ಬಿಹಾರ ಚುನಾವಣೆ | ಶಿಕ್ಷಣ, ನಿರುದ್ಯೋಗ – ಬಿಹಾರಿ ಯುವಜನರು ಬಯಸುತ್ತಿರುವುದೇನು?

Date:

ನಿತೀಶ್‌ ಸರ್ಕಾರವು ಕಳೆದ 20 ವರ್ಷಗಳಿಂದ ಯುವಜನರನ್ನು ರಾಜ್ಯದಿಂದ ಹೊರಹಾಕಿದೆ. ಈಗ ಎನ್‌ಡಿಎ ಸರ್ಕಾರವನ್ನು ಹೊರಹಾಕುವ ಕಾಲ ಬಂದಿದೆ ಎನ್ನುತ್ತಿದ್ದಾರೆ ಯುವಜನರು.

ನವೆಂಬರ್ ಮೊದಲ ವಾರದಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ. ಆ ರಾಜ್ಯದ ಕಾಲೇಜು ವಿದ್ಯಾರ್ಥಿಗಳಲ್ಲಿ ಬಹುತೇಕರು ಮೊದಲ ಬಾರಿಗೆ ಮತ ಚಲಾಯಿಸಲು ಸಜ್ಜಾಗಿದ್ದಾರೆ. ತಮ್ಮ ಆದತ್ಯೆ ಮತ್ತು ಬಿಹಾರದ ಭವಿಷ್ಯವನ್ನು ಯಾವ ರೀತಿ ನೀಡುತ್ತಿದ್ದಾರೆ ಎಂಬುದನ್ನು ಸೂಚಿಸಲು ಉತ್ಸುಕರಾಗಿದ್ದಾರೆ. ಮುಂದಿನ ಸರ್ಕಾರವು ಯುವಜನರ ಆಯ್ಕೆ ಮತ್ತು ಆದ್ಯತೆ ಆಗಿರಲಿದೆ ಎನ್ನುತ್ತಿದ್ದಾರೆ.

ಬಿಹಾರವು ತನ್ನ ಜನರನ್ನು ಇತರ ರಾಜ್ಯಗಳಿಗೆ ವಲಸೆ ಕಳಿಸುವ ಪ್ರಮುಖ ರಾಜ್ಯಗಳಲ್ಲಿ ಒಂದು. ಶಿಕ್ಷಣ ಮುಗಿಸಿದ ಯುವಜನರು ತಮ್ಮ ಭವಿಷ್ಯ ಕಟ್ಟಿಕೊಳ್ಳಲು ಬಿಹಾರ ತೊರೆಯುವುದು ಅನಿವಾರ್ಯ ಎಂಬ ಪರಿಸ್ಥಿತಿ ಇದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗದೇ ಇರುವುದು ಮತ್ತು ಅವಕಾಶಗಳ ಕೊರತೆಯು ಯುವಜನರನ್ನು ಬಿಹಾರದಿಂದ ಹೊರದಬ್ಬುತ್ತಿದೆ. ಯುವಜನರು ಸ್ಥಳೀಯವಾಗಿ ಉದ್ಯೋಗ ದೊರೆಯಬೇಕು. ತಮ್ಮ ತವರಿನಲ್ಲೇ ಬದುಕು ಕಟ್ಟಿಕೊಳ್ಳಲು ಎದುರು ನೋಡುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಉದ್ಯೋಗ ಸೃಷ್ಟಿಸುವ ಸರ್ಕಾರವನ್ನು ಬಯಸುತ್ತಿದ್ದಾರೆ.

