ಕಾಸ್‌ಗಂಜ್‌ ಸಾಮೂಹಿಕ ಅತ್ಯಾಚಾರ ಪ್ರಕರಣ; ಬಿಜೆಪಿ ನಾಯಕ ಸೇರಿ ಎಂಟು ಮಂದಿ ಬಂಧನ

Date:

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಏಪ್ರಿಲ್ 10ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ನಾಯಕ ಅಖಿಲೇಶ್ ಪ್ರತಾಪ್ ಸಿಂಗ್ ಸೇರಿದಂತೆ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಾಪ್ ಸಿಂಗ್ ಕಾಸ್‌ಗಂಜ್‌ನ ಶಾಸಕ ದೇವೇಂದ್ರ ರಜಪುತ್ ಮತ್ತು ಹರಿಓಂ ವರ್ಮಾ ಅವರ ಆಪ್ತ ಎಂದು ಹೇಳಲಾಗಿದೆ.

ಪ್ರತಾಪ್ ಸಿಂಗ್ ಕಳೆದ 15 ವರ್ಷಗಳಿಂದ ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ. ಬಿಜೆಪಿ ಶಾಸಕ ಮತ್ತು ಕಾಸ್‌ಗಂಜ್‌ನ ಮಾಜಿ ಸಂಸದ ರಜ್‌ವೀರ್ ಸಿಂಗ್ ಅಲಿಯಾಸ್ ರಜ್ಜು ಬೈಯಾ ಅವರ ಜೊತೆಯೂ ಹಲವು ಬಾರಿ ಕಾಣಿಸಿಕೊಂಡಿದ್ದ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಅಪ್ರಾಪ್ತ ಬಾಲಕನ ಮೇಲೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪೊಲೀಸರು ಕಾಸ್‌ಗಂಜ್‌ನ ಹಲವು ಪ್ರದೇಶಗಳಿಗೆ ಶೋಧ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಬಿಜೆಪಿ ನಾಯಕನನ್ನು ಗಬ್ಬರ್ ಎಂದು ಕೂಡಾ ಕರೆಯಲಾಗುತ್ತದೆ. ಅಕ್ರಮ ಗಣಿಗಾರಿಕೆ ನಡೆಸಿದ ಆರೋಪವನ್ನು ಹೊತ್ತಿರುವ ಗಬ್ಬರ್ ಈಗಾಗಲೇ ಕ್ರಿಮಿನಲ್ ಹಿನ್ನೆಲೆ ಹೊಂದಿರುವವನು.

ಏಪ್ರಿಲ್ 10ರಂದು ಸುಮಾರು 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ತಾನು ಮತ್ತು ತನ್ನನ್ನು ವಿವಾಹವಾಗುವ ಯುವಕ ಪಡಿತರ ಚೀಟಿ ಸಂಬಂಧಿತ ಸಣ್ಣ ಕೆಲಸವೊಂದನ್ನು ಮುಗಿಸಿ ಹಿಂದಿರುಗುತ್ತಿದ್ದಾಗ ಹಸಿವಾದ ಕಾರಣ ಕಾಲುವೆಯೊಂದರ ಬಳಿ ಆಹಾರ ಸೇವಿಸಲು ನಿಂತೆವು. ಈ ವೇಳೆ ಆರೋಪಿಗಳು ಬಂದು ಹಲ್ಲೆ ನಡೆಸಿ, ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ರೈಲಿನಿಂದ ಯುವತಿ ಅಪಹರಣ; ಮೂವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

“ನಾವಿಬ್ಬರು ಜೊತೆಯಾಗಿ ಕೂತು ಆಹಾರ ಸೇವಿಸುವುದನ್ನು ನೋಡಿದ ಆರೋಪಿಗಳು ಬಂದು ನಮ್ಮ ಮೇಲೆ ಹಲ್ಲೆ ಮಾಡಿದರು. ನನ್ನನ್ನು ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ. ನನ್ನ ಪ್ರೇಮಿಯ ಎದುರೇ ಮೂವರು ಅತ್ಯಾಚಾರ ನಡೆಸಿದ್ದಾರೆ” ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

ಆರೋಪಿಗಳು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದು, ಸಂತ್ರಸ್ತರ ಬಳಿಯಿದ್ದ ಐದು ಸಾವಿರ ರೂಪಾಯಿ ನಗದು, ಚಿನ್ನದ ಸರ, ಕಿವಿಯೋಳೆಯನ್ನೂ ದೋಚಿದ್ದಾರೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಗಬ್ಬರ್ ಸೇರಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರ ಹುಡುಕಾಟ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...