ಮತಕಳ್ಳತನ ಅತೀ ದೊಡ್ಡ ದೇಶ ವಿರೋಧಿ ಕೃತ್ಯ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

Date:

ಲೋಕಸಭೆಯಲ್ಲಿ ಮಂಗಳವಾರ ನಡೆದ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ ಹಾಗೂ ಚುನಾವಣಾ ಸುಧಾರಣೆಗಳ ಕುರಿತ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“ಮತಗಳ್ಳತನ ಅತೀ ದೊಡ್ಡ ದೇಶ ವಿರೋಧಿ ಕೃತ್ಯ. ಇದನ್ನು ಮಹಾತ್ಮ ಗಾಂಧೀಜಿ ಕೂಡ ಪ್ರತಿಪಾದಿಸಿದ್ದರು. ಹರಿಯಾಣದ ಮತದಾರರ ಪಟ್ಟಿಯಲ್ಲಿ ಒಬ್ಬ ವಿದೇಶಿ ಮಹಿಳೆಯ ಹೆಸರು 22 ಬಾರಿ ಕಾಣಿಸಿಕೊಂಡಿತ್ತು. ಈ ಕಳ್ಳತನವನ್ನು ಕೇಂದ್ರ ಚುನಾವಣಾ ಆಯೋಗ ಕೂಡ ಖಚಿತಪಡಿಸಿದೆ. ಕರ್ನಾಟಕ, ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ದೇಶದ ಬಹುತೇಕ ಕಡೆ ಮತಕಳ್ಳತನವಾಗಿರುವುದರ ಬಗ್ಗೆ ನಾವು ಪುರಾವೆ ಸಹಿತ ಬಹಿರಂಗಪಡಿಡಿದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

“ಭಾರತೀಯ ಪ್ರಜಾಪ್ರಭುತ್ವಕ್ಕೆ ಹಾನಿ ಮಾಡಲು ಬಿಜೆಪಿ ಚುನಾವಣಾ ಆಯೋಗವನ್ನು ನಿರ್ದೇಶಿಸುತ್ತಿದೆ ಮತ್ತು ಬಳಸುತ್ತಿದೆ. ಇಸಿಐ ಅಧಿಕಾರದಲ್ಲಿರುವವರೊಂದಿಗೆ ಚುನಾವಣೆಯನ್ನು ರೂಪಿಸಲು ಕುಮ್ಮಕ್ಕು ನೀಡುತ್ತಿದೆ” ಎಂದು ಹೇಳಿದ ಅವರು, ಪ್ರಧಾನಿ ಮತ್ತು ಗೃಹ ಸಚಿವರು ಚುನಾವಣಾ ಆಯುಕ್ತರನ್ನು ನೇಮಿಸುವಲ್ಲಿ ಏಕೆ ಅಷ್ಟೊಂದು ಆಸಕ್ತಿ ವಹಿಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಗಳು ಬದಲಾದರೂ ಉತ್ತರ ಕರ್ನಾಟಕದ ಜನರ ಬದುಕು ಬದಲಾಗಲಿಲ್ಲವೇಕೆ?

“ಪ್ರಜಾಪ್ರಭುತ್ವದ ಪ್ರಮುಖ ಅಂಗಗಳಾದ ಚುನಾವಣಾ ಆಯೋಗ (ಇಸಿಐ), ಜಾರಿ ನಿರ್ದೇಶನಾಲಯ (ಇಡಿ), ಎನ್‌ಐಎ ಮತ್ತು ಸಿಬಿಐನಂತಹ ಸಂಸ್ಥೆಗಳು ಆರ್‌ಎಸ್‌ಎಸ್‌ ಮತ್ತು ಬಿಜೆಪಿಯಿಂದ ಪ್ರಭಾವಿತವಾಗಿವೆ ಅಥವಾ ವಶಪಡಿಸಿಕೊಳ್ಳಲ್ಪಟ್ಟಿವೆ ಎಂದು ರಾಹುಲ್‌ ಗಾಂಧಿ ನೇರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಚುನಾವಣಾ ಆಯೋಗದ ಮುಕ್ತ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರನ್ನು ತೆಗೆದುಹಾಕಲು ನರೇಂದ್ರ ಮೋದಿ ಸರ್ಕಾರ ಏಕೆ ಉದ್ದೇಶಿಸಿದೆ. ನಿಮಗೆ ಸಿಜೆಐ ಮೇಲೆ ನಂಬಿಕೆ ಇಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.

ಸಮಾನತೆ ನಂಬದ ಆರ್‌ಎಸ್‌ಎಸ್

“ಆರ್‌ಎಸ್‌ಎಸ್‌ ಸಮಾನತೆಯನ್ನು ನಂಬುವುದಿಲ್ಲ, ಅವರು ಶ್ರೇಣೀಕೃತ ವ್ಯವಸ್ಥೆಯನ್ನು ನಂಬುತ್ತಾರೆ. ಅದರ ಉನ್ನತ ಸ್ಥಾನದಲ್ಲಿ ತಾವಿರಬೇಕು ಎಂದು ಭಾವಿಸುತ್ತಾರೆ. ಇದೇ ರೀತಿ, ದೇಶದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಆಯ್ಕೆಯು ಅರ್ಹತೆಗಿಂತ ಹೆಚ್ಚಾಗಿ ಒಂದು ನಿರ್ದಿಷ್ಟ ಸಂಸ್ಥೆಯೊಂದಿಗೆ ನಂಟು ಹೊಂದಿದೆ” ಎಂದು ರಾಹುಲ್ ಗಾಂಧಿ ಆರ್‌ಎಸ್‌ಎಸ್‌ ವಿರುದ್ಧ ಟೀಕಿಸಿದರು.

“ಮಹಾತ್ಮ ಗಾಂಧಿ ಅವರ ಖಾದಿ ಕೇವಲ ಬಟ್ಟೆಯಲ್ಲ, ಅದು ಭಾರತದ ಜನರ ಅಭಿವ್ಯಕ್ತಿ. ನಮ್ಮ ರಾಷ್ಟ್ರದ 150 ಕೋಟಿ ಜನರ ವಸ್ತ್ರವಾಗಿದೆ. ದೇಶದ ಯಾವುದೇ ಸಾಧನೆಗಳು ಅಸ್ತಿತ್ವದಲ್ಲಿರಲು ಮತದಾನವೇ ಕಾರಣ” ಎಂದು ರಾಹುಲ್‌ ಗಾಂಧಿ ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...