ಬೀದರ್‌ | ಅತಿವೃಷ್ಟಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಸಂಸದ ಸಾಗರ್‌ ಖಂಡ್ರೆ ಒತ್ತಾಯ

Date:

ಅತಿವೃಷ್ಟಿಯಿಂದ ಹಾನಿಗೀಡಾದ ಬೆಳೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಹಾರ ಮಾನದಂಡಗಳನ್ನು ತಕ್ಷಣವೇ ಪರಿಷ್ಕರಿಸುವಂತೆ ಮತ್ತು ಬೆಳೆ ಕಳೆದುಕೊಂಡ ರೈತರಿಗೆ ಹೆಚ್ಚುವರಿ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಸಂಸದ ಸಾಗರ್‌ ಖಂಡ್ರೆ ಆಗ್ರಹಿಸಿದರು.

ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ಕನ್ನಡದಲ್ಲಿ ಮಾತನಾಡಿದ ಅವರು, ʼಬೀದರ್‌ ಕ್ಷೇತ್ರದಲ್ಲಿ ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ತೀವ್ರ ಹಾನಿಯ ಬಗ್ಗೆ ವಿವರಿಸಿ ಗಮನ ಸೆಳೆದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ಒದಗಿಸಲಾಗುವ ಪ್ರಸ್ತುತ ಪರಿಹಾರ ಅಸಮರ್ಪಕವಾಗಿದೆ. ನೀರಾವರಿ ಭೂಮಿಗೆ ಪ್ರತಿ ಎಕರೆಗೆ 7,000 ಮತ್ತು ನೀರಾವರಿ ಅಲ್ಲದ ಭೂಮಿಗೆ ಪ್ರತಿ ಎಕರೆಗೆ 3,500 ಮೊತ್ತವು ರೈತರ ನಷ್ಟಕ್ಕೆ ಎಂದಿಗೂ ಸಾಲದುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರವು ಅತಿವೃಷ್ಟಿಯಿಂದ ಹಾನಿಗೀಡಾದ ಮುಂಗಾರು ಹಂಗಾಮಿನ ಬೆಳೆಗೆ ಈಗಾಗಲೇ ಸಂತ್ರಸ್ತ ರೈತರಿಗೆ ಹೆಚ್ಚುವರಿ ಆರ್ಥಿಕ ನೆರವು ನೀಡಲು ವಿಶೇಷ ಪ್ಯಾಕೇಜ್ ಘೋಷಿಸಿದೆ. ರೈತರ ಹಿತವನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಪರಿಹಾರ ಸಂಬಂಧಿತ ನಿಯಮಾವಳಿಗಳನ್ನು ಮರು ಪರಿಶೀಲಿಸಿ, ಹೆಚ್ಚುವರಿ ನೆರವು ನೀಡಬೇಕುʼ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | ಅಕ್ರಮ ಮದ್ಯ ಮಾರಾಟ ತಡೆಗೆ ಕೆಆರ್‌ಎಸ್ ಒತ್ತಾಯ

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಸಂಸದರು, ಪಿಎಂ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ವಿಮಾ ಕಂಪನಿಗಳು ಸಕಾಲಕ್ಕೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ರೈತರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ರೈತರಿಗೆ ನ್ಯಾಯಸಮ್ಮತ ಮತ್ತು ಸಮಯಕ್ಕೆ ಸರಿಯಾದ ಬೆಳೆ ವಿಮೆ ದೊರಕುವಂತೆ ಕೇಂದ್ರ ಸರ್ಕಾರ ಕ್ರಮ ವಹಿಸಬೇಕೆಂದು ಸಂಸದ ಸಾಗರ್ ಖಂಡ್ರೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆ.ಸಿ ವ್ಯಾಲಿ ನೀರು ಸುರಕ್ಷಿತ: ಮಣ್ಣಿನ ಗುಣಮಟ್ಟವೂ ವೃದ್ಧಿ  

'ಕೆ.ಸಿ ವ್ಯಾಲಿ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ಅಂತರ್ಜಲ...

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...