ಬಿಹಾರ ಚುನಾವಣೆ | ನಿತೀಶ್ ಕುಮಾರ್ ಅವರೇ ಮತ್ತೆ ಮುಖ್ಯಮಂತ್ರಿ: ಎಲ್‌ಜೆಪಿ ಸಂಸದೆ

Date:

ಬಿಹಾರದಲ್ಲಿ ನಿತೀಶ್‌ ಕುಮಾರ್‌ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಎನ್‌ಡಿಎ ಸರ್ಕಾರವನ್ನು ಮುನ್ನಡೆಸಲಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಎಲ್‌ಜೆಪಿ ಸಂಸದೆ ಶಾಂಭವಿ ಚೌಧರಿ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನತ್ತ ಧಾವಿಸುತ್ತಿದೆ. ಎನ್‌ಡಿಎ ಗೆಲುವಿನ ಹಾದಿಯಲ್ಲಿರುವ ಸಮಯದಲ್ಲೇ ಬಿಹಾರಕ್ಕೆ ಎನ್‌ಡಿಎಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗಳು ಆರಂಭಗೊಂಡಿದೆ. ಈ ಚರ್ಚೆಗಳ ಕುರಿತು ಪ್ರಕ್ರಿಯಿಸಿರುವ ಶಾಂಭವಿ ಅವರು, ‘ನಿತೀಶ್‌ ಅವರೇ ಮುಖ್ಯಮಂತ್ರಿ ಆಗುತ್ತದೆ. ಯಾವುದೇ ಗೊಂದಲವಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಾಂಭವಿ ಚೌಧರಿ ಅವರು ಬಿಹಾರದ ಎಸ್‌ಸಿ ಮೀಸಲು ಲೋಕಸಭಾ ಕ್ಷೇತ್ರವಾದ ಸಮಷ್ಠಿಪುರದ ಸಂಸದೆಯಾಗಿದ್ದಾರೆ.

ಈ ಬಾರಿ ಎನ್‌ಡಿಎ ಕೂಟ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿರಲಿಲ್ಲ. ಮೈತ್ರಿಕೂಟ ಗೆದ್ದ ಬಳಿಕ, ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಿಕೊಂಡಿತ್ತು. ಇದೀಗ, ಎನ್‌ಡಿಎ ಗೆಲುವು ಸಾಧಿಸುವುದು ಖಚಿತವಾಗಿದೆ. ಚುನಾವಣೆಯಲ್ಲಿ ಎನ್‌ಡಿಎಯನ್ನು ನಿತೀಶ್‌ ಮುನ್ನಡೆಸಿದ್ದರಿಂದ, ಅವರೇ ಮುಖ್ಯಮಂತ್ರಿ ಆಗುತ್ತಾರೆಂದು ಹಲವರು ಭರವಸೆ ಹೊಂದಿದ್ದಾರೆ. ಆದರೆ, ಜೆಡಿಯುಗಿಂತ ಬಿಜೆಪಿಯೇ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತಿದ್ದು, ಬಿಜೆಪಿಗರಿಗೇ ಮುಖ್ಯಮಂತ್ರಿ ಹುದ್ದೆಬೇಕೆಂದು ಬೇಡಿಕೆ ಇಡಬಹುದು ಎಂಬ ಅಭಿಪ್ರಾಯಗಳೂ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಕಾಂಗ್ರೆಸ್ ಮತ್ತು ಎಡಪಕ್ಷಗಳ ಜೊತೆ ಸೇರಿ ಬಿಹಾರದಲ್ಲಿ ಅಧಿಕಾರಕ್ಕೆ ಬರುವ ಕನಸು ಕಂಡಿದ್ದರು, ಜೊತೆಗೆ ತಾವೇ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದನ್ನು ಹೇಳಿದ್ದರು. ಆದರೆ, ಮಹಾಘಟಬಂಧನ್ ಹಿನ್ನೆಡೆ ಅನುಭವಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...