ಬಿಹಾರ | ಕಳ್ಳಭಟ್ಟಿ ಸೇವಿಸಿ 20 ಮಂದಿ ದಾರುಣ ಸಾವು

Date:

ಕಳ್ಳಭಟ್ಟಿ ಸೇವಿಸಿ 20 ಮಂದಿ ಹತರಾಗಿರುವ ದುರ್ಘಟನೆ ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ನಡೆದಿದೆ. ಇನ್ನೂ ಹಲವರು ಅಸ್ವಸ್ಥಗೊಂಡಿದ್ದಾರೆ ಎಂದೂ ಹೇಳಲಾಗಿದೆ.

ಸಿವಾನ್ ಜಿಲ್ಲೆಯ ಮಾಧಾರ್ ಗ್ರಾಮವೊಂದರಲ್ಲಿಯೇ ಕಳ್ಳಭಟ್ಟಿ ಮದ್ಯ ಸೇವಿಸಿ ಒಂಬತ್ತು ಮಂದಿ ಸಾವನ್ನಪಿದ್ದಾರೆ. ಅಲ್ಲದೆ, ಸುತ್ತಮುತ್ತಲಿನ ಗ್ರಾಮಗಳ 11 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ರಾತ್ರಿ, ಮಾಧಾರ್‌ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಕಳ್ಳಭಟ್ಟಿ ಮದ್ಯವನ್ನು ಅದೇ ಗ್ರಾಮದವರೂ ಸೇರಿದಂತೆ ಹಲವರು ಸೇವಿಸಿದ್ದಾರೆ. ಬಳಿಕ, ಅವರೆಲ್ಲರಿಗೂ ದೃಷ್ಟಿನಾಶ, ವಾಕರಿಕೆ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ. ಅವರಲ್ಲಿ ಆರು ಮಂದಿ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ. 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಘಾರ್ ಮತ್ತು ಔರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿರುವ ಬಗ್ಗೆ ಆರಂಭದಲ್ಲಿ ಮಾಹಿತಿ ದೊರೆಯಿತು. ತಕ್ಷಣವೇ ಸ್ಥಳಕ್ಕೆ ಅಧಿಕಾರಗಳ ತಂಡವನ್ನು ಕಳುಹಿಸಲಾಗಿದ್ದು, 12 ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ” ಎಂದು ಸಿವಾನ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಎರಡೂ ಜಿಲ್ಲೆಯಲ್ಲಿ ಆಡಳಿತ ಮಂಡಳಿಗಳು ತನಿಖೆ ನಡೆಸುತ್ತಿವೆ. ಮಘಾರ್ ಮತ್ತು ಔರಿಯಾ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಚೌಕಿದಾರ್‌ರನ್ನು ಅಮಾನತುಗೊಳಿಸಿ ಪಂಚಾಯತ್ ರಾಜ್ ಇಲಾಖೆ ಆದೇಶಿಸಿದೆ.

ಬಿಹಾರದಲ್ಲಿ 2016ರ ಏಪ್ರಿಲ್‌ನಿಂದಲೇ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿ ಬಿಹಾರ ಸರ್ಕಾರ ಆದೇಶಿಸಿದೆ. ಆದಾಗ್ಯೂ, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಿವೆ. 2016ರಿಂದ ಈವರೆಗೆ ಅಕ್ರಮ ಮದ್ಯ ಸೇವನೆಯಿಂದ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಬಿಹಾರ ಸರ್ಕಾರ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...