ಬಿಲ್ಕಿಸ್ ಬಾನೊ ಪ್ರಕರಣ | ಗುಜರಾತ್ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿ ವಜಾ

Date:

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು. ಇದೀಗ, ನ್ಯಾಯಾಲಯವು ತನ್ನ ತೀರ್ಪನ್ನು ಮರು ಪರಿಶೀಲಿಸಬೇಕೆಂದು ಗುಜರಾತ್ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋದ್ರಾ ಹತ್ಯಾಕಾಂಡದ ವೇಳೆ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಆದರೆ, ಇತ್ತೀಚೆಗೆ ಅಪರಾಧಿಗಳನ್ನು ಸನ್ನಡತೆಯ ಆಧಾರದ ಮೇಲೆ, ಕ್ಷಮಾದಾನ ನೀಡಿ ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿ, ಜೈಲಿಗೆ ಶರಣಾಗುವಂತೆ ಅಪರಾಧಿಗಳಿ ಸೂಚನೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟ್‌ನ ತೀರ್ಪನ್ನು ಮರುಪರಿಶೀಲನೆ ನಡೆಸುವಂತೆ ಗುಜರಾತ್ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಮತ್ತು ಉಜ್ಜಲ ಭುಯಾನ್ ಅವರಿದ್ದ ನ್ಯಾಯಪೀಠ, ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ.

“ಪುನರ್ ಪರಿಶೀಲನಾ ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಆದೇಶ ತೃಪ್ತಿದಾಯಕವಾಗಿದೆ. ಪುನರ್ ಪರಿಶೀಲಿಸಲು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ, ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...