ನೂತನ ಭಾರತೀಯ ನ್ಯಾಯ ಸಂಹಿತೆ: ದೆಹಲಿಯ ಬೀದಿ ಬದಿ ವ್ಯಾಪಾರಿ ವಿರುದ್ಧ ಮೊದಲ ಪ್ರಕರಣ ದಾಖಲು!

Date:

ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದಿನಿಂದ (ಜುಲೈ 1) ಜಾರಿಗೆ ಬರುತ್ತಿದ್ದಂತೆ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಬೀದಿ ಬದಿ ವ್ಯಾಪಾರಿ ವಿರುದ್ಧವಾಗಿ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ.

ದೆಹಲಿಯ ರೈಲು ನಿಲ್ದಾಣದ ಫುಟ್‌ ಓವರ್‌ ಬ್ರಿಡ್ಜ್‌ ಅಡಿ ಬೀದಿ ಬದಿ ವ್ಯಾಪಾರ ಮಾಡಿದ್ದಕ್ಕಾಗಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 285ರ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ಪ್ರಕಾರ ಆರೋಪಿಯನ್ನು ಬಿಹಾರದ ಬರ್ಹ್ ನಿವಾಸಿ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.

ಬೀದಿ ಬದಿ ವ್ಯಾಪಾರಿಯು ಮುಖ್ಯರಸ್ತೆಯ ಬಳಿ ತಳ್ಳುಗಾಡಿಯಲ್ಲಿ ತಂಬಾಕು ಮತ್ತು ನೀರನ್ನು ಮಾರಾಟ ಮಾಡುತ್ತಿದ್ದ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ. ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ವ್ಯಾಪಾರಿ ಬಳಿ ತನ್ನ ಗಾಡಿ ತೆಗೆಯುವಂತೆ ಹೇಳಿದಾಗ ಆತ ಅಧಿಕಾರಿಗಳನ್ನು ಕಡೆಗಣಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಬಡ ಬೀದಿ ಬದಿ ವ್ಯಾಪಾರಿ ಮೇಲೆ ದೂರು ದಾಖಲಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದು ನಿಮ್ಮ ನೂತನ ಕಾನೂನಿನ ಸಾಧನೆಯೇ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ನಿಮಗೆ ಬೀದಿ ಬದಿ ವ್ಯಾಪಾರಿಯೇ ಮೊದಲು ಸಿಕ್ಕಿದ್ದೆ ಎಂದು ಕೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ

ಮೂರು ಹೊಸ ಕ್ರಿಮಿನಲ್ ಕಾನೂನುಗಳ ಮಾಹಿತಿ

ಈ ಹಿಂದಿನ ಕ್ರಿಮಿನಲ್ ಕಾನೂನುಗಳಾದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ), ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯ ಬದಲಿಗೆ ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಎಂಬ ಹೊಸ ಕಾನೂನುಗಳನ್ನು ಜಾರಿ ಮಾಡಲಾಗಿದೆ.

ಇದನ್ನು ಓದಿದ್ದೀರಾ?  ಇಂದಿನಿಂದ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೆ

ಈ ಹಿಂದಿನ ಇಂಡಿಯನ್‌ ಪೀನಲ್‌ ಕೋಡ್‌ (ಐಪಿಸಿ) 511 ಸೆಕ್ಷನ್‌ಗಳನ್ನು ಹೊಂದಿದೆ. ಆದರೆ ನೂತನ ಕಾನೂನು ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್‌ಗಳನ್ನು ಹೊಂದಿದೆ. ಸಂಹಿತೆಯಲ್ಲಿ ಒಟ್ಟು 20 ಹೊಸ ಅಪರಾಧಗಳು ಸೇರ್ಪಡೆಯಾಗಿದ್ದು, 33 ಅಪರಾಧಗಳಿಗೆ ಜೈಲು ಶಿಕ್ಷೆಯನ್ನು ಹೆಚ್ಚಿಸಲಾಗಿದೆ.

83 ಅಪರಾಧಗಳಲ್ಲಿ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ. 23 ಅಪರಾಧಗಳಲ್ಲಿ ಕಡ್ಡಾಯ ಕನಿಷ್ಠ ಶಿಕ್ಷೆಯನ್ನು ಪರಿಚಯಿಸಲಾಗಿದೆ. ಆರು ಅಪರಾಧಗಳಲ್ಲಿ ಸಮುದಾಯ ಸೇವೆಯ ದಂಡವನ್ನು ಪರಿಚಯಿಸಲಾಗಿದೆ. ಕಾಯಿದೆಯಲ್ಲಿ 19 ವಿಭಾಗಗಳನ್ನು ರದ್ದುಗೊಳಿಸಲಾಗಿದೆ ಅಥವಾ ತೆಗೆದುಹಾಕಲಾಗಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) 484 ಸೆಕ್ಷನ್‌ಗಳನ್ನು ಹೊಂದಿದೆ. ಆದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್‌ಗಳನ್ನು ಹೊಂದಿದೆ. ಸಂಹಿತೆಯಲ್ಲಿ ಒಟ್ಟು 177 ನಿಬಂಧನೆಗಳನ್ನು ಬದಲಾಯಿಸಲಾಗಿದೆ. ಒಂಬತ್ತು ಹೊಸ ಸೆಕ್ಷನ್‌ಗಳು ಮತ್ತು 39 ಹೊಸ ಸಬ್‌ ಸೆಕ್ಷನ್‌ಗಳನ್ನು ಸೇರಿಸಲಾಗಿದೆ.

44 ಹೊಸ ನಿಬಂಧನೆಗಳು ಮತ್ತು ಸ್ಪಷ್ಟೀಕರಣಗಳನ್ನು ಸೇರಿಸಲಾಗಿದೆ. 35 ಸೆಕ್ಷನ್‌ಗಳಿಗೆ ಟೈಮ್‌ಲೈನ್‌ಗಳನ್ನು ಸೇರಿಸಲಾಗಿದೆ. ಸಂಹಿತೆಯಲ್ಲಿ ಒಟ್ಟು 14 ವಿಭಾಗಗಳನ್ನು ರದ್ದುಪಡಿಸಲಾಗಿದೆ ಮತ್ತು ತೆಗೆದುಹಾಕಲಾಗಿದೆ.

ಭಾರತೀಯ ಸಾಕ್ಷ್ಯ ಕಾಯಿದೆಯಲ್ಲಿ 167 ನಿಬಂಧನೆಗಳು ಇರುತ್ತದೆ. ಅದರ ಬದಲಾಗಿ ಭಾರತೀಯ ಸಾಕ್ಷ್ಯ ಅಧಿನಿಯಮ 170 ನಿಬಂಧನೆಗಳನ್ನು ಹೊಂದಿರುತ್ತದೆ. ಒಟ್ಟು 24 ನಿಬಂಧನೆಗಳನ್ನು ಬದಲಾಯಿಸಲಾಗಿದೆ. ಎರಡು ಹೊಸ ನಿಬಂಧನೆಗಳು ಮತ್ತು ಆರು ಉಪ-ನಿಬಂಧನೆಗಳನ್ನು ಸೇರಿಸಲಾಗಿದೆ. ಆರು ನಿಬಂಧನೆಗಳನ್ನು ಅಧಿನಿಯಮದಲ್ಲಿ ರದ್ದುಗೊಳಿಸಲಾಗಿದೆ ಅಥವಾ ಅಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...