ಬಿಹಾರ| ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; 9 ದಿನಗಳಲ್ಲಿ ಐದನೇ ಪ್ರಕರಣ

Date:

ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಶುಕ್ರವಾರ ಕುಸಿದು ಬಿದ್ದಿದ್ದು ಕಳೆದ ಒಂಬತ್ತು ದಿನಗಳಲ್ಲಿ ಬಿಹಾರದಲ್ಲಿ ಸೇತುವೆ ಕುಸಿತಗೊಂಡ ಐದನೇ ಘಟನೆ ಇದಾಗಿದೆ.

ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. 75 ಮೀಟರ್ ಉದ್ದದ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಬಿದ್ದಿದೆ.

ಇದು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆಯಾಗಿದ್ದು 2021ರಿಂದಲೇ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇದನ್ನು ಬಿಹಾರ ಸರ್ಕಾರದ ಗ್ರಾಮೀಣ ಕಾಮಗಾರಿ ಇಲಾಖೆಯಡಿಯಲ್ಲಿ ಈ ಸೇತುವೆ ನಿರ್ಮಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ, 25 ಮೀಟರ್ ಉದ್ದದ ಆಧಾರ ಸ್ತಂಭವು ಕೆಳಗಿನ ನದಿಗೆ ಕುಸಿದು ಬಿದ್ದಿದೆ. ಸದ್ಯ ಸೇತುವೆ ಕುಸಿದ ಬಳಿಕ ಮಾಡಲಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ?  ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಹಾರ ಮಾತ್ರವಲ್ಲ ಮಹಾರಾಷ್ಟ್ರಕ್ಕೂ ‘ಲಿಂಕ್’

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಕಳೆದ ಒಂಬತ್ತು ದಿನದಲ್ಲಿ ಬಿಹಾರದಲ್ಲಿ ಈ ರೀತಿಯ ಐದನೇ ಘಟನೆ ಇದಾಗಿದೆ” ಎಂದು ಹೇಳಿದ್ದಾರೆ.

ಇನ್ನು ಗುರುವಾರ ಕಿಶನ್‌ಗಂಜ್ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿದೆ. ಜೂನ್ 23ರಂದು ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸಣ್ಣ ಸೇತುವೆ ಕುಸಿದಿದೆ.

ಜೂನ್ 22ರಂದು, ಸಿವಾನ್‌ನಲ್ಲಿ ಗಂಡಕ್ ಕಾಲುವೆಯ ಮೇಲೆ ನಿರ್ಮಿಸಲಾದ ಸೇತುವೆ ಕುಸಿದಿದೆ. ಜೂನ್ 19ರಂದು, ಅರಾರಿಯಾದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಕುಸಿದಿದೆ. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಬೇರ್ಪಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...