ಬಹಿರಂಗಗೊಂಡ ಬಿಹಾರದ ಜಾತಿ ಗಣತಿ ವರದಿ: ಯಾವ್ಯಾವ ಸಮುದಾಯ ಎಷ್ಟೆಷ್ಟು ಗೊತ್ತೆ?

Date:

2024ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಹಾರ ಸರ್ಕಾರವು ತನ್ನ ಜಾತಿ ಆಧಾರಿತ ಸಮೀಕ್ಷೆಯ ಫಲಿತಾಂಶಗಳನ್ನು ಸೋಮವಾರ(ಅ.02) ಬಹಿರಂಗಗೊಳಿಸಿದೆ.

ಸರ್ಕಾರ ಬಿಡುಗಡೆಗೊಳಿಸಿದ ಜಾತಿ ಸಮೀಕ್ಷೆಯ ಅಂಕಿಅಂಶಗಳ ಪ್ರಕಾರ ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಬಿಹಾರ ರಾಜ್ಯದ ಜನಸಂಖ್ಯೆಯ ಶೇ. 63 ರಷ್ಟು ಒಳಗೊಂಡಿವೆ.

ಬಿಹಾರ ಜಾತಿ ಅಧಾರಿತ ಗಣನೆ ಎಂದೂ ಕರೆಯಲ್ಪಡುವ ಜನಗಣತಿಯು 13 ಕೋಟಿ ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಯವರು ಶೇಕಡಾ 19 ಕ್ಕಿಂತ ಹೆಚ್ಚು ಎಂದು ತೋರಿಸುತ್ತದೆ. ಆದರೆ ಪರಿಶಿಷ್ಟ ಪಂಗಡದವರು ಶೇಕಡಾ 1.68 ರಷ್ಟಿದ್ದಾರೆ. ಮೇಲ್ಜಾತಿಗಳು ಅಥವಾ ‘ಸವರ್ಣೀಯರು’ ರಾಜ್ಯದ ಜನಸಂಖ್ಯೆಯ ಶೇಕಡಾ 15.52 ರಷ್ಟಿದ್ದಾರೆ. ಹಿಂದುಳಿದ ವರ್ಗಗಳು ಜನಸಂಖ್ಯೆಯ ಶೇಕಡಾ 27 ರಷ್ಟಿದ್ದರೆ, ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿಗಳು) ಶೇಕಡಾ 36 ರಷ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಮುದಾಯಕ್ಕೆ ಸೇರಿದ ಯಾದವರು ಜನಸಂಖ್ಯೆಯ ಶೇಕಡಾ 14 ರಷ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ವರದಿಗಾರ್ತಿಗೆ ಅವಮಾನಿಸಿದ ಅಣ್ಣಾಮಲೈ: ಪತ್ರಕರ್ತರ ಖಂಡನೆ

ಸಮೀಕ್ಷೆಗೆ ಸಂಬಂಧಿಸಿದಂತೆ ಬಿಜೆಪಿಯಿಂದ ಕಾನೂನು ತೊಡಕುಗಳು ಮತ್ತು ವಿರೋಧವನ್ನು ಎದುರಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಎಲ್ಲ ವರ್ಗಗಳ ಅಭಿವೃದ್ಧಿ ಮತ್ತು ಉನ್ನತಿಗಾಗಿ ರಾಜ್ಯ ಸರ್ಕಾರದ ವರದಿಯು ಸಹಾಯ ಮಾಡುತ್ತದೆ ಎಂದು ಹೇಳಿದರು.

“ಇಂದು, ಗಾಂಧಿ ಜಯಂತಿಯ ಶುಭ ಸಂದರ್ಭದಲ್ಲಿ, ಬಿಹಾರದಲ್ಲಿ ನಡೆಸಿದ ಜಾತಿ ಆಧಾರಿತ ಜನಗಣತಿಯ ಅಂಕಿಅಂಶವನ್ನು ಪ್ರಕಟಿಸಲಾಗಿದೆ. ಜಾತಿ ಆಧಾರಿತ ಗಣತಿ ಕಾರ್ಯದಲ್ಲಿ ತೊಡಗಿರುವ ಇಡೀ ತಂಡಕ್ಕೆ ಅಭಿನಂದನೆಗಳು. ಜಾತಿ ಆಧಾರಿತ ಜನಗಣತಿಯು ಪ್ರತಿಯೊಬ್ಬರ ಆರ್ಥಿಕ ಸ್ಥಿತಿಯ ಬಗ್ಗೆಯೂ ಮಾಹಿತಿಯನ್ನು ಒದಗಿಸುತ್ತದೆ. ಈ ವರದಿಯ ಆಧಾರದ ಮೇಲೆ ಎಲ್ಲ ವರ್ಗಗಳ ಅಭಿವೃದ್ಧಿ ಮತ್ತು ಉನ್ನತಿಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ನಿತೀಶ್ ಕುಮಾರ್‌ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಮಿತ್ರ ಪಕ್ಷ ಆರ್‌ಜೆಡಿಯ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್, “ಗಾಂಧಿ ಜಯಂತಿಯಂದು ನಾವೆಲ್ಲರೂ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದೇವೆ. ಬಿಜೆಪಿಯ ಹಲವು ಪಿತೂರಿಗಳು, ಕಾನೂನು ಅಡೆತಡೆಗಳು ನಡುವೆಯೂ ಇಂದು ಬಿಹಾರ ಸರ್ಕಾರ ಜಾತಿ ಆಧಾರಿತ ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ” ಎಂದು ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...