ಬಿಹಾರ| ಮತ್ತೊಂದು ಸೇತುವೆ ಕುಸಿತ; ಆಡಿಟ್ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

Date:

ಬಿಹಾರದಲ್ಲಿ ಗುರುವಾರ ಮತ್ತೊಂದು ಸೇತುವೆ ಕುಸಿತವಾದ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ನಲ್ಲಿ ಬಿಹಾರ ಸೇತುವೆ ಕುಸಿತ ಪ್ರಕರಣಗಳಲ್ಲಿ ಸೇತುವೆಗಳ ಲೆಕ್ಕಪರಿಶೋಧನೆಗಾಗಿ ಕೋರಿ ಅರ್ಜಿ ಸಲ್ಲಿಸಲಾಗಿದೆ.

ಬಿಹಾರದಲ್ಲಿ ಬುಧವಾರ ಮೂರು ಸೇತುವೆಗಳು ಕುಸಿತವಾಗಿದ್ದು ಕಳೆದ 15 ದಿನಗಳಲ್ಲಿ ನಡೆದ ಸೇತುವೆ ಕುಸಿತ ಪ್ರಕರಣಗಳು 9ಕ್ಕೆ ಏರಿಕೆಯಾಗಿತ್ತು. ಗುರುವಾರ ಮತ್ತೊಂದು ಸೇತುವೆ ಕುಸಿತವಾಗಿದ್ದು, ಪ್ರಕರಣಗಳ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ.

ಸರನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆರಡು ಸೇತುವೆ ಕುಸಿತ ಉಂಟಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಹೇಳಿದ್ದಾರೆ. ಈ ಕಟ್ಟಡವನ್ನು 15 ವರ್ಷಗಳ ಹಿಂದೆ ಸ್ಥಳೀಯ ಅಧಿಕಾರಿಗಳು ನಿರ್ಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಡಕಿ ನದಿಯ ಮೇಲೆ ನಿರ್ಮಿಸಲಾದ ಸೇತುವೆಯು ಬನೇಯಪುರ ಬ್ಲಾಕ್‌ನಲ್ಲಿದೆ. ಸರನ್‌ನ ಹಲವಾರು ಹಳ್ಳಿಗಳನ್ನು ಸಿವಾನ್‌ನೊಂದಿಗೆ ಈ ಸೇತುವೆ ಸಂಪರ್ಕಿಸುತ್ತದೆ.

ಇದನ್ನು ಓದಿದ್ದೀರಾ?  ಬಿಹಾರ| ಮತ್ತೆ ಮೂರು ಸೇತುವೆ ಕುಸಿತ; 15 ದಿನಗಳಲ್ಲಿ ಒಂಬತ್ತು ಪ್ರಕರಣ!

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ, “ನಾನು ಸ್ಥಳಕ್ಕೆ ಹೋಗುತ್ತಿದ್ದೇನೆ. ಜಿಲ್ಲಾಡಳಿತದ ಇತರ ಹಲವಾರು ಅಧಿಕಾರಿಗಳು ಈಗಾಗಲೇ ಅಲ್ಲಿಗೆ ತಲುಪಿದ್ದಾರೆ. ಸೇತುವೆ ಕುಸಿತಕ್ಕೆ ನಿಖರವಾದ ಕಾರಣವನ್ನು ಇನ್ನೂ ತಿಳಿದುಬಂದಿಲ್ಲ. ಆದರೆ ಇತ್ತೀಚೆಗಷ್ಟೇ ಹೂಳು ತೆಗೆಯುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ” ಎಂದು ಪಿಟಿಐಗೆ ಹೇಳಿದ್ದಾರೆ.

ಸೇತುವೆಗಳ ಲೆಕ್ಕಪರಿಶೋಧನೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ

ಎರಡು ವಾರಗಳಲ್ಲಿ ಒಂದಾದ ಬಳಿಕ ಒಂದು ಸೇತುವೆಗಳು ಕುಸಿಯುತ್ತಿದ್ದಂತೆ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮತ್ತು ನಿರ್ಮಾಣ ಹಂತದಲ್ಲಿರುವ ಎಲ್ಲಾ ಸೇತುವೆಗಳ ರಚನಾತ್ಮಕ ಲೆಕ್ಕಪರಿಶೋಧನೆ ನಡೆಸಲು ಬಿಹಾರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಕಳೆದ 15 ದಿನಗಳಲ್ಲಿ ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಜಿಲ್ಲೆಗಳಲ್ಲಿ ಒಟ್ಟು 10 ಸೇತುವೆಗಳು ಕುಸಿದಿವೆ.

ಇದನ್ನು ಓದಿದ್ದೀರಾ?  9 ದಿನಗಳಲ್ಲಿ 5ನೇ ಸೇತುವೆ ಕುಸಿತ; ನಿತೀಶ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ಇನ್ನು ಈ ವಿಚಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, “ಜುಲೈ 4ರಂದು ಅಂದರೆ ಇಂದು ಬೆಳಗ್ಗೆ ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿದಿದೆ. ನಿನ್ನೆ ಜುಲೈ 3ರಂದು ಐದು ಸೇತುವೆಗಳು ಕುಸಿದಿದೆ. ಜೂನ್‌ನಲ್ಲಿ ಇಲ್ಲಿಯವರೆಗೆ 12 ಸೇತುವೆಗಳು ಕುಸಿದಿದೆ” ಎಂದು ಹೇಳಿದ್ದಾರೆ.

“ಈ ಸಾಧನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂಪೂರ್ಣವಾಗಿ ಮೌನ ಮತ್ತು ಮೂಕರಾಗಿದ್ದಾರೆ. ಈ ಮಂಗಳಕರ ಭ್ರಷ್ಟಾಚಾರವನ್ನು ಜಂಗಲ್ ರಾಜ್ ಆಗಿ ಪರಿವರ್ತಿಸುವುದು ಹೇಗೆ ಎಂದು ಯೋಚಿಸುತ್ತಿದ್ದೀರಾ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...