ಬಂಗಾಳ SIR | ಕರಡು ಮತಪಟ್ಟಿ ಬಿಡುಗಡೆ: ಹಕ್ಕು ಕಳೆದುಕೊಂಡ 58 ಲಕ್ಷ ಮತದಾರರು

Date:

2026ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು ‘ಎಸ್‌ಐಆರ್‌’ ನಡೆದಿದೆ. ಮಂಗಳವಾರ ಕರದು ಮತಪಟ್ಟಿಯನ್ನು ಬಿಡುಗಡೆ ಮಾಡಿದೆ. ಬರೋಬ್ಬರಿ 58 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಬೃಹತ್ ಸಂಖ್ಯೆಯ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ.

ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಟ್ಟಿಯು 2025ರ ಮತದಾರರ ಪಟ್ಟಿಯಲ್ಲಿರುವ ಹೆಸರುಗಳಿಗೂ – 2026ರ ಕರಡು ಪಟ್ಟಿಯಲ್ಲಿರುವ ಹೆಸರುಗಳಿಗೂ ಭಾರೀ ಅಂತರವನ್ನು ತೋರಿಸುತ್ತಿದೆ. ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮತಪಟ್ಟಿಯಿಂದ 58 ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಸುದ್ದಿಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.

ಮತಪಟ್ಟಿಯಿಂದ ಹೊರಗುಳಿದ ಮತದಾರರಲ್ಲಿ ಹಲವರು ತಮ್ಮ ನೋಂದಾಯಿತ ವಿಳಾಸಗಳಲ್ಲಿ ಪತ್ತೆಯಾಗಿಲ್ಲ, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ, ಮೃತಪಟ್ಟಿದ್ದಾರೆ ಅಥವಾ ಒಂದಕ್ಕಿಂತ ಹೆಚ್ಚು ಮತದಾರರ ಚೀಟಿಯನ್ನು ಹೊಂದಿದ್ದಾರೆ ಎಂದು ಆಯೋಗವು ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಳಿಸಲಾದ ಮತಗಳು
ಮಾಹಿತಿಯ ಪ್ರಕಾರ, 58.21 ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ. ಅವುಗಳಲ್ಲಿ;
> 24.17 ಲಕ್ಷ ಮೃತ ಮತದಾರರು
> 19.88 ಲಕ್ಷ ಸ್ಥಳಾಂತರಗೊಂಡ ಮತದಾರರು
> 12.20 ಲಕ್ಷ ಕಾಣೆಯಾದ ಮತದಾರರು
> 1.38 ಲಕ್ಷ ನಕಲಿ ಅಥವಾ ಒಂದಕ್ಕಿಂತ ಹೆಚ್ಚು ಚೀಟಿಯುಳ್ಳ ಮತದಾರರು – ಎಂದು ಆಯೋಗ ಗುರುತಿಸಿದೆ.

ಈ ಲೇಖನ ಓದಿದ್ದೀರಾ?: ಎಸ್‌ಐಆರ್ | ‘ಗಡಿಪಾರು’ ಭೀತಿಯಲ್ಲಿದ್ದಾರೆ ಬಂಗಾಳದ ಲೈಂಗಿಕ ಕಾರ್ಯಕರ್ತೆಯರು!

ಕರಡು ಪಟ್ಟಿಗಳನ್ನು ಎಲ್ಲ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ಆದಾಗ್ಯೂ, ಲಾಜಿಸ್ಟಿಕಲ್ ನಿರ್ಬಂಧಗಳಿಂದಾಗಿ ಮುದ್ರಿತ ಪ್ರತಿಗಳು ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಮತ್ತು ಉಪ-ವಿಭಾಗಾಧಿಕಾರಿ (ಎಸ್‌ಡಿಒ) ಕಚೇರಿಗಳಲ್ಲಿ ತಕ್ಷಣ ಲಭ್ಯವಿರುವುದಿಲ್ಲ. ಪಟ್ಟಿಗಳನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಬಿಎಲ್‌ಒಗಳು, ಆನ್‌ಲೈನ್ ಪೋರ್ಟಲ್‌ಗಳು ಹಾಗೂ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಪಡೆದುಕೊಳ್ಳಬುದು ಎಂದು ಆಯೋಗ ಹೇಳಿದೆ.

ಮತಪಟ್ಟಿಯಿಂದ ಹೆಸರುಗಳು ಇಲ್ಲದ್ದಿದ್ದಲ್ಲಿ, ಆಕ್ಷೇಪಣೆಗಳು ಮತ್ತು ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲು ಜನವರಿ 15ರವರೆಗೆ ಅವಕಾಶವಿದೆ ಎಂದು ಆಯೋಗ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...