ರಾಯ್‌ಬರೇಲಿ| ರಾಹುಲ್‌ ಗಾಂಧಿ ಕುಳಿತ ಕ್ಷೌರದಂಗಡಿಯ ಕುರ್ಚಿಗೆ ಭಾರೀ ಬೇಡಿಕೆ!

Date:

ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿರುವ ಕ್ಷೌರದಂಗಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷೌರ ಮಾಡಿಸಿಕೊಂಡ ಬಳಿಕ ಈಗ ರಾಹುಲ್‌ ಗಾಂಧಿ ಕುಳಿತ ಕುರ್ಚಿಗೆ ಬೇಡಿಕೆ ಭಾರೀ ಹೆಚ್ಚಾಗಿದೆ. ರಾಹುಲ್ ಗಾಂಧಿ ಭೇಟಿ ಬಳಿಕ ಈ ಕ್ಷೌರದಂಗಡಿಗೆ ಜನರ ದೌಡು ಕೂಡಾ ಹೆಚ್ಚಾಗಿದೆ.

ರಾಯ್‌ಬರೇಲಿಯ ಲಾಲ್‌ಗಂಜ್‌ನಲ್ಲಿರುವ ನ್ಯೂ ಮುಂಬಾ ದೇವಿ ಹೇರ್ ಕಟಿಂಗ್ ಸಲೂನ್‌ಗೆ ಸೋಮವಾರ ರಾಹುಲ್ ಗಾಂಧಿ ಅವರು ಆಕಸ್ಮಿಕವಾಗಿ ಭೇಟಿ ನೀಡಿ ಗಡ್ಡ ಟ್ರಿಮ್ ಮಾಡುವಂತೆ ತಿಳಿಸಿದ್ದಾರೆ. ಜನಪ್ರಿಯ ರಾಜಕಾರಣಿಯೊಬ್ಬರು ತನ್ನ ಕ್ಷೌರದಂಗಡಿಗೆ ಬಂದಿರುವುದು ನೋಡಿ ಮಾಲೀಕ ಮಿಥುನ್ ಕುಮಾರ್ ದಂಗಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮಿಥುನ್ ಕುಮಾರ್ ಅವರು, “ಇಂತಹ ದೊಡ್ಡ ನಾಯಕ ನನ್ನ ಅಂಗಡಿಗೆ ಬರುತ್ತಾರೆ ಎಂದು ನಾನು ಊಹಿಸಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ | ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ಇನ್ನು ಕ್ಷೌರದಂಗಡಿಯಲ್ಲಿ ಕೆಲಸ ಮಾಡುವ ಅಮನ್‌ಕುಮಾರ್ ಮಾತನಾಡಿ, “ರಾಹುಲ್ ಗಾಂಧಿ ಅವರು ನಮ್ಮ ಕ್ಷೌರದಂಗಡಿಗೆ ಬಂದು ಕ್ಷೌರ ಮಾಡಿಸಿಕೊಂಡ ಬಳಿಕ ನಮ್ಮ ಗ್ರಾಹಕರ ಸಂಖ್ಯೆ ಹೆಚ್ಚಾಗಿದೆ. ಮೊದಲು 10 ಜನರು ಬರುತ್ತಿದ್ದರೆ ಈಗ 15 ಜನರು ಬರುತ್ತಿದ್ದಾರೆ. ನಮಗೆ ಸಾಕಷ್ಟು ಕರೆಗಳು ಕೂಡಾ ಬರುತ್ತಿದೆ” ಎಂದು ತಿಳಿಸಿದ್ದಾರೆ.

ಪ್ರಸ್ತುತ ಲೋಕಸಭೆ ಚುನಾವಣೆ ಕುರಿತು ಕಾಂಗ್ರೆಸ್‌ ನಾಯಕ ಮಾತನಾಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮನ್‌ಕುಮಾರ್‌, “ನಮಗೆ ಇಷ್ಟವಾದ ಪಕ್ಷಕ್ಕೆ ಮತ ಹಾಕುವಂತೆ ಹೇಳಿದ್ದಾರೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಕಿಕ್ಕಿರಿದು ತುಂಬಿದ ಬಸ್​ನಲ್ಲಿ ರಾಹುಲ್ ಗಾಂಧಿ ಪ್ರಯಾಣ | Rahul Gandhi | Telangana

ರಕ್ಷಣಾ ಪಡೆಗಳಿಗೆ ಅಗ್ನಿವೀರ್ ನೇಮಕಾತಿ ಯೋಜನೆಯ ಬಗ್ಗೆ ಮಾತನಾಡಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಈ ಯೋಜನೆಯನ್ನು ತೆಗೆದುಹಾಕಲಾಗುವುದು ಎಂದು ಭರವಸೆ ನೀಡಿರುವುದು ವಿಡಿಯೋದಲ್ಲಿ ನಾವು ನೋಡಬಹುದು.

ಹಾಗೆಯೇ ರಾಹುಲ್ ಗಾಂಧಿ ಅವರು ಹೊಸ ಹೇರ್‌ ಸ್ಟೈಲ್‌ಗಳ ಬಗ್ಗೆ ಅಂಗಡಿ ಮಾಲೀಕ ಮಿಥುನ್ ಕುಮಾರ್ ಬಳಿ ಕೇಳಿದ್ದಾರೆ. ಅವರ ಜೀವನದ ಬಗ್ಗೆ, ವ್ಯಾಪಾರದ ಬಗ್ಗೆ ಪ್ರಶ್ನಿಸಿದ್ದಾರೆ. ಜೊತೆಗೆ ಪ್ರತಿ ಬಡ ಕುಟುಂಬಕ್ಕೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿ ನೀಡುವ ಮಹಾಲಕ್ಷ್ಮೀ ಯೋಜನೆ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...