ಬಿಹಾರದ ಜಾತಿ ಸಮೀಕ್ಷೆಯ ಅಂಕಿಅಂಶಗಳನ್ನು ಸಾರ್ವಜನಿಕರಿಗೆ ಲಭ್ಯವಾಗಿಸಬೇಕು: ಸುಪ್ರೀಂ ಕೋರ್ಟ್

Date:

ಬಿಹಾರ ಸರ್ಕಾರ ಬಿಡುಗಡೆ ಮಾಡಿರುವ ಜಾತಿ ಸಮೀಕ್ಷೆಯ ಅಂಕಿಅಂಶಗಳನ್ನು ಸಾರ್ವಜನಿಕರಿಗೆ ಲಭ್ಯವಾಗಿಸಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್ ಹೇಳಿದೆ.

ಇದರಿಂದ ಸಮೀಕ್ಷೆಯ ತೀರ್ಮಾನಗಳು ಹಾಗೂ ನೀತಿಯನ್ನು ಪ್ರಶ್ನಿಸುವವರಿಗೆ ಅನುಕೂಲವಾಗುತ್ತದೆ ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ನೇತೃತ್ವದ ಪೀಠ ತಿಳಿಸಿದೆ.

ಸಂಜೀವ್ ಖನ್ನಾ ಪೀಠಕ್ಕೆ ಸರ್ಕಾರೇತರ ಪ್ರತಿನಿಧಿಯಾಗಿ ಹಾಜರಾದ ಹಿರಿಯ ನ್ಯಾಯವಾದಿ ರಾಜು ರಾಮಚಂದ್ರನ್, ಬಿಹಾರ ಸರ್ಕಾರ ಈಗಾಗಲೇ ಸಮೀಕ್ಷೆ ನಿರ್ಧಾರದಿಂದ ಮುಂದೆ ಕಾಲಿಟ್ಟಿದ್ದು, ರಾಜ್ಯದ ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ 70ಕ್ಕೆ ಹೆಚ್ಚಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮೀಕ್ಷೆಯ ವರದಿಯನ್ನು ಸಲ್ಲಿಸಿದ ರಾಮಚಂದ್ರನ್ ಅವರು ಸರ್ಕಾರವು ವರದಿಯನ್ನು ಜಾರಿಗೊಳಿಸದಂತೆ ಮಧ್ಯಂತರ ತಡೆಯಾಜ್ಞೆ ಒಳಗೊಂಡ ಮಧ್ಯಂತರ ಪರಿಹಾರವನ್ನು ಜಾರಿಗೊಳಿಸುವಂತೆ ನ್ಯಾಯಾಲಯವನ್ನು ಕೋರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ವಿಷಯಗಳು ಬೇಗನೆ ಚಲಿಸುತ್ತವೆ. ಈ ವಿಷಯವು ಆಗಸ್ಟ್‌ನಿಂದಲೇ ಬಾಕಿಯಿದೆ. ಈ ನಡುವೆ ಮೀಸಲಾತಿಯನ್ನು ಶೇ.50 ರಿಂದ ಶೇ.70ಕ್ಕೆ ಹೆಚ್ಚಿಸಲಾಗಿದೆ. ಆದ ಕಾರಣ ಮಧ್ಯಂತರ ಪರಿಹಾರ ನೀಡಬೇಕೆಂದು ನಾವು ಮನವಿ ಮಾಡಿಕೊಳ್ಳುತ್ತೇನೆ ಎಂದು ರಾಮಚಂದ್ರನ್ ತಿಳಿಸಿದರು.

ಬಿಹಾರ ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ನ್ಯಾಯವಾದಿ ಶ್ಯಾಮ್ ದಿವನ್, ಸಮೀಕ್ಷೆಯು ಈಗಾಗಲೇ ಸರ್ಕಾರ ಸಾರ್ವಜನಿಕರಿಗೆ ಲಭ್ಯವಿರಿಸಿದೆ.  ರಾಜ್ಯ ವಿಧಾನಸಭೆಯಲ್ಲಿಯೂ ಮಂಡಿಸಲಾಗಿದೆ ಎಂದರು

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಖನ್ನಾ,  ಸಮೀಕ್ಷೆಯ ಆಯ್ದ ಅಂಕಿಅಂಶಗಳನ್ನು ಸಾರ್ವಜನಿಕರಿಗೆ ಲಭ್ಯವಾಗಿಸಿದರೆ ಸಮಸ್ಯೆಯುಂಟಾಗುತ್ತದೆ. ಯಾರಾದರು ಸಮೀಕ್ಷೆಯನ್ನು ಪ್ರಶ್ನಿಸಬೇಕು ಎಂದುಕೊಂಡರೆ ಅಪೂರ್ಣ ಮಾಹಿತಿಯಿಂದ ಸಮಸ್ಯೆಯಾಗುತ್ತದೆ. ಆದ ಕಾರಣ ಸಾರ್ವಜನಿಕರಿಗೆ ಲಭ್ಯವಿರಿಸಿ ಎಂದು ಮುಂದಿನ ವಿಚಾರಣೆಯನ್ನು ಫೆಬ್ರವರಿಗೆ ಮುಂದೂಡಿದರು.

ಇತ್ತೀಚಿಗಷ್ಟೆ ಬಿಹಾರ ಸರ್ಕಾರವು ಸಮೀಕ್ಷೆ ಕೈಗೊಂಡು ಇತರ ಹಿಂದುಳಿದ ವರ್ಗಗಳು ಮತ್ತು ರಾಜ್ಯದ ಜನಸಂಖ್ಯೆಯ ಶೇ. 63 ರಷ್ಟಿದೆ, ಅದರಲ್ಲಿ ಅತ್ಯಂತ ಹಿಂದುಳಿದ ವರ್ಗಗಳು ಶೇ. 36 ರಷ್ಟಿದ್ದರೆ, ಒಬಿಸಿ ಶೇ. 27.13, ಪರಿಶಿಷ್ಟ ಜಾತಿಯ ಜನ ಶೇ. 19.7 ಮತ್ತು ಪರಿಶಿಷ್ಟ ಪಂಗಡಗಳ ಜನ ಶೇ 1.7 ರಷ್ಟಿದ್ದಾರೆ ಎಂದು ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...