ಬಿಹಾರ ಚುನಾವಣೆ | ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಫೋಟೋ ಇಲ್ಲದ್ದು ಕಂಡು ಬಿಜೆಪಿ ವ್ಯಂಗ್ಯ

Date:

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರನ್ನು ಮಹಾಘಟಬಂಧನ್‌ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಿಸಲು ಪಾಟ್ನಾದಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಆ ಪತ್ರಿಕಾಗೋಷ್ಠಿಗಾಗಿ ಹಾಕಲಾಗಿರುವ ಪೋಸ್ಟರ್ ಮತ್ತು ಬ್ಯಾನರ್‌ಗಳಲ್ಲಿ ತೇಜಸ್ವಿ ಯಾದವ್ ಅವರ ಏಕೈಕ ಫೋಟೋ ಮಾತ್ರವೇ ಇರುವ ವಿಚಾರವನ್ನು ಇಟ್ಟುಕೊಂಡು ಮಹಾಘಟಬಂಧನ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ‘ಪತ್ರಿಕಾಗೋಷ್ಠಿಯ ಪೋಸ್ಟರ್‌ಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫೋಟೋ ಕಾಣೆಯಾಗಿದೆ. ರಾಹುಲ್ ಗಾಂಧಿಗೆ ಅವರ ಸ್ಥಾನ ತೋರಿಸಿದ್ದೀರಾ’ ಎಂದು ವ್ಯಂಗ್ಯವಾಡಿದೆ.

ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆ ಮಾತುಕತೆ ಕಗ್ಗಂಟಾಗಿ ಉಳಿದಿತ್ತು. ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಕಾಂಗ್ರೆಸ್ ಹಿರಿಯ ಅಶೋಕ್ ಗೆಹ್ಲೋಟ್ ಅವರು ಪಾಟ್ನಾಗೆ ಧಾವಿಸಿದ್ದು, ಬುಧವಾರ ಅಂತಿಮ ಮಾತುಕತೆಗಳು ಮುಗಿದಿವೆ. ಈ ಬೆನ್ನಲ್ಲೇ, ಮೈತ್ರಿಕೂಟದ ನಾಯಕರು ಪತ್ರಿಕಾಗೋಷ್ಠಿ ಕರೆದಿದ್ದು, ತೇಜಸ್ವಿ ಯಾದವ್ ಅವರೊಂದಿಗೆ ಅಶೋಕ್ ಗೆಹ್ಲೋಟ್‌ ಕೂಡ ವೇದಿಕೆಯಲ್ಲಿ ಇರುವ ಸಾಧ್ಯತೆ ಇದೆ. ಮಿತ್ರಪಕ್ಷಗಳು ಏಕತೆಯ ಸಂದೇಶ ನೀಡಲು ಸಿದ್ದವಾಗಿವೆ.

ಪತ್ರಿಕಾಗೋಷ್ಠಿಯ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಅವರ ಫೋಟೋ ಇಲ್ಲದಿರುವ ಕುರಿತು ಬಿಜೆಪಿ ವಾಗ್ದಾಳಿ ನಡೆಸಿದೆ. “ಜಂಟಿ ಸುದ್ದಿಗೋಷ್ಠಿ? ಆದರೆ, ಒಂದೇ ಒಂದು ಚಿತ್ರ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ‘ಗೌರವ ಕಳವು'(ಸಮ್ಮಾನ್ ಚೋರಿ). ಕಾಂಗ್ರೆಸ್ ಮತ್ತು ರಾಹುಲ್‌ಗೆ ಅವರ ಸ್ಥಳವನ್ನು ತೋರಿಸಿದ್ದೀರಾ?” ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ‘ಸಮ್ಮಾನ್ ಚೋರಿ’ ಎಂಬ ಪದವನ್ನು ಗಾಂಧಿಯವರ ‘ವೋಟ್ ಚೋರಿ’ ಅಭಿಯಾನಕ್ಕೆ ಪ್ರತಿಯಾಗಿ ಪೂನವಾಲಾ ಪ್ರಯೋಗಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಹಗ್ಗ-ಜಗ್ಗಾಟ ಅಂತ್ಯಗೊಂಡಿದೆ. ಮೈತ್ರಿಕೂಟದ ನಾಯಕರು ಈಗ ಎಲ್ಲವೂ ಸರಿಯಾದ ರೀತಿಯಲ್ಲಿದೆ ಎಂದು ಹೇಳಿಕೊಂಡಿದ್ದಾರೆ.

2020ರ ವಿಧಾನಸಭಾ ಚುನಾವಣೆಯಲ್ಲಿ, ಆರ್‌ಜೆಡಿ 144 ಸ್ಥಾನಗಳಲ್ಲಿ ಸ್ಪರ್ಧಿಸಿ 75 ಸ್ಥಾನಗಳನ್ನು ಗೆದ್ದಿತು. ಅಂತೆಯೇ, ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ 19 ಸ್ಥಾನಗಳನ್ನು ಗೆದ್ದಿತು. ಈ ಬಾರಿ, ಆರ್‌ಜೆಡಿ 143 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ ಮತ್ತು ಕಾಂಗ್ರೆಸ್ 59 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ. ಮುಖೇಶ್ ಸಹಾನಿ ಅವರ ವಿಐಪಿ 15 ಮತ್ತು ಎಡಪಕ್ಷಗಳು 30 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಆದಾಗ್ಯೂ, ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಆರ್‌ಜೆಡಿ ಎರಡೂ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಈ ವಿವಾದವು ಇಂದಿನ ಪತ್ರಿಕಾಗೋಷ್ಠಿಯಲ್ಲಿ ಇತ್ಯರ್ಥವಾಗಲಿದ್ದು, ಎರಡೂ ಪಕ್ಷಗಳ ಅರ್ಭರ್ಥಿಗಳಿರುವ ಕ್ಷೇತ್ರಗಳಲ್ಲಿ ಯಾವುದಾದರೂ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆಯುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...