ಬಿಹಾರ | ಸಿಡಿಲು ಬಡಿದು ಮತ್ತೆ 12 ಮಂದಿ ಸಾವು, ಮೃತರ ಸಂಖ್ಯೆ 40ಕ್ಕೆ ಏರಿಕೆ

Date:

ಬಿಹಾರದಲ್ಲಿ ಮತ್ತೆ 12 ಮಂದಿ ಸಿಡಿಲು ಬಡಿದು ಸಾವು ಕಂಡಿದ್ದು ಈ ವರ್ಷ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬಿಹಾರದ ಏಳು ಜಿಲ್ಲೆಗಳಲ್ಲಿ ಸಿಡಿಲು ಬಡಿದು 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಬಿಹಾರದ ಏಳು ಜಿಲ್ಲೆಗಳಲ್ಲಿ ಈ 12 ಸಾವುಗಳು ವರದಿಯಾಗಿವೆ. ಜಮುಯಿ ಮತ್ತು ಕೈಮೂರ್ ಜಿಲ್ಲೆಗಳಿಂದ ತಲಾ ಮೂರು ಸಾವುಗಳು ವರದಿಯಾಗಿದ್ದರೆ, ರೋಹ್ಟಾಸ್‌ನಲ್ಲಿ ಎರಡು ಸಾವುಗಳು ಸಂಭವಿಸಿದೆ. ಇನ್ನು ಸಹರ್ಸಾ, ಸರನ್, ಭೋಜ್‌ಪುರ ಮತ್ತು ಗೋಪಾಲ್‌ಗಂಜ್‌ನಲ್ಲಿ ತಲಾ ಒಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ?  ಬೆಂಗಳೂರಿನ ಹಲವೆಡೆ ಭಾರೀ ಮಳೆ; ಹಾಸನದಲ್ಲಿ ಸಿಡಿಲು ಬಡಿದು ಮೂವರು ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

12 ಸಾವು ಬಳಿಕ ಬಿಹಾರದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದವರ ಸಂಖ್ಯೆ ಈ ವರ್ಷ 40ಕ್ಕೆ ಏರಿದೆ. ಇನ್ನು ಶನಿವಾರ ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು 10 ಜನರು ಸಾವನ್ನಪ್ಪಿದ್ದರು. ನಳಂದ, ನಾವಡಾ, ವೈಶಾಲಿ, ಭಾಗಲ್ಪುರ್, ಸಹರ್ಸಾ, ರೋಹ್ತಾಸ್, ಸರನ್, ಜಮುಯಿ, ಭೋಜ್‌ಪುರ ಮತ್ತು ಗೋಪಾಲ್‌ಗಂಜ್ ಜಿಲ್ಲೆಗಳಲ್ಲಿ ಶನಿವಾರ ಸಾವು ಸಂಭವಿಸಿದೆ.

ಕಳೆದ ಐದು ದಿನಗಳಲ್ಲಿ ರಾಜ್ಯದಲ್ಲಿ ಸಿಡಿಲು ಬಡಿದು ಪ್ರತ್ಯೇಕ ಘಟನೆಗಳಲ್ಲಿ 25 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ.

ಭಾರೀ ಮಳೆಯ ನಂತರ ಮಿಂಚಿನ ಸಮಯದಲ್ಲಿ ಜನರು ಮನೆಯೊಳಗೆ ಇರುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಡಿಲು ಬಡಿದು ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...