ಬಿಹಾರ | ಜಾತಿಗಣತಿ, ಎಸ್‌ಐಆರ್‌, ಚು. ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕರಿಗೆ ಈಗ ‘ನಾಯಿ’ ಎಣಿಸುವ ಕೆಲಸ

Date:

ಬಿಹಾರದಲ್ಲಿ, ಶಿಕ್ಷಕರು ಈಗಾಗಲೇ ಮತಪಟ್ಟಿಗಳ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್‌) ಮತ್ತು ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ. ಜಾತಿ ಸಮೀಕ್ಷೆಗಳಿಗೂ ಕೆಲಸ ಮಾಡಿದ್ದಾರೆ. ಇದೀಗ, ಅವರಿಗಾಗಿ ಮತ್ತೊಂದು ಕೆಲಸ ಕಾಯುತ್ತಿದೆ. ಅದು, ಶಾಲೆಗಳಿಗೆ ವಿದ್ಯಾರ್ಥಿಗಳು ಮತ್ತು ಪರೀಕ್ಷೆಗಳಿಗೆ ಸಂಬಂಧಿಸಿದ್ದಲ್ಲ. ಬದಲಾಗಿ, ನಾಯಿಗಳಿಗೆ ಸಂಬಂಧಿಸಿದೆ. ಈಗ, ಬಿಹಾರದಲ್ಲಿ ನಾಯಿಗಳ ಗಣತಿ ಮಾಡುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಬಿಹಾರದ ರೋಹ್ತಾಸ್ ಜಿಲ್ಲೆಯ ಸಸಾರಾಮ್ ಪುರಸಭೆಯು ಇತ್ತೀಚೆಗೆ ಹೊರಡಿಸಿದ ಸುತ್ತೋಲೆಯು, ಶಿಕ್ಷಕ ವಲಯದಲ್ಲಿ ಚರ್ಚೆ ಮತ್ತು ವಿವಾದ ಹುಟ್ಟುಹಾಕಿದೆ. ಶಿಕ್ಷಣ ಕ್ಷೇತ್ರವೇ ಬಳಲುತ್ತಿರುವ ರಾಜ್ಯದಲ್ಲಿ, ಶಿಕ್ಷಕರನ್ನು ಪದೇ-ಪದೇ ಇತರ ಕೆಲಸಗಳಿಗೆ ನಿಯೋಜಿಸಲಾಗುತ್ತಿರುವುದು, ರಾಜ್ಯದಲ್ಲಿನ ಆದ್ಯತೆಗಳ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ನಿರ್ದೇಶನವನ್ನು ಹೊರಡಿಸಲಾಗಿದೆ ಎಂದು ಪುರಸಭೆ ಹೇಳಿಕೊಂಡಿದೆ. ಸುತ್ತೋಲೆಯಲ್ಲಿ; ಸಸಾರಾಮ್ ಪುರಸಭೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಶಾಲೆಗಳು ತಮ್ಮ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಸಂಬಂಧಿಸಿದ ಡೇಟಾವನ್ನು ಸಂಗ್ರಹಿಸಬೇಕು ಮತ್ತು ಪುರಸಭೆಗೆ ಒದಗಿಸಬೇಕು. ಅದಕ್ಕಾಗಿ, ನೋಡಲ್ ಅಧಿಕಾರಿ, ಶಿಕ್ಷಕರನ್ನು ನೇಮಿಸಲು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ದೇಶನದ ಪ್ರಕಾರ, ಶಾಲಾ ಆವರಣದ ಒಳಗೆ ಮತ್ತು ಸುತ್ತಮುತ್ತ ಇರುವ ಬೀದಿ ನಾಯಿಗಳ ಸಂಖ್ಯೆ, ಅವುಗಳ ಸ್ಥಿತಿ ಹಾಗೂ ಅವುಗಳ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿಯನ್ನು ಒದಗಿಸುವ ಜವಾಬ್ದಾರಿ ನಿಯೋಜಿತ ನೋಡಲ್ ಶಿಕ್ಷಕರದ್ದಾಗಿರುತ್ತದೆ. ಬೀದಿ ನಾಯಿಗಳ ಸಂಖ್ಯೆಯನ್ನು ನಿರ್ವಹಿಸಲು ಪುರಸಭೆಯು ‘ಡಾಗ್‌ ಪೌಂಡ್‌’ಅನ್ನು ಸ್ಥಾಪಿಸಲು ಸಿದ್ದತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಮುಗಿಯದ ಅಮೆರಿಕದ ‘ಸಾಮ್ರಾಜ್ಯಶಾಹಿ’ ಹಸಿವು: ವೆನೆಜುವೆಲಾ ನಂತರ ಗ್ರೀನ್‌ಲ್ಯಾಂಡ್‌ ಸರದಿ?

ಈ ಆದೇಶವು ಈಗಾಗಲೇ ಹಲವಾರು ಶೈಕ್ಷಣಿಕೇತರ ಜವಾಬ್ದಾರಿಗಳಿಂದ ಬಳಲುತ್ತಿರುವ ಶಿಕ್ಷಕರಲ್ಲಿ ಅಸಹನೆ ಹುಟ್ಟುಹಾಕಿದೆ. ಆದರೂ, ಅವರು ಬೀದಿ ನಾಯಿಗಳ ಕುರಿತು ವರದಿ ಮಾಡುವ ಹೆಚ್ಚುವರಿ ಕೆಲಸವನ್ನು ವಹಿಸಿಕೊಳ್ಳುವ ನಿರೀಕ್ಷೆಯಿದೆ.

“ಬೀದಿ ನಾಯಿಗಳ ಕುರಿತು ನಿಖರವಾದ ಸ್ಥಳೀಯ ಮಟ್ಟದ ಮಾಹಿತಿಯನ್ನು ಸಂಗ್ರಹಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ಶಿಕ್ಷಣ ಸಂಸ್ಥೆಗಳನ್ನು ಕೇಳಲಾಗಿದೆ. ಇದು ಯೋಜನೆಗೆ ಸಹಾಯ ಮಾಡುತ್ತದೆ” ಎಂದುಪುರಸಭೆ ಆಯುಕ್ತ ವಿಕಾಸ್ ಕುಮಾರ್ ಹೇಳಿದ್ದಾರೆ.

ಆದಾಗ್ಯೂ, ಈ ಕ್ರಮವನ್ನು ಶಿಕ್ಷಕರು ವಿರೋಧಿಸಿದ್ದಾರೆ. ಅನೇಕರು ಹತಾಶೆ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ, ಜನಗಣತಿ ಕೆಲಸಗಳು, ಬಿಎಲ್‌ಒ ಕರ್ತವ್ಯಗಳಿಂದಾಗಿ ಬೋಧನೆಗೆ ಸಮಯವೇ ದೊರೆಯುತ್ತಿಲ್ಲ. ಮಾತ್ರವಲ್ಲದೆ, ಬೋಧನೇತರ ಕೆಲಸಗಳಿಗೆ ನಿರಂತರ ನಿಯೋಜನೆಗಳಿಂದ ಬಸವಳಿಯುವಂತೆ ಮಾಡಿದೆ. ಈಗ, ಬೀದಿ ನಾಯಿಗಳ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಕಾರ್ಯವನ್ನು ನಿಯೋಜಿಸುತ್ತಿರುವುದು ಮತ್ತಷ್ಟು ಬಸವಳಿಯುವಂತೆ ಮಾಡುತ್ತದೆ ಎಂದು ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...