ಜಮ್ಮು ಕಾಶ್ಮೀರದ ಮಾಜಿ ಶಾಸಕ, ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಆತ್ಮಹತ್ಯೆ

Date:

ಜಮ್ಮು ಕಾಶ್ಮೀರದ ಗುರೆಜ್‌ನ ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಾನ್ ತುಳಸಿಬಾಗ್ ಸರ್ಕಾರಿ ವಸತಿಗೃಹದೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಜೆಪಿ ವಕ್ತಾರ ಅಲ್ತಾಫ್ ಠಾಕೂರ್ ಈ ಘಟನೆಯನ್ನು ದೃಢಪಡಿಸಿದ್ದಾರೆ. ಖಾನ್ ಆತ್ಮಹತ್ಯೆ ಮಾಡಿಕೊಂಡಿರುವ ಹಿಂದಿನ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಬೀದರ್‌ | ಅನ್ನದಾತರ ಸಾವಿಗೆ ಕೊನೆಯಿಲ್ಲ : 5 ವರ್ಷಗಳಲ್ಲಿ 100 ದಾಟಿದ ರೈತರ ಆತ್ಮಹತ್ಯೆ ಸಂಖ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಜಮ್ಮು ಮತ್ತು ಕಾಶ್ಮೀರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಫಕೀರ್ ಮೊಹಮ್ಮದ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಮೃತರ ಆತ್ಮಕ್ಕೆ ಶಾಶ್ವತ ಶಾಂತಿ ಲಭಿಸಲಿ ಮತ್ತು ಕುಟುಂಬಕ್ಕೆ ಈ ನಷ್ಟವನ್ನು ಭರಿಸುವ ಶಕ್ತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಖಾನ್ ನಿಧನದ ಬಗ್ಗೆ ಜಮ್ಮು ಕಾಶ್ಮೀರ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ. ಗುರೆಜ್‌ನ ಅಭಿವೃದ್ಧಿಗಾಗಿ ಶ್ರಮಿಸಿದ ನಾಯಕ ಎಂದು ಬಣ್ಣಿಸಿದ್ದಾರೆ. ಹಾಗೆಯೇ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸುನಿಲ್ ಶರ್ಮಾ ಮತ್ತು ಗುರೆಜ್ ಶಾಸಕ ನಜೀರ್ ಅಹ್ಮದ್ ಖಾನ್ (ಗುರೇಜಿ) ಕೂಡಾ ಖಾನ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ | ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಿ : ಕೆ.ಬಿ.ವಾಸು

ಫಕೀರ್ ಮೊಹಮ್ಮದ್ ಖಾನ್ 1996ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಆಯ್ಕೆಯಾದರು. 2020ರಲ್ಲಿ ಬಿಜೆಪಿಗೆ ಸೇರಿದ್ದು, ಕಳೆದ ವರ್ಷ ಬಿಜೆಪಿ ಟಿಕೆಟ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಆದರೆ ಪರಾಭವಗೊಂಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...