ಭೀಮಾ ಕೋರೆಗಾಂವ್ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್, ಸುಧೀರ್ ಧಾವಳೆಗೆ ಜಾಮೀನು

Date:

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಪಿಎ ಅಡಿಯಲ್ಲಿ ಬಂಧನಕ್ಕೊಳಗಾಗಿ ಹಲವು ವರ್ಷಗಳಿಂದ ಜೈಲಿನಲ್ಲಿದ್ದ ಮಾನವ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್ ಮತ್ತು ಸುಧೀರ್ ಧವಳೆ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ವಿಲ್ಸನ್ ಮತ್ತು ಸುಧೀರ್ ಧವಳೆ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ ಎಎಸ್ ಗಡ್ಕರಿ ಮತ್ತು ನ್ಯಾಯಮೂರ್ತಿ ಕಮಲ್ ಖಾತಾ ಅವರಿದ್ದ ಪೀಠವು ದೀರ್ಘಕಾಲದ ಸೆರೆವಾಸ, ಅಂತಿಮ ಚಾರ್ಜ್‌ಶೀಟ್ ಸಲ್ಲಿಸುವಲ್ಲಿ ತನಿಖಾಧಿಕಾರಿಗಳ ವೈಫಲ್ಯ ಹಾಗೂ 300ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಯ ಅಂಶಗಳನ್ನು ಪರಿಗಣಿಸಿ ಜಾಮೀನು ನೀಡಿದೆ. ಪ್ರತಿ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.

2018ರ ಜನವರಿ 1ರಂದು ಭೀಮಾ ಕೋರೆಗಾಂವ್ ಯುದ್ಧದ 200ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಗಾಗಿ ‘ಎಲ್ಗರ್ ಪರಿಷತ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ, ಕೆಲವು ದುಷ್ಕರ್ಮಿಗಳು ಹಿಂಸಾಚಾರ ನಡೆಸಿದ್ದರು. ಆದರೆ, ಕಾರ್ಯಕ್ರಮವನ್ನು ಆಯೋಜಿಸಿದ್ದವರ ವಿರುದ್ಧವೇ ಕಠಿಣ ಎಯುಪಿಎ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಲಾಗಿತ್ತು. ವಿಲ್ಸನ್ ಮತ್ತು ಧವಳೆ ಸೇರಿದಂತೆ 16 ಕಾರ್ಯಕರ್ತರು ಜೈಲು ಪಾಲಾಗಿದ್ದರು. ಅವರಲ್ಲಿ, ಹಿರಿಯ ಹೋರಾಟಗಾರ ಸ್ಟ್ಯಾನ್‌ ಸ್ವಾಮಿ ಅವರು ಜೈಲಿನಲ್ಲಿ ಸರಿಯಾದ ಮೂಲಸೌಕರ್ಯಗಳು ಹಾಗೂ ಆರೋಗ್ಯ ಸೌಲಭ್ಯ ದೊರೆಯದೆ 2021ರ ಜುಲೈ 5ರಂದು ಜೈಲಿನಲ್ಲಿಯೇ ಸಾವನ್ನಪ್ಪಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಗರ್ ಪರಿಷತ್‌ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ಕಾರ್ಯಕ್ರಮದ ಆಯೋಜಕರಾಗಿದ್ದ ಸುಧಾ ಭಾರದ್ವಾಜ್, ಅರುಣ್ ಫೆರೇರಾ, ಸುರೇಂದ್ರ ಗಡ್ಲಿಂಗ್, ಮಹೇಶ್ ರಾವುತ್, ಶೋಮಾ ಸೇನ್, ರೋನಾ ವಿಲ್ಸನ್, ಸುಧೀರ್ ಧವಳೆ, ವೆರ್ನಾನ್ ಗೊನ್ಸಾಲ್ವಿಸ್, ವರವರ ರಾವ್, ಗೌತಮ್ ನವ್ಲಾಖಾ, ಆನಂದ್ ತೇಲ್ತುಂಬ್ಡೆ, ಹನಿ ಬಾಬು, ಸ್ಟ್ಯಾನ್‌ ಸ್ವಾಮಿ, ಸಾಗರ್ ತಾತ್ಯಾರಾವ್ ಗೋರಖೆ, ರಮೇಶ್ ಮುರಳೀಧರ್ ಗೈಚೋರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಲಾಗಿತ್ತು.

ರೋನಾ ವಿಲ್ಸನ್‌ ಅವರು ರಾಜಕೀಯ ಖೈದಿಗಳ ಬಿಡುಗಡೆ ಸಮಿತಿಯ ಸದಸ್ಯರಾಗಿದ್ದರು. ಅವರನ್ನು ಎಲ್ಗರ್ ಪರಿಷತ್‌ ವೇಳೆ ನಡೆದ ಗಲಭೆ ಪ್ರಕರಣದಲ್ಲಿ 2018ರ ಜೂನ್‌ 6ರಂದು ಬಂಧಿಸಲಾಗಿತ್ತು. ಬಳಿಕ, ಅವರು ಮಾವೋವಾದಿ ಹೋರಾಟಗಾರರೊಂದಿಗೆ ಸಂಬಂಧ ಹೊಂದಿದ್ದಾರೆ. ಪ್ರಧಾನಿ ಮೋದಿಯ ಹತ್ಯೆಗೆ ಸಂಚು ಎಣೆಯುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಮತ್ತೊಂದು ಪ್ರಕರಣ ದಾಖಲಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...