ಕಾಲೇಜು ಶಿಕ್ಷಣ ಪಡೆಯುತ್ತಿರುವ ಯುವಜನರು ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿಗಳಲ್ಲಿ ಅನಿಯಮಿತತೆ ಬಗ್ಗೆ ಯುವಜನರು ಹತಾಶೆ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಆಗಾಗ್ಗೆ ಸಂಭವಿಸುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ವೇಳಾಪಟ್ಟಿ ವಿಳಂಬದ ಕುರಿತು ಅಸಹನೆಗೊಂಡಿದ್ದಾರೆ. ಈಗ ನಡೆಯುತ್ತಿರುವ ಚುನಾವಣೆಯು ತಮ್ಮ ಹತಾಶೆ-ಅಸಹನೆಯನ್ನು ವ್ಯಕ್ತಪಡಿಸಲು ಅವರಿಗೆ ಸಾಧನವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ 18-29 ವರ್ಷ ವಯಸ್ಸಿನ ಒಟ್ಟು 1.63 ಕೋಟಿ (ಒಟ್ಟು ಮತಗಳಲ್ಲಿ 22-25%) ಯುವ ಮತದಾರರಿದ್ದಾರೆ. ಅವರಲ್ಲಿ, ಈ ಬಾರಿ ಸುಮಾರು 14 ಲಕ್ಷ ಯುವಜನರು ಮೊದಲ ಬಾರಿಗೆ ಮತ ಚಲಾಯಿಸುವ ನಿರೀಕ್ಷೆಯಿದೆ.

ಹಾಲಿ ಸರ್ಕಾರ ಮತ್ತು ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದಲ್ಲಿರುವ ಪಕ್ಷಗಳ ಮೇಲಿನ ನಮ್ಮ ನಿರೀಕ್ಷೆ ಸಂಪೂರ್ಣವಾಗಿ ಮಸುಕಾಗಿದೆ. ಬಿಜೆಪಿ-ಜೆಡಿಯು ಮೇಲೆ ನಮಗೆ ಯಾವುದೇ ಭರವಸೆ ಇಲ್ಲ. ನಿತೀಶ್‌ ಸರ್ಕಾರವು ಕಳೆದ 20 ವರ್ಷಗಳಿಂದ ಯುವಜನರನ್ನು ರಾಜ್ಯದಿಂದ ಹೊರಹಾಕಿದೆ. ಈಗ ಎನ್‌ಡಿಎ ಸರ್ಕಾರವನ್ನು ಹೊರಹಾಕುವ ಕಾಲ ಬಂದಿದೆ ಎನ್ನುತ್ತಿದ್ದಾರೆ ಯುವಜನರು.

”ಬಿಹಾರದಲ್ಲಿ ನಮಗೆ ಅವಕಾಶಗಳಿಲ್ಲ. ಶಿಕ್ಷಣ ಮುಗಿಯುತ್ತಿದ್ದಂತೆ ಕುಟುಂಬಗಳನ್ನು ತೊರೆದು, ಉದ್ಯೋಗ ಹರಸಿ ಇತರ ರಾಜ್ಯಗಳಿಗೆ ಹೋಗುವ ಪರಿಸ್ಥಿತಿ ಇದೆ. ಈ ಸರ್ಕಾರವು ಯುವಜನರನ್ನು ನಿರ್ಲಕ್ಷಿಸಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯೋಗ ಸೃಷ್ಟಿಯ ಅಗತ್ಯವಿದೆ” ಎಂದು ಪಾಟ್ನಾ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ ಅಭಿನವ್ ಕುಮಾರ್ ಶುಕ್ಲಾ ಹೇಳಿರುವುದಾಗಿ ಎನ್‌ಡಿ ಟಿವಿ ವರದಿ ಮಾಡಿದೆ.

