ಆಘಾತಕಾರಿ | ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: 36 ಲಕ್ಷ ಜನರು ಅವರ ವಿಳಾಸಗಳಲ್ಲಿ ಇಲ್ಲ ಎಂದ ಚು. ಆಯೋಗ

Date:

ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ನಡೆಸುತ್ತಿದೆ. ಪರಿಷ್ಕರಣೆಯ ಗುಡುವು ಜುಲೈ 25ರವರೆಗಿದ್ದು, ಈಗಾಗಲೇ 90.12% ಮತದಾರರ ನಮೂನೆ ಅರ್ಜಿಗಳು ಬಂದಿವೆ ಎಂದು ಆಯೋಗ ಹೇಳಿಕೊಂಡಿದೆ. ಅಲ್ಲದೆ, 36 ಲಕ್ಷಕ್ಕೂ ಹೆಚ್ಚು ಜನರು ‘ಅವರ ವಿಳಾಸಗಳಲ್ಲಿ ಇಲ್ಲ’ವೆಂದೂ ಹೇಳಿದೆ. ಇದು, ಲಕ್ಷಾಂತರ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಾಧ್ಯತೆ ಇದ್ದು, ಸಾಮೂಹಿಕ ಹೊರದಬ್ಬುವಿಕೆ ಎಂದು ಬಣ್ಣಿಸಲಾಗಿದೆ.

ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ ಜೂನ್ 24ರಂದು ಆಯೋಗವು ಆದೇಶಿಸಿತ್ತು. ಜೂನ್ 25ರಿಂದ ಪ್ರಕ್ರಿಯೆ ಆರಂಭವಾಯಿತು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತದಾರರು ತಮ್ಮ ಪೌರತ್ವ ಮತ್ತು ಬಿಹಾರದ ನವಾಸಿಗಳು ಎಂಬುದನ್ನು ಸಾಬೀತು ಮಾಡಬೇಕೆಂಬುದು ಆಯೋಗ ಹೊರಡಿಸಿದ್ದ ಆದೇಶದ ಸಾರವಾಗಿತ್ತು. ಆಯೋಗದ ಪೌರತ್ವ ಪರಿಷ್ಕರಣೆ ಮಾದರಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದಾಗ್ಯೂ, ಎಸ್‌ಐಆರ್‌ ಮುಂದುವರೆಸಲು ಅನುಮತಿ ನೀಡಿದ ನ್ಯಾಯಾಲಯವು, ಆಧಾರ್‌ ಕಾರ್ಡ್‌ ರೀತಿಯ ಗುರುತಿನ ಚೀಟಿಗಳನ್ನು ಪುರಾವೆಗಳಾಗಿ ಪರಿಗಣಿಸಲು ಸೂಚಿಸಿತ್ತು.

ಬಿಹಾರದಲ್ಲಿ ಒಟ್ಟು 7.8 ಕೋಟಿ ನೋಂದಾಯಿತ ಮತದಾರರಿದ್ದಾರೆ. ಅವರೆಲ್ಲರೂ ಜುಲೈ 25ರೊಳಗೆ ತಮ್ಮ ಗಣತಿ ನಮೂನೆಯನ್ನು ಸಲ್ಲಿಸಬೇಕಿದೆ. ಅವುಗಳನ್ನು ಪರಿಶೀಲಿಸಿ ಆಗಸ್ಟ್‌ 1ರಂದು ಆಯೋಗವು ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ, ಶುಕ್ರವಾರ ಮಾಹಿತಿ ಹಂಚಿಕೊಂಡಿರುವ ಆಯೋಗವು ಈವರೆಗೆ 7.11 ಕೋಟಿ (90.12%) ಮತದಾರರು ತಮ್ಮ ನಮೂನೆಗಳನ್ನು ಸಲ್ಲಿಸಿದ್ದಾರೆ. ಅವುಗಳಲ್ಲಿ 6.85 ಕೋಟಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಅವರಲ್ಲಿ, 36.86 ಲಕ್ಷ ಮತದಾರರು (ಒಟ್ಟು ಮತದಾರರಲ್ಲಿ 4.67%) ಅವರ ವಿಳಾಸಗಳಲ್ಲಿ ಇಲ್ಲ. ‘ಬಹುಶಃ’ ಸಾವನ್ನಪ್ಪಿದ್ದಾರೆ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಅವರಲ್ಲಿಯೂ 6,978 ಮತದಾರರನ್ನು ‘ಪತ್ತೆಹಚ್ಚಲು ಸಾಧ್ಯವೇ ಇಲ್ಲ’ ಎಂದು ಹೇಳಿಕೊಂಡಿದೆ.

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ: ‘ಎನ್‌ಆರ್‌ಸಿ’ಗಿಂತಲೂ ಹೆಚ್ಚು ಅಪಾಯಕಾರಿ

‘ಬಹುಶಃ’ ಮರಣ ಹೊಂದಿದ, ಸ್ಥಳಾಂತರಗೊಂಡ ಹಾಗೂ ಪತ್ತೆಯಾಗದ ಮತದಾರರ ನಿಖರ ಸ್ಥಿತಿಗಳನ್ನು ರಾಜಕೀಯ ಪಕ್ಷಗಳ ಜಿಲ್ಲಾ ಅಧ್ಯಕ್ಷರು ಮತ್ತು ಅವರ ಬೂತ್ ಮಟ್ಟದ ಏಜೆಂಟ್‌ಗಳ ನೆರವು ಪಡೆದು, ಜುಲೈ 25ರೊಳಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ಆಯೋಗ ಹೇಳಿದೆ.

ಆಗಸ್ಟ್‌ 1ರಂದು ಕರಡು ಪಟ್ಟಿ ಪ್ರಕಟಿಸಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 1ರವರೆಗೆ ಸಮಯ ಇರುತ್ತದೆ. ಆನಂತರ, ಸೆಪ್ಟೆಂಬರ್ 25ರೊಳಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಚುನಾವಣಾ ಅಧಿಕಾರಿಗಳು ವಿಲೇವಾರಿ ಮಾಡಲಿದ್ದಾರೆ ಎಂದು ಆಯೋಗ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...