ಬಿಷ್ಣೋಯ್ ಗ್ಯಾಂಗ್ ಜೀವ ಬೆದರಿಕೆ; ಝಡ್ ಭದ್ರತೆ ಕೋರಿದ ಬಿಹಾರ ಸಂಸದ ಪಪ್ಪು ಯಾದವ್

Date:

ಬಿಹಾರದ ಸ್ವತಂತ್ರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ ಹಾಕಿದೆ. ಈ ಬೆನ್ನಲ್ಲೇ ಪಪ್ಪು ಯಾದವ್ ಅವರು ತನಗೆ ಝಡ್ ಕೆಟಗರಿ ಭದ್ರತೆಯನ್ನು ಕೋರಿದ್ದಾರೆ.

ಯಾದವ್ ಬಿಹಾರದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ರಾಜ್ ಅವರಿಗೆ ಕರೆ ಮಾಡಿ ಭದ್ರತೆ ಕೋರಿದ್ದಾರೆ. ಜೊತೆಗೆ ಮುಂಬೈನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಕಳುಹಿಸಿದ ಕೊಲೆ ಬೆದರಿಕೆಯ ರೆಕಾರ್ಡಿಂಗ್‌ ಅನ್ನು ಕಳುಹಿಸಿದ್ದಾರೆ.

ತನ್ನ ಮೊಬೈಲ್‌ಗೆ ಅಪರಿಚಿತರಿಂದ ಕರೆ ಬಂದಿದೆ ಎಂದು ಸಂಸದರು ಹೇಳಿದ್ದಾರೆ. ಹೆಸರು ಹೇಳದ ಕರೆ ಮಾಡಿದ ಅಪರಿಚಿತರು ತಾನು ಲಾರೆನ್ಸ್ ಬಿಷ್ಣೋಯ್ ಅವರಂತಹ ಗ್ಯಾಂಗ್‌ನ ನಿರ್ಮೂಲಕನೆ ಮಾಡುವುದಾಗಿ ಹೇಳಿದ ಬಳಿಕ ತನ್ನ ಎಲ್ಲಾ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇರಿಸಿದ್ದಾರೆ ಎಂದು ತಿಳಿಸಿರುವುದಾಗಿ ಪಪ್ಪು ಯಾದವ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ: ಎನ್‌ಐಎ

“ಪ್ರಸ್ತುತ ಸಬರಮತಿ ಜೈಲಿನಲ್ಲಿರುವ ಗ್ಯಾಂಗ್‌ನ ಕಿಂಗ್‌ಪಿನ್ ಬಿಷ್ಣೋಯ್ ನಿಮ್ಮನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಜೈಲಿನಲ್ಲಿ ಅಳವಡಿಸಲಾದ ಜಾಮರ್‌ಗಳಿಂದಾಗಿ ನಿಮ್ಮನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಗ್ಯಾಂಗ್ ಹಲವು ಸ್ಥಳಗಳಲ್ಲಿ ನಿಮ್ಮನ್ನು ಪರಿಶೀಲಿಸುತ್ತಿದೆ, ನಿಮ್ಮ ಹತ್ಯೆಗೆ ಮುಂದಾಗಿದೆ” ಎಂದು ಕರೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ತನಿಖೆಯ ವೇಳೆ ಯುಎಇ ಸಂಖ್ಯೆಯಿಂದ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಗ್ಯಾಂಗ್‌ನ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಮತ್ತು ಸಲ್ಮಾನ್ ಖಾನ್ ಪ್ರಕರಣದಿಂದ ದೂರವಿರುವಂತೆ ಕರೆ ಮಾಡಿದವರು ಯಾದವ್‌ಗೆ ಸೂಚಿಸಿದ್ದಾರೆ.

ಯಾದವ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವನ್ನು ಕಳುಹಿಸಿದ್ದು, ತಮ್ಮ ಭದ್ರತೆಯನ್ನು ವೈ ವರ್ಗದಿಂದ ಝಡ್ ವರ್ಗಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. ಬಿಹಾರದ ಪ್ರತಿ ಜಿಲ್ಲೆಗಳಲ್ಲಿ ಪೊಲೀಸ್ ತಂಡದ ಬೆಂಗಾವಲು ನೀಡುವಂತೆ, ಸಾರ್ವಜನಿಕ ಸಭೆಯ ಯಾವುದೇ ಕಾರ್ಯಕ್ರಮದ ಸ್ಥಳದಲ್ಲಿ ವಿಶೇಷ ಭದ್ರತೆ ನೀಡುವಂತೆ ಒತ್ತಾಯಿಸಿದ್ದಾರೆ.

ಯಾದವ್ ಇತ್ತೀಚೆಗೆ ಅಕ್ಟೋಬರ್ 24ರಂದು ಮುಂಬೈನಲ್ಲಿ ಬಾಬಾ ಸಿದ್ದಿಕ್ ಅವರ ಮಗ ಜೀಶನ್ ಸಿದ್ದಿಕಿ ಅವರನ್ನು ಭೇಟಿಯಾದರು. ಹಾಗೆಯೇ ನಟ ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡುವ ಬಯಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಜೊತೆಗೆ “ಕಾನೂನು ನನಗೆ ಅನುಮತಿ ನೀಡಿದರೆ, ಲಾರೆನ್ಸ್ ಬಿಷ್ಣೋಯ್ ಅವರಂತಹ ಅಪರಾಧಿಯ ಸಂಪೂರ್ಣ ಜಾಲವನ್ನು 24 ಗಂಟೆಗಳಲ್ಲಿ ನಾಶಪಡಿಸುತ್ತೇನೆ” ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...