ಬಿಹಾರ: ತರಕಾರಿ ಸೊಪ್ಪು ಕಿತ್ತಿದ್ದಕ್ಕಾಗಿ ದಲಿತ ಬಾಲಕಿ ಹತ್ಯೆ

Date:

ಸವರ್ಣೀಯ ಸಮುದಾಯದ ಜಮೀನನಲ್ಲಿ ತರಕಾರಿ ಸೊಪ್ಪು ಕಿತ್ತಿದ್ದಕ್ಕಾಗಿ 14 ವರ್ಷದ ದಲಿತ ಬಾಲಕಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಕೈಮೂರ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಬುಧವಾರ(ಡಿ.20) ರಂದು ನಡೆದಿದೆ

ದಲಿತ ಬಾಲಕಿಯನ್ನು ಕೊಂದ ಆರೋಪದ ಮೇಲೆ ಜಮೀನನ ಮಾಲೀಕ, ಆತನ ಮಗ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮೃತ ಬಾಲಕಿ ಸುಂದರಿ ಕುಮಾರಿ ಹಟ ಎಂಬ ಗ್ರಾಮದವಳಾಗಿದ್ದು, ತನ್ನ ಗ್ರಾಮದಿಂದ 1 ಕಿ.ಮೀ ದೂರದಲ್ಲಿರುವ ನಂದನ ಗ್ರಾಮದ ಜಮೀನಿನಲ್ಲಿ ಹಾದು ಬರುವಾಗ ಆಕಸ್ಮಿಕವಾಗಿ ತರಕಾರಿ ಸೊಪ್ಪು ಕೀಳುತ್ತಿದ್ದಳು. ಸ್ಥಳಕ್ಕೆ ಆಗಮಿಸಿದ ಜಮೀನಿನ ಮಾಲೀಕ ರಾಮಧರ್ ಯಾದವ್ ಮತ್ತು ಆತನ ಮಗ ಗೌರವ್ ಬಾಲಕಿಯನ್ನು ಹಿಡಿದು ಬಿದಿರಿನ ಕೋಲುಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ತೀವ್ರ ಹಲ್ಲೆಗೊಳಗಾದ ಬಾಲಕಿ ನೋವಿನಿಂದಲೇ ಮನೆ ತಲುಪುವ ಮಾರ್ಗಮಧ್ಯೆ ಕುಸಿದು ಬಿದ್ದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

ದಾರಿಯಲ್ಲಿ ಕುಸಿದು ಬಿದ್ದ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಬಾಲಕಿ ಸಾವನಪ್ಪಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದರು.

ಅಮಾನುಷ ಘಟನೆಯನ್ನು ವಿರೋಧಿಸಿ ಬಾಲಕಿಯ ಕುಟುಂಬಸ್ಥರು ಹಾಗೂ ಸ್ಥಳೀಯ ಗ್ರಾಮಸ್ಥರು ಸುಮಾರು ಆರು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಆಡಳಿತಾಧಿಕಾರಿಗಳ ಮನವೊಲಿಕೆ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಘಟನಾ ಸ್ಥಳಕ್ಕೆ ಆಗಮಿಸಿದ ಇನ್ಸ್‌ಪೆಕ್ಟರ್ ರಮಾನಂದ್ ಮಂಡಲ್ ಮಾತನಾಡಿ, ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿಯ ಮನೆಗೆ ಬೀಗ ಹಾಕಲಾಗಿದೆ. ಎಲ್ಲರೂ ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಬಂಧಿಸುವುದಾಗಿ ತಿಳಿಸಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಪೊಲೀಸರು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...