ಬಿಹಾರ ಚುನಾವಣೆ | ‘ಸೇತುವೆ ಇಲ್ಲ ಅಂದ್ರೆ, ಮತವೂ ಇಲ್ಲ’: 77 ವರ್ಷಗಳಿಂದ ಜೀವ ಭಯದಲ್ಲೇ ನದಿ ದಾಟುವ ಗ್ರಾಮಸ್ಥರ ಎಚ್ಚರಿಕೆ

Date:

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಮೊದಲ ಹಂತದ ಮತದಾನವು ಗುರುವಾರ ನಡೆದಿದ್ದು, ನವೆಂಬರ್ 11ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈ ಬಾರಿಯ ಚುನಾವಣೆ ಅಭಿವೃದ್ಧಿ, ಮೂಲಸೌಕರ್ಯಗಳು ಹಾಗೂ ಉದ್ಯೋಗಗಳ ಸುತ್ತಲೇ ಕೇಂದ್ರೀಕೃತಾಗಿದೆ. ಇದೇ ಸಮಯದಲ್ಲಿ, ಬಿಹಾರದ ಮೂರು ಹಳ್ಳಿಗಳ ಗ್ರಮಸ್ಥರು ತಮ್ಮ ಗ್ರಾಮಕ್ಕೆ ಸೇತುವೆ ನಿರ್ಮಾಣ ಮಾಡದ ಹೊರತು, ನಾವು ಮತವನ್ನೂ ಚಲಾಯಿಸುವುದಿಲ್ಲ ಎಂದು ಹೇಳಿದ್ದಾರೆ. ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

ಗಯಾ ಜಿಲ್ಲೆಯ ಹಳ್ಳಿಗಳಾದ ಪತ್ರಾ, ಹೆರ್ಹಂಜ್ ಹಾಗೂ ಕೆವಾಲ್ದಿಹ್‌ ಗ್ರಾಮಗಳ ಜನರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈ ಮೂರು ಗ್ರಾಮಗಳು ‘ಮೊರ್ಹರ್’ ನದಿ ತೀರದಲ್ಲಿವೆ. ಈ ಗ್ರಾಮಗಳಲ್ಲಿ ಒಟ್ಟು 8,000ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಕಳೆದ 77 ವರ್ಷಗಳಲ್ಲಿ ತಮ್ಮ ಏಕೈಕ ಬೇಡಿಕೆಯ ಈಡೇರಿಕೆಗಾಗಿ ಕಾಯುತ್ತಿದ್ದಾರೆ.

“ಕಳೆದ 77 ವರ್ಷಗಳಿಂದ ಗ್ರಾಮದ ಪ್ರತಿಯೊಬ್ಬರೂ ಬಳಲುತ್ತಿದ್ದೇವೆ. ಪ್ರತಿ ಚುನಾವಣೆಯ ಸಮಯದಲ್ಲಿಯೂ ರಾಜಕಾರಣಿಗಳು ಬಂದು ಹೋಗುತ್ತಾರೆ. ಸೇತುವೆ ನಿರ್ಮಾಣದ ಭರವಸೆ ನೀಡುತ್ತಾರೆ. ಆದರೆ, ಈವರೆಗೆ ನಮ್ಮ ಬೇಡಿಕೆ – ಅವರ ಭರವಸೆ ಈಡೇರಿಲ್ಲ. ಮಳೆಗಾಲದಲ್ಲಿ ನೀದಿ ನೀರು ಏರಿಕೆಯಾಗುತ್ತದೆ. ಅಂತಹ ಸಮಯದಲ್ಲಿ ನದಿ ದಾಟಿ ಇತರ ಗ್ರಾಮಗಳು, ಪಟ್ಟಣಗಳೊಂದಿಗೆ ಸಂಪರ್ಕ ಸಾಧಿಸುವುದೇ ಕಷ್ಟ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಪಾಲಿಗೆ ಅಭಿವೃದ್ಧಿ ಎಂದರೆ, ಅದು ಸೇತುವೆ ನಿರ್ಮಾಣ. ಈ ಬಾರಿ, ‘ಸೇತುವೆ ನಿರ್ಮಾಣವಾಗುವವರೆಗೂ ನಾವು ಮತ ​​ಚಲಾಯಿಸುವುದಿಲ್ಲ’ ಎಂದು ತೀರ್ಮಾನಿದ್ದೇವೆ” ಎಂದು ಗ್ರಾಮದ ಮಹಿಳಾ ಮತದಾರರೊಬ್ಬರು ಹೇಳಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ಈ ಲೇಖನ ಓದಿದ್ದೀರಾ?: ವಿ.ಸೋಮಣ್ಣಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ? ಪ್ರಭಾವಿ ಮಠಾಧೀಶರೊಂದಿಗೆ ಪ್ರಸ್ತಾಪ

“ಪ್ರತಿ ವರ್ಷ ಸುಮಾರು ನಾಲ್ಕು ತಿಂಗಳ ಕಾಲ, ನಮ್ಮ ಗ್ರಾಮಗಳು ರಾಜ್ಯದ ಉಳಿದ ಭಾಗಗಳು ಮತ್ತು ಪ್ರಪಂಚದೊಂದಿಗಿನ ಸಂಪರ್ಕವನ್ನೂ ಸಂಪೂರ್ಣವಾಗಿ ಕಡಿತಗೊಳ್ಳುತ್ತವೆ. ಗ್ರಾಮಸ್ಥರು ಎದೆಯ ಆಳದ ನೀರಿನಲ್ಲಿ ಅಲೆದಾಡಬೇಕಾಗುತ್ತದೆ. ದಿನಸಿಗಾಗಿ ಸ್ಥಳೀಯ ಮಾರುಕಟ್ಟೆಗೆ ಸುಲಭವಾಗಿ ತೆರಳಲು ಸಾಧ್ಯವಿಲ್ಲ, ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಿಲ್ಲ, ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ರೋಗಿಗಳು ಆಸ್ಪತ್ರೆಗಳಿಗೆ ಹೋಗಲು ಆಗುತ್ತಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾವು ಬಹಳಷ್ಟು ನಾರಿ ದೂರು-ಮನವಿಗಳನ್ನು ನೀಡಿದ್ದೇವೆ. ಮಳೆಗಾಲದಲ್ಲಿ, ನಾವು ಪ್ರತಿ ವರ್ಷ ನದಿ ದಾಟಲಾಗದ ಕಾರಣಕ್ಕಾಗಿ ಕನಿಷ್ಠ ಎರಡು ಜೀವಗಳನ್ನು ಕಳೆದುಕೊಳ್ಳುತ್ತೇವೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...