ಬಿಹಾರ | ಹಳಿ ದಾಟುವಾಗ ರೈಲಿಗೆ ಸಿಲುಕಿ ಒಂದೇ ಕುಟುಂಬದ ಐವರು ಸಾವು

Date:

ಸಿವಾನ್-ಗೋರಖ್‌ಪುರ ವಿಭಾಗದ ಮೈರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಿಪುರ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿ ದಾಟುವಾಗ ರೈಲು ಢಿಕ್ಕಿ ಹೊಡೆದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರು ಹತ್ತಿರದ ಹೊಲದಲ್ಲಿ ಗೋಧಿ ಕೊಯ್ಲು ಮಾಡಿ ಇನ್ನೊಂದು ಬದಿಯಲ್ಲಿರುವ ತಮ್ಮ ಮನೆಗೆ ಮರಳುತ್ತಿದ್ದರು. ಈ ವೇಳೆ, ಏಕಕಾಲದಲ್ಲಿ ಎರಡು ರೈಲುಗಳು ಏಕಕಾಲದಲ್ಲಿ ಎರಡೂ ಬದಿಯಿಂದ ಹಳಿಗಳ ಮೇಲೆ ಚಲಿಸಿದ್ದು, ಅವರಿಗೆ ಢಿಕ್ಕಿ ಹೊಡೆದಿವೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. “ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂರನೇ ಮಗು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದೆ. ಮೃತ ಮಹಿಳೆಯರನ್ನು ಸುನೀತಾ ದೇವಿ ಮತ್ತು ಸಿಮತಿ ದೇವಿ ಎಂದು ಗುರುತಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯ ವಿರುದ್ಧ ಸ್ಥಳೀಯರು ಪ್ರತಿಭಟಿಸಲು ಪ್ರಾರಂಭಿಸಿದ್ದರಿಂದ ಆ ಪ್ರದೇಶದಲ್ಲಿ ಗೊಂದಲಕ್ಕೆ ಕಾರಣವಾಯಿತು. ಸರ್ಕಾರದಿಂದ ಪರಿಹಾರ ಕೋರಿ ಅವರು ಶವಗಳನ್ನು ರಸ್ತೆಯ ಮಧ್ಯದಲ್ಲಿರಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಸಿಗುವವರೆಗೂ ಮರಣೋತ್ತರ ಪರೀಕ್ಷೆಗೆ ಅವಕಾಶ ನಿರಾಕರಿಸಿದ್ದಾರೆ.  ಸರ್ಕಾರಿ ರೈಲ್ವೆ ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳದಲ್ಲಿದ್ದು, ಜನರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಎಪಿ ನಾಯಕ ಸಂಜಯ್ ಸಿಂಗ್ ಪಂಜಾಬ್‌ಗೆ ಭೇಟಿ; ಪಕ್ಷದ ಸಿಎಂ, ಶಾಸಕರ ಸಭೆ

ಘಟನೆಯ ಬಳಿಕ, ಸ್ಥಳದಲ್ಲಿ ಭಾರೀ ಜನಸಮೂಹ ಜಮಾಯಿಸಿದೆ. ಮುಡಿಯಾರಿ ಪಂಚಾಯತ್ ಮುಖ್ಯಸ್ಥ ಅಜಯ್ ಭಾಸ್ಕರ್ ಚೌಹಾಣ್ ಸ್ಥಳಕ್ಕೆ ತಲುಪಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

“ಈ ಸಂತ್ರಸ್ತರ ಮನೆ ರೈಲ್ವೆ ಹಳಿಗಳ ಬಳಿ ಇದೆ. ಆದ್ದರಿಂದ ಕಾಲ್ನಡಿಗೆಯಲ್ಲಿ ಮನೆಗೆ ತೆರಳಲು  ಹಳಿಗಳನ್ನು ದಾಟುವುದು ಏಕೈಕ ಮಾರ್ಗವಾಗಿದೆ. ಮಹಿಳೆಯರು ಮತ್ತು ಮಕ್ಕಳು ಹತ್ತಿರದ ಹೊಲದಲ್ಲಿ ಕೆಲಸ ಮಾಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ” ಎಂದು ಅಜಯ್ ಭಾಸ್ಕರ್ ಚೌಹಾಣ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...