“ಅಧಿಕಾರದ ಮದದಲ್ಲಿ ಬಿಜೆಪಿ ಕುರುಡಾಗಿದೆ”: ಶಂಕರಾಚಾರ್ಯರ ನಿರ್ಗಮನಕ್ಕೆ ಅಖಿಲೇಶ್ ಯಾದವ್ ಆಕ್ರೋಶ

Date:

ಪ್ರಯಾಗರಾಜ್‌ನ ಮಾಘ ಮೇಳದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಅರ್ಧಕ್ಕೆ ನಿಲ್ಲಿಸಿ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಬೇಸರದಿಂದ ನಿರ್ಗಮಿಸಿದ ಘಟನೆಯನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀವ್ರವಾಗಿ ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಅಧಿಕಾರದ ಮದದಲ್ಲಿ ಎಷ್ಟರಮಟ್ಟಿಗೆ ಕುರುಡಾಗಿದೆ ಎಂದರೆ, ಅದಕ್ಕೆ ಸಾಧು-ಸಂತರ ನೋವು ಕೂಡ ಕಾಣಿಸುತ್ತಿಲ್ಲ,” ಎಂದು ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಬುಧವಾರ ಶಂಕರಾಚಾರ್ಯರು ಮೇಳದ ಪ್ರದೇಶವನ್ನು ತೊರೆದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ (ಟ್ವಿಟರ್) ಪೋಸ್ಟ್ ಮಾಡಿರುವ ಅಖಿಲೇಶ್, “ಜಗದ್ಗುರು ಶಂಕರಾಚಾರ್ಯರು ಪವಿತ್ರ ಸ್ನಾನವನ್ನೂ ಮಾಡದೇ, ಅವಮಾನಿತರಾಗಿ ವಾಪಸಾಗುತ್ತಿರುವುದು ದೇಶಕ್ಕೆ ‘ಅತ್ಯಂತ ಅಶುಭ’ ಸಂಗತಿಯಾಗಿದೆ. ಸನಾತನ ಧರ್ಮದ ಬಗ್ಗೆ ಮಾತನಾಡುವವರೇ ಇಂದು ಸಂತರ ಸಂಪ್ರದಾಯವನ್ನು ಮುರಿದಿದ್ದಾರೆ. ಈ ಅಹಂಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ,” ಎಂದು ಕಿಡಿಕಾರಿದ್ದಾರೆ.

ಗೋವನ್ನು ‘ರಾಷ್ಟ್ರ ಮಾತೆ’ ಎಂದು ಘೋಷಿಸಬೇಕು ಮತ್ತು ಗೋಹತ್ಯೆ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಎಂದು ಒತ್ತಾಯಿಸಿ ಶಂಕರಾಚಾರ್ಯರು ಮಾಘ ಮೇಳದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ತಮಗೆ ಪವಿತ್ರ ಸಂಗಮ ಸ್ನಾನಕ್ಕೆ ಮತ್ತು ಪರಿಕ್ರಮಕ್ಕೆ ಆಡಳಿತ ಮತ್ತು ಪೊಲೀಸರು ಅಡ್ಡಿಪಡಿಸಿದರು ಎಂದು ಆರೋಪಿಸಿದ ಅವರು, ಬುಧವಾರ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು. “ಸರ್ಕಾರದ ನಡವಳಿಕೆ ನಮಗೆ ತೀವ್ರ ನೋವು ತಂದಿದೆ. ನಾವು ಬಾರ ಮನಸ್ಸಿನಿಂದ ಮತ್ತು ಶೂನ್ಯ ಭಾವನೆಯೊಂದಿಗೆ ಇಲ್ಲಿಂದ ಹೋಗುತ್ತಿದ್ದೇವೆ,” ಎಂದು ಸ್ವಾಮೀಜಿ ಭಾವುಕರಾಗಿ ನುಡಿದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...