ಬಿಹಾರ | ಖಾಸಗಿ ಶಾಲೆ ಮೇಲೆ ಬಾಂಬ್ ದಾಳಿ; ಸೇಡಿನ ಕೃತ್ಯ ಎಂದ ಪೊಲೀಸರು

Date:

ಖಾಸಗಿ ಶಾಲೆಯೊಂದರ ಮೇಲೆ ಜನರ ಗುಂಪೊಂದು ಕಚ್ಛಾ ಬಾಂಬ್‌ ಮತ್ತು ಕಲ್ಲು ತೂರಾಟ ನಡೆಸಿರುವ ಘಟನೆ ಬಿಹಾರದ ಹಾಜಿಪುರ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹತ್ಸರ್‌ಗಂಜ್ ಪ್ರದೇಶದಲ್ಲಿರುವ ‘ದೆಹಲಿ ಪಬ್ಲಿಕ್ ಸ್ಕೂಲ್’ ಮೇಲೆ ಗುಂಪೊಂದು ಕಚ್ಛಾ ಬಾಂಬ್‌ಗಳನ್ನು ಎಸೆದು, ದಾಂಧಲೆ ನಡೆಸಿದೆ. ದುಷ್ಕರ್ಮಿಗಳು ಗ್ರೆನೇಡ್ ತರಹದ ವಸ್ತುಗಳಿಂದ ಮನೆಯಲ್ಲಿ ತಯಾರಿಸಿದ ಬಾಂಬ್‌ಗಳಿಂದ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಘಟನೆಯ ದೃಶ್ಯಗಳು ಶಾಲೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ, ಶಾಲೆಯ ಗೇಟ್‌ ಹೊರಗೆ ದುಷ್ಕರ್ಮಿಗಳ ಗುಂಪೊಂದು ಬಾಂಬ್‌ಗಳನ್ನು ಎಸೆದು ಸ್ಪೋಟಿಸಿದೆ. ಅಲ್ಲದೆ, ಕಲ್ಲು ತೂರಾಟ ನಡೆಸಿ ಶಾಲೆಯ ಬಾಗಿಲು, ಕಿಟಕಿಗಳಿಗೆ ಹಾನಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆ ನಡೆಯುತ್ತಿದೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ವಿಡಿಯೋ ಆಧರಿಸಿ, ಆರೋಪಿಗಳನ್ನು ಗುರುತಿಸಲಾಗುತ್ತಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸುತ್ತೇವೆ” ಎಂದು ಹಾಜಿಪುರ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಅಬು ಜಾಫರ್ ಇಮಾಮ್ ಹೇಳಿದ್ದಾರೆ.

ಈ ದಾಳಿಯು ಸೇಡಿನ ಕೃತ್ಯವೆಂದು ಪೊಲೀಸರು ಶಂಕಿಸಿದ್ದಾರೆ. ಇತ್ತೀಚೆಗೆ, ಶಾಲೆಯಲ್ಲಿ ಚಾಲಕನೊಬ್ಬನನ್ನು ಕೆಲಸದಿಂದ ತೆರೆದುಹಾಕಲಾಗಿತ್ತು. ಕೆಲಸ ಕಳೆದುಕೊಂಡ ಸಿಟ್ಟಿನಲ್ಲಿ ಆ ಚಾಲಕ ಮತ್ತು ಇತರರರು ಶಾಲೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಅನುಮಾನಿಸಿದ್ದಾರೆ. ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...