“ಪಾಟ್ನಾ ವಿಶ್ವವಿದ್ಯಾಲಯದ ಪರಿಸ್ಥಿತಿಯು ಅದರ ಗತವೈಭವವನ್ನು ಕಳೆದುಕೊಂಡಿದೆ. ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ಸರ್ವಶ್ರೇಷ್ಠರು. ಹಲವಾರು ಬುದ್ದಿಜೀವಿಗಳು, ಚಿಂತಕರು ಹಾಗೂ ಸಾಹಿತಿಗಳನ್ನು ವಿಶ್ವವಿದ್ಯಾಲಯ ಹುಟ್ಟುಹಾಕಿತ್ತು. ಆರ್‌ಜೆಡಿ ನಾಯಕ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್, ಹಾಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ರೀತಿಯ ರಾಜಕೀಯ ನಾಯಕರನ್ನು ಹುಟ್ಟುಹಾಕಿತು. ಇದನ್ನು ‘ಪೂರ್ವದ ಆಕ್ಸ್‌ಫರ್ಡ್‌’ ಎನ್ನುವ ಮಾತಿತ್ತು. ಆದರೆ, ಪ್ರಸ್ತುತ ಸ್ಥಿತಿ ತೀರಾ ಕೆಳಮಟ್ಟದಲ್ಲಿದೆ. ಶಿಕ್ಷಣದ ಗುಣಮಟ್ಟವೂ ಕುಸಿದಿದೆ” ಎಂದು ವಿದ್ಯಾರ್ಥಿ ಸಂತೋಷ್ ಹೇಳಿಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: RSS- ನೂರು ವರ್ಷಗಳು : ಬಿಟ್ಟರೂ ಬಿಡದ ತಾತ್ವಿಕ ಪ್ರಶ್ನೆಗಳು

ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣವು ಗುಣಮಟ್ಟದ್ದಾಗಿಲ್ಲ. ಸರ್ಕಾರವು ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯುತ್ತಿಲ್ಲ. ಕೇಂದ್ರ ಮತ್ತು ರಾಜ್ಯದ ಶಿಕ್ಷಣ ನೀತಿಗಳು ಯುವಜನರಿಗೆ ಮಾರಕವಾದ ರೀತಿಯಲ್ಲಿವೆ. ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂಬುದು ಯುವಜನರ ಆರೋಪ. ಆದ್ದರಿಂದಲೇ, ಯಾವ ಪಕ್ಷವು ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತದೆಯೋ ಆ ಪಕ್ಷವನ್ನು ನಾವು ಆಯ್ಕೆ ಮಾಡುತ್ತೇವೆ ಎನ್ನುತ್ತಿದ್ದಾರೆ.

ಬಿಹಾರದಲ್ಲಿ ಉದ್ಯೋಗ ಸಮಸ್ಯೆಯು ಗಂಭೀರ ಸವಾಲು ಎಂಬುದನ್ನು ಆರ್‌ಜೆಡಿ ಮನಗಂಡಿದೆ. ಹೀಗಾಗಿಯೇ, ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ಪ್ರತಿ ಕುಟುಂಬಕ್ಕೂ ಒಂದು ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ.

ಅಲ್ಲದೆ, “ಬಿಹಾರದ ಯುವಕರು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ ಕೆಲಸಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುತ್ತೇವೆ” ಎಂದು ಚುನಾವಣಾ ತಂತ್ರಜ್ಞ, ಜೆಎಸ್‌ಪಿ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್‌ ಹೇಳಿದ್ದಾರೆ.

ಎನ್‌ಡಿಎ ಸರ್ಕಾರವು ಉತ್ತಮ ಶಿಕ್ಷಣ, ಉದ್ಯೋಗ ಒದಗಿಸುವಲ್ಲಿ, ವಲಸೆಯನ್ನು ನಿಯಂತ್ರಿಸುವಲ್ಲಿ ಹಾಗೂ ಭ್ರಷ್ಟಾಚಾರ ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಯುವಜನರು ಹೇಳುತ್ತಿದ್ದಾರೆ. ರಾಜ್ಯದ ಭವಿಷ್ಯ ಮತ್ತು ಸಮಸ್ಯೆಗಳ ಪರಿಹಾರಕ್ಕೆ ‘ಇಂಡಿಯಾ’ ಬಣ (ಮಹಾಘಟಬಂಧನ್) ಪರ್ಯಾಯವೆಂದು ನೋಡುತ್ತಿದ್ದಾರೆ. ಭರವಸೆ ಇಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...