ಬಿಹಾರ ಚುನಾವಣೆ | ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ಗೆ ಭಾರೀ ಹಿನ್ನಡೆ; ‘ವೋಟ್‌ ಚೋರಿ’ ಪರಿಣಾಮ ಎಂದ ಕಾಂಗ್ರೆಸ್‌

Date:

ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಮಹಾಘಟಬಂಧನ್‌ ಮುಖ್ಯಮಂತ್ರಿ ಅಭ್ಯರ್ಥಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ತಮ್ಮ ಭದ್ರಕೋಟೆ ರಾಘೋಪುರ್‌ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಯಾದವ್, ಬಿಜೆಪಿ ಅಭ್ಯರ್ಥಿ ಸತೀಶ್ ಕುಮಾರ್ ವಿರುದ್ಧ ಹಿನ್ನಡೆಯಲ್ಲಿದ್ದಾರೆ.

ಬಿಜೆಪಿಯ ಸತೀಶ್‌ ಕುಮಾರ್ ಅವರು ತೇಜಸ್ವಿಗಿಂತ 4,829 ಮತಗಳಿಂದ ಮುಂದಿದ್ದಾರೆ.

ತೇಜಸ್ವಿ ಯಾದವ್ ಅವರು 2015ರಲ್ಲಿ ಮೊದಲ ಬಾರಿಗೆ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. 2017ರಲ್ಲಿ ತಮ್ಮ 28ನೇ ವಯಸ್ಸಿಗೆ ವಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದರು. 2020ರ ಚುನಾವಣೆಯಲ್ಲಿ ಮಹಾಘಟಬಂಧನ್‌ ಮುಖ್ಯಮಂತ್ರಿ ಅಭ್ಯಥಿಯಾಗಿದ್ದರು. ಅತೀ ಕಿರಿಯ ವಯಸ್ಸಿನ ಮುಖ್ಯಮಂತ್ರಿ ಅಭ್ಯರ್ಥಿ ಎನ್ನಿಸಿಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರು ಹಿನ್ನಡೆ ಅನುಭವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಬಿಹಾರ ಫಲಿತಾಂಶದ ಕುರಿತು ಮಾತನಾಡಿರುವ ಕಾಂಗ್ರೆಸ್‌ ನಾಯಕ ರಮೇಶ್‌ ಚೆನ್ನಿತ್ತಲ ‘ಇದು ಮತ ಕಳ್ಳತನದ ಪರಿಣಾಮ, ಫಲಿತಾಂಶ’ ಎಂದು ಕರೆದಿದ್ದಾರೆ. ಮಹಾರಾಷ್ಟ್ರ, ಹರಿಯಾಣದಂತೆ ಬಿಹಾರದಲ್ಲೂ ಮತ ಕಳವು ಪುನರಾವರ್ತನೆಯಾಗಿದೆ ಎಂದಿದ್ದಾರೆ.

“ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಏನು ನಡೆದಿತ್ತೋ, ಅದು ಬಿಹಾರದಲ್ಲಿ ಪುನರಾವರ್ತನೆಯಾಗಿದೆ. ದೇಶದ ಸರಿಯಾದ ಚಿಂತನೆಯುಳ್ಳ ಜನರು ಇದರ ಬಗ್ಗೆ ಬಹಳ ಗಂಭೀರವಾಗಿ ಯೋಚಿಸಬೇಕು. ಈಗ ನಮ್ಮ ಮತಗಳಿಗೆ ಮೌಲ್ಯವಿಲ್ಲದಂತಾಗಿದೆ. ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ರಾಜಿ ಮಾಡಿಕೊಂಡಿದ್ದು, ಮತಗಳನ್ನು ನಿರ್ಧರಿಸುತ್ತಿದೆ. ಪ್ರಜಾಪ್ರಭುತ್ವವು ಅಪಾಯದಲ್ಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...