ಚುನಾವಣಾ ಬಾಂಡ್ ಮೂಲಕ 1700 ಕೋಟಿ ದೇಣಿಗೆ ಪಡೆದ ಬಿಜೆಪಿ

Date:

ಬಿಜೆಪಿಯ ಆದಾಯ ಒಂದು ವರ್ಷದಲ್ಲಿ ಶೇಕಡ 83 ಏರಿಕೆ ಕಂಡು 2023-24ನೇ ಹಣಕಾಸು ವರ್ಷದಲ್ಲಿ 4340.5 ಕೋಟಿ ರೂಪಾಯಿಗೆ ಏರಿದೆ. ಈ ಪೈಕಿ 1685.6 ಕೋಟಿ ರೂಪಾಯಿ ಚುನಾವಣಾ ಬಾಂಡ್ ಗಳ ಮೂಲಕ ಬಂದಿದೆ.

2022-23ನೇ ಹಣಕಾಸು ವರ್ಷದಲ್ಲಿ ಪಕ್ಷದ ಆದಾಯ 2360.8 ಕೋಟಿ ರೂಪಾಯಿಗಳಾಗಿತ್ತು. ಪಕ್ಷ ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ನೀಡಿದ ವಾರ್ಷಿಕ ಪರಿಶೋಧಿತ ವರದಿಯಲ್ಲಿ ಈ ಅಂಕಿ ಅಂಶಗಳು ಸೇರಿವೆ. ಚುನಾವಣಾ ಬಾಂಡ್ ಯೋಜನೆ ಜಾರಿಗೆ ಬಂದ ಬಳಿಕ ಪಕ್ಷ ಗಳಿಸಿದ ಗರಿಷ್ಠ ದೇಣಿಗೆ ಇದಾಗಿದೆ.

ಕಾಂಗ್ರೆಸ್ ಪಕ್ಷದ ಆದಾಯ ಶೇಕಡ ಇದೇ ಅವಧಿಯಲ್ಲಿ 170ರಷ್ಟು ಏರಿಕೆ ಕಂಡು 452.4 ಕೋಟಿ ರೂಪಾಯಿಯಿಂದ 1225 ಕೋಟಿಗೆ ಹೆಚ್ಚಿದೆ. ಕಾಂಗ್ರೆಸ್ ಪಕ್ಷ ಬಾಂಡ್ ಮಾರ್ಗದ ಮೂಲಕ ಪಡೆದ ದೇಣಿಗೆ ಕೂಡಾ ಶೇಕಡ 384 ರಷ್ಟು ಹೆಚ್ಚಳ ಕಂಡಿದೆ. 2023ನೇ ಹಣಕಾಸು ವರ್ಷದಲ್ಲಿ ಚುನಾವಣಾ ಬಾಂಡ್ ಮೂಲಕ ಪಕ್ಷ 171 ಕೋಟಿ ರೂಪಾಯಿ ದೇಣಿಗೆ ಪಡೆದಿದ್ದರೆ, ಮರು ವರ್ಷ ಇದು 828.4 ಕೋಟಿಗೆ ಹೆಚ್ಚಿದೆ. ಬಾಂಡ್ ಗಳ ಮೂಲಕ ಗರಿಷ್ಠ ಆದಾಯ ಪಡೆದ ಎರಡನೇ ಪಕ್ಷವಾಗಿ ಕಾಂಗ್ರೆಸ್ ಹೊರಹೊಮ್ಮಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ಬಿಆರ್ ಎಸ್ ಪಕ್ಷ ಒಟ್ಟು 685.5 ಕೋಟಿ ರೂಪಾಯಿ ಆದಾಯವನ್ನು ಘೋಷಿಸಿದ್ದು, ಕಾಂಗ್ರೆಸ್ ಪಕ್ಷ ಅದನ್ನು ಹಿಂದಿಕ್ಕಿದೆ. ಅಂತೆಯೇ ಟಿಎಂಸಿ 2023-24ರಲ್ಲಿ ಬಾಂಡ್ ಮೂಲಕ 612.4 ಕೋಟಿ ರೂಪಾಯಿ ಸ್ವೀಕರಿಸಿದೆ. ಬಿಜೆಪಿಯ ವೆಚ್ಚ ಕೂಡಾ ಶೇಕಡ 62ರಷ್ಟು ಹೆಚ್ಚಿದ್ದು, 2022-23ರಲ್ಲಿ ಇದ್ದ 1361.7 ಕೋಟಿಯಿಂದ 2211.7 ಕೋಟಿಗೆ ಏರಿಕೆಯಾಗಿದೆ. ಈ ಪೈಕಿ 1754 ಕೋಟಿ ರೂಪಾಯಿಗಳನ್ನು ಚುನಾವಣೆ ಮತ್ತು ಸಾಮಾನ್ಯ ಪ್ರಚಾರಕ್ಕೆ ವೆಚ್ಚ ಮಾಡಿದೆ.

ಕಾಂಗ್ರೆಸ್ ಪಕ್ಷದ ವೆಚ್ಚ ಕೂಡಾ ಈ ಅವಧಿಯಲ್ಲಿ ಶೇಕಡ 120ರಷ್ಟು ಏರಿಕೆಯಾಗಿದ್ದು, 467.1 ಕೋಟಿಯಿಂದ 1025.2 ಕೋಟಿಗೆ ಹೆಚ್ಚಿದೆ. ಪಕ್ಷ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ 49.6 ಕೋಟಿ ರೂಪಾಯಿ ವೆಚ್ಚ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...