಜಿ ಅವರು ತುಟ್ಟಿಭತ್ಯೆಯ ಬಾಕಿ ಪಾವತಿಯನ್ನು ಘೋಷಿಸಿದ್ದಾರೆ. ರಾಜ್ಯದ ಅರ್ಚಕರು ಮತ್ತು ಮೌಲ್ವಿಗಳಿಗೆ ಮಾಸಿಕ ಗೌರವಧನವನ್ನು 500 ರೂ.ಗಳಷ್ಟು ಹೆಚ್ಚಿಸಿದ್ದಾರೆ.

ಇನ್ಉ, ಬಿಜೆಪಿಯೂ ಅಧಿಕಾರ ಗಿಟ್ಟಿಸಿಕೊಳ್ಳಲು ಭಾರೀ ಪ್ರಯತ್ನ ಮಾಡುತ್ತಿದೆ. 294 ಸದಸ್ಯ ಬಲದ ವಿಧಾನಸಭೆಯಲ್ಲಿ 77 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, ಈ ಚುನಾವಣೆಯಲ್ಲಿ ದೊಡ್ಡ ಜಿಗಿತ ಸಾಧಿಸಲು ಹವಣಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಪ್ರಚಾರದ ಸ್ಟಾರ್‌ ಆಗಿದ್ದಾರೆ. ಚುನಾವಣಾ ಘೋಷಣೆಗೂ ಹಿಂದಿನ ದಿನ (ಶನಿವಾರ) ಬಂಗಾಳಕ್ಕೆ ಭೇಟಿ ನೀಡಿದ್ದ ಮೋದಿ, 18,000 ಕೋಟಿ ರೂ. ಮೌಲ್ಯದ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಕಳೆದ ಜುಲೈನಲ್ಲಿ ರಾಜ್ಯಸಭಾ ಸಂಸದ ಮತ್ತು ಹಿರಿಯ ನಾಯಕ ಸಮೀಕ್ ಭಟ್ಟಾಚಾರ್ಯ ಅವರನ್ನು ಬಿಜೆಪಿ ತನ್ನ ರಾಜ್ಯ ಮುಖ್ಯಸ್ಥರನ್ನಾಗಿ ನೇಮಿಸಿದೆ. ಸದ್ಯ, ಬಂಗಾಳ ಬಿಜೆಪಿಯಲ್ಲಿ ಆಂತರಿಕ ತಿಕ್ಕಾಟವಿದ್ದು, ಅದನ್ನು ಭಟ್ಟಾಚಾರ್ಯ ಬಗೆಹರಿಸಬೇಕಿದೆ. ಜೊತೆಗೆ, ಬಿಜೆಪಿಯನ್ನು ‘ಹೊರಗಿನವರು’ ಎಂದು ಬಿಂಬಿಸುವ ಮಮತಾ ಬ್ಯಾನರ್ಜಿ ಅವರ ಅಸ್ತ್ರವನ್ನು ಎದುರಿಸಬೇಕಿದೆ.

ಈ ಚುನಾವಣೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತರ ಓಲೈಕೆ, ಭ್ರಷ್ಟಾಚಾರ, ಕಾನೂನು-ಸುವ್ಯವಸ್ಥೆ ಹಾಗೂ ಬಂಗಾಳದಲ್ಲಿ ಕೇಂದ್ರ ಯೋಜನೆಗಳನ್ನು ಜಾರಿಗೆ ತರಲು ಟಿಎಂಸಿ ನಿರಾಕರಿಸುತ್ತಿದೆ ಎಂಬ ಆರೋಪಗಳನ್ನೇ ತನ್ನ ಪ್ರಚಾರದ ಸರಕಾಗಿ ಬಳಸಿಕೊಳ್ಳುತ್ತಿದೆ.  

ಈ ಚುನಾವಣೆಯಲ್ಲಿ, ಇತ್ತೀಚೆಗೆ ನಡೆದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಮುಖ ಚರ್ಚೆಯ ವಿಷಯವಾಗಿದೆ. ಈ ವಿಷಯಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ಮಮತಾ, ಕಾನೂನುಬದ್ಧ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಜೆಪಿ ಚುನಾವಣಾ ಆಯೋಗವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬರೋಬ್ಬರಿ 63 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಈ ಮತಗಳು 2021ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವಿನ ಒಟ್ಟು ಮತಗಳ ಅಂತರಕ್ಕಿಂತ ಹೆಚ್ಚಿನದ್ದಾಗಿವೆ. ಆದ್ದರಿಂದ, ಎಸ್‌ಐಆರ್ ಪ್ರಕ್ರಿಯೆಯು ಚುನಾವಣಾ ಫಲಿತಾಂಶದ ಮೇಲೆ ಭಾರಿ ಪರಿಣಾಮ ಬೀರಬಹುದಾದ ಸಾಧ್ಯತೆಗಳಿವೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...