ಬಿಹಾರ | ಆಶಾ, ಮಮತಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿದ ಸಿಎಂ ನಿತೀಶ್ ಕುಮಾರ್

Date:

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಶಾ ಮತ್ತು ಮಮತಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ.

“2005ರ ನವೆಂಬರ್‌ನಲ್ಲಿ ಸರ್ಕಾರ ರಚನೆಯಾದಾಗಿನಿಂದ ನಾವು ಆರೋಗ್ಯ ಸೇವೆಗಳನ್ನು ಸುಧಾರಿಸಲು ವ್ಯಾಪಕವಾಗಿ ಕೆಲಸ ಮಾಡಿದ್ದೇವೆ. ಆಶಾ ಮತ್ತು ಮಮತಾ ಕಾರ್ಯಕರ್ತರು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅವರ ಗೌರವಧನವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ,” ಎಂದು ನಿತೀಶ್ ಕುಮಾರ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಈಗಿನ 1,000 ರೂ. ಬದಲಿಗೆ 3,000 ರೂ. ಗೌರವಧನ ನೀಡಲಾಗುವುದು. ಮಮತಾ ಕಾರ್ಯಕರ್ತರಿಗೆ ಪ್ರತಿ ಹೆರಿಗೆಗೆ 300 ರೂ. ಬದಲಿಗೆ 600 ರೂ. ಗೌರವಧನ ನೀಡಲು ನಿರ್ಧರಿಸಲಾಗಿದೆ. “ಇದರಿಂದ ಆಶಾ ಮತ್ತು ಮಮತಾ ಕಾರ್ಯಕರ್ತರ ಮನೋಸ್ಥೈರ್ಯ ಹೆಚ್ಚುತ್ತದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳು ಬಲಿಷ್ಠಗೊಳ್ಳುತ್ತವೆ,” ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಇತ್ತೀಚೆಗೆ, ಬಿಹಾರ ಸಚಿವ ಸಂಪುಟವು ಗೃಹ ಬಳಕೆದಾರರಿಗೆ ಪ್ರತಿ ತಿಂಗಳು 125 ಯೂನಿಟ್‌ವರೆಗಿನ ಉಚಿತ ವಿದ್ಯುತ್ ವಿತರಣೆಯ ಪ್ರಸ್ತಾಪಕ್ಕೆ ಅನುಮೋದನೆ ನೀಡಿತ್ತು. ಈ ಯೋಜನೆ ಆಗಸ್ಟ್ 1ರಿಂದ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿತ್ತು.

ಜುಲೈ 18ರಂದು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬಿಹಾರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ 7,200 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲು, ಮೀನುಗಾರಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಮತ್ತು ಯೋಜನೆಗಳಿಗೆ ಚಾಲನೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...