ಛತ್ತೀಸ್‌ಗಢ | ಎನ್‌ಕೌಂಟರ್; ಹಿರಿಯ ಮಾವೋವಾದಿ ನಾಯಕ ಸೇರಿ 18 ನಕ್ಸಲರು ಹತ

Date:

ಕಳೆದ ಗುರುವಾರ ಬಿಜಾಪುರ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಹನ್ನೆರಡು ನಕ್ಸಲರ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಇದಾದ ಎರಡು ದಿನಗಳ ಬಳಿಕ ತೆಲಂಗಾಣ ರಾಜ್ಯ ಸಮಿತಿಯ ಹಿರಿಯ ನಾಯಕ ದಾಮೋದರ್ ಸೇರಿದಂತೆ 18 ಕಾರ್ಯಕರ್ತರನ್ನು ಕಳೆದುಕೊಂಡಿರುವುದಾಗಿ ನಕ್ಸಲ್ ಸಂಘಟನೆ ಹೇಳಿಕೆ ನೀಡಿದೆ.

ದಾಮೋದರ್ ಅಲಿಯಾಸ್ ಚೋಕಾ ರಾವ್ ಅವರ ತಲೆಗೆ 50 ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ನಕ್ಸಲೀಯ ಬಿಕ್ಕಟ್ಟಿಗೆ ಪರಿಹಾರದ ಹೊಸ ಮಾದರಿಯನ್ನು ಕಟ್ಟಿಕೊಟ್ಟ ಕರ್ನಾಟಕ : ಶಾಂತಿಗಾಗಿ ನಾಗರಿಕರ ವೇದಿಕೆ ಮೆಚ್ಚುಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐ (ಮಾವೋವಾದಿ) ದಕ್ಷಿಣ ಬಸ್ತಾರ್ ವಿಭಾಗೀಯ ಸಮಿತಿಯ ಕಾರ್ಯದರ್ಶಿ ಗಂಗಾ ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ದಾಮೋದರ್ ಹತ್ಯೆಯು ನಮ್ಮ ಸಂಘಟನೆ ದೊಡ್ಡ ನಷ್ಟವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇನ್ನು ಗುಂಡಿನ ಚಕಮಕಿಯಲ್ಲಿ ಐದು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

“ಬಸ್ತರ್ ಈಗ ದೇಶದ ಅತ್ಯಂತ ಮಿಲಿಟರಿ ವಲಯವಾಗಿ ಮಾರ್ಪಟ್ಟಿದೆ. ಮಾವೋವಾದಿ ವಿರೋಧಿ ಅಭಿಯಾನದ ನೆಪದಲ್ಲಿ ಬುಡಕಟ್ಟು ಸಮುದಾಯಗಳನ್ನು ಪದೇ ಪದೇ ಗುರಿಯಾಗಿಸಲಾಗುತ್ತಿದೆ” ಎಂದು ಕೂಡಾ ಹೇಳಿಕೆಯಲ್ಲಿ ಸೇರಿಸಲಾಗಿದೆ.

ಇನ್ನು ಬಸ್ತರ್ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರರಾಜ್ ಪಿ, “ನಕ್ಸಲರು ತಮ್ಮ ಕಾರ್ಯಕರ್ತರ ಸಾವು ಮತ್ತು ಗ್ರಾಮಸ್ಥರ ಮೇಲೆ ದೌರ್ಜನ್ಯದ ಬಗ್ಗೆ ಆಧಾರರಹಿತವಾದ ಆರೋಪವನ್ನು ಮಾಡುತ್ತಿದ್ದಾರೆ. ನಿಷೇಧಿತ ಮಾವೋವಾದಿ ಸಂಘಟನೆಯನ್ನು ನಿರ್ಮೂಲನೆ ಮಾಡಲು ನಾವು ಈ ಕಾರ್ಯಾಚರಣೆ ಮುಂದುವರೆಸುತ್ತೇವೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...