ಇದು ರ‍್ಯಾಂಕ್‌ಗಿಂತಲೂ ಹೆಚ್ಚು; ಬಿಹಾರ ವಿವಿ ವಿದ್ಯಾರ್ಥಿಗಳಿಗೆ 100ಕ್ಕೆ 257 ಅಂಕ

Date:

ಪರೀಕ್ಷೆಗಳಲ್ಲಿ ಎಲ್ಲ ಪ್ರಶ್ನೆಗಳಿಗೆ ಅತ್ಯುತ್ತಮವಾಗಿ ಉತ್ತರಿಸಿದ ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ ನೀಡಿರುವುದನ್ನು ನೋಡಿದ್ದೇವೆ. ಆದರೆ ಬಿಹಾರದ ಮುಜಫರ್‌ಪುರದಲ್ಲಿರುವ ಬಿಆರ್‌ಎಯು ವಿವಿಯಲ್ಲಿ 100 ಅಂಕಗಳಿಗೆ 257 ಅಂಕ ನೀಡಲಾಗಿದೆ.

ಅದೆ ರೀತಿ ಸ್ನಾತಕೋತ್ತರ (ಪಿಜಿ) ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗೆ 100 ಅಂಕಗಳ ಪರೀಕ್ಷೆಯಲ್ಲಿ 257 ಅಂಕಗಳನ್ನು ನೀಡಲಾಗಿದೆ. ಹಾಗೆಯೇ ಇನ್ನೊಂದು ಪರೀಕ್ಷೆಯಲ್ಲೂ ಇದೇ ರೀತಿ ಅಂಕಗಳನ್ನು ನೀಡಲಾಗಿದೆ.

ಕೇವಲ 30 ಅಂಕಗಳನ್ನು ಹೊಂದಿರುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳಿಗೆ 225 ಅಂಕಗಳನ್ನು ನೀಡಲಾಗಿದೆ. ಈ ದೋಷಗಳನ್ನು ನೋಡಿ ಅನೇಕ ವಿದ್ಯಾರ್ಥಿಗಳು ಗೊಂದಲಕ್ಕೀಡಾದರೆ, ಕೆಲವರಿಗೆ ಮಾತ್ರ ಈ ರೀತಿ ಅಂಕ ನೀಡಿರುವುದನ್ನು ನೋಡಿ ನಮಗ್ಯಾಕೆ ಕಡಿಮೆ ಅಂಕ ನೀಡಲಾಗಿದೆ ಎಂದು ಬೇಸರ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿವಾದ ಒಂದು ಕಡೆಯಾದರೆ, ಯಾವುದೇ ಕಾರಣ ನೀಡದೇ ಕೆಲವು ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ತಡೆಹಿಡಿಯಲಾಗಿದೆ. ಇನ್ನು ಕೆಲವರು ಎಲ್ಲ ಪರೀಕ್ಷೆಗಳಿಗೆ ಹಾಜರಾಗಿ ಉತ್ತಮವಾಗಿ ಪರೀಕ್ಷೆ ಬರೆದಿದ್ದರೂ ಅವರನ್ನು ಅನುತ್ತೀರ್ಣಗೊಳಿಸಲಾಗಿದೆ. ಇದನ್ನೆಲ್ಲ ನೋಡಿ ಗಾಬರಿಯಾಗಿರುವ ವಿದ್ಯಾರ್ಥಿಗಳು ಇದೀಗ ವಿವಿಯ ಕಚೇರಿಗೆ ಭೇಟಿ ನೀಡಿ ತಪ್ಪುಗಳನ್ನು ಸರಿಪಡಿಸಲು ಹರಸಾಹಸ ಪಡುತ್ತಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ

ಬಿಹಾರ ವಿವಿಯಲ್ಲಿ ಈ ರೀತಿ ತಪ್ಪುಗಳಾಗುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಹಲವು ಬಾರಿ ವಿವಿಧ ಸಂದರ್ಭಗಳಲ್ಲಿ ತಪ್ಪುಗಳನ್ನು ಆಗುತ್ತಲೇ ಇವೆ.

ಹಿಂದೆ ಪದವಿಪೂರ್ವ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಪರಿಶೀಲನೆ, ಅಂಕಗಳ ಸೇರ್ಪಡೆ ಮತ್ತು ಫಲಿತಾಂಶಗಳನ್ನು ಪ್ರಕಟಿಸುವಲ್ಲಿ ನಿರ್ಲಕ್ಷ್ಯ ತೋರಿದ ಬಗ್ಗೆ ದೂರುಗಳು ಬಂದಿತ್ತು. ಪದೇ ಪದೇ ತಪ್ಪುಗಳನ್ನು ಮಾಡುವ ಮೂಲಕ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿತ್ತು. ಆದರೆ ಇದೆಲ್ಲ ಸಣ್ಣ ತಪ್ಪುಗಳು ಎಂದು ವಿವಿ ಆಡಳಿತ ಮಂಡಳಿ ಬೇಜವಾಬ್ದಾರಿ ಉತ್ತರ ನೀಡಿತ್ತು. ಇದೀಗ ಈ ಅಂಕ ವಿವಾದದ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಪರೀಕ್ಷಾ ನಿಯಂತ್ರಕ ಪ್ರೊಫೆಸರ್ ರಾಮ್ ಕುಮಾರ್, ಈ ವಿಷಯವು ನಮ್ಮ ಗಮನಕ್ಕೆ ಬಂದಿದೆ ಮತ್ತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿ ಸುಮ್ಮನಾಗಿದ್ದಾರೆ.

ಎಕ್ಸೆಲ್‌ ಶೀಟ್‌ಗೆ ಅಂಕಗಳನ್ನು ನಮೂದಿಸುವಾಗ ಒಮ್ಮೊಮ್ಮೆ ತಪ್ಪುಗಳಾಗುತ್ತವೆ. ತೊಂದರೆಗೊಳಗಾದ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸರಿಪಡಿಸಲಾಗಿದೆ. ಈ ತಪ್ಪು ಮಾಡಿದ ಕಂಪ್ಯೂಟರ್ ಆಪರೇಟರ್‌ಗೆ ಎಚ್ಚರಿಕೆ ನೀಡಿದ್ದೇವೆ. ಎರಡೆರಡು ಬಾರಿ ಅಂಕಗಳನ್ನು ಪರಿಶೀಲಿಸಲು ಸೂಚಿಸಿದ್ದೇವೆ ಎಂದು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ಹೇಳಿಕೆಯನ್ನು ಅಧಿಕಾರಿಗಳು ನೀಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...