ಬಿಹಾರ| ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ, ಓರ್ವ ಸಾವು, 30 ಮಂದಿ ಸಿಲುಕಿರುವ ಶಂಕೆ

Date:

ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯೊಂದು ಕುಸಿತವಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಇನ್ನೂ 30 ಮಂದಿ ಈ ಸೇತುವೆಯ ಅಡಿಯಲ್ಲಿ ಸಿಲುಕಿರುವ ಶಂಕೆಯಿದೆ.

ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಳಿಗ್ಗೆ ಸುಮಾರು 7 ಗಂಟೆಗೆ ಸೇತುವೆ ಕುಸಿದಿದ್ದು, ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಕುಸಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು 30 ಜನರು ಸಿಲುಕಿರುವ ಸಾಧ್ಯತೆಯಿದೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. “ಒಬ್ಬರು ಸಾವನ್ನಪ್ಪಿದ್ದು ಒಂಬತ್ತು ಮಂದಿಗೆ ಗಾಯಗಳಾಗಿದೆ” ಎಂದು ಸುಪೌಲ್‌ನ ಡಿಎಂ ಕೌಶಲ್ ಕುಮಾರ್ ತಿಳಿಸಿದ್ದಾರೆ.

ವರದಿಗಳ ಪ್ರಕಾರ ಕೋಸಿ ನದಿಗೆ ಸುಮಾರು 984 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2014ರ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇದರ ಶಿಲಾನ್ಯಾಸ ಮಾಡಿದ್ದರು. ಈ ಸೇತುವೆಯು ಭಾಗಲ್ಪುರ ಮತ್ತು ಖಾಗರಿಯಾ ಜಿಲ್ಲೆಯ ನಡುವೆ ಸಂಪರ್ಕ ಕಲ್ಪಿಸಲಿದೆ. ಹಾಗೆಯೇ 2019ರಲ್ಲೇ ಇದರ ನಿರ್ಮಾಣ ಕಾರ್ಯ ಪೂರ್ಣವಾಗಬೇಕಾಗಿತ್ತು. ಆದರೆ ಈವರೆಗೂ ನಿರ್ಮಾಣ ಕಾರ್ಯ ಪೂರ್ಣವಾಗಿಲ್ಲ. ಈಗ ಸೇತುವೆಯ ಒಂದು ಭಾಗ ಕುಸಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...