ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ: ಸುವೇಂದು ಅಧಿಕಾರಿ

Date:

ಕಲ್ಲಿದ್ದಲು ಹಗರಣಕ್ಕೆ ಸಂಬಂಧ ಕಲ್ಪಿಸಿ ತಮ್ಮ ವಿರುದ್ಧ ಆರೋಪ ಹೊರಿಸಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ಪರಿಹಾರ ಕೋರಿ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

“ಮೊದಲು ಮಮತಾ ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದೆ, ಆದರೆ ಅವರು ಉತ್ತರ ನೀಡದ ಕಾರಣ ಅಲಿಪುರ್ ನ್ಯಾಯಾಲಯದಲ್ಲಿ ಈ ಕುರಿತು ಮೊಕದ್ದಮೆ ದಾಖಲಿಸಿದ್ದೇನೆ” ಎಂದು ಸುವೇಂದು ಅಧಿಕಾರಿ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ʼಪುರುಷಹಂಕಾರʼದ ದೌರ್ಜನ್ಯಕ್ಕೆ ಕೊನೆ ಎಂದು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲ್ಲಿದ್ದಲು ಹಗರಣದಲ್ಲಿ ನನ್ನ ಪಾತ್ರವಿದೆ ಎಂಬ ನಿಮ್ಮ ಕಾಲ್ಪನಿಕ ಆರೋಪಗಳಿಗೆ ಸಂಬಂಧಿಸಿದ ಮಾನನಷ್ಟ ನೋಟಿಸ್‌ಗೆ ನೀವು ಉತ್ತರ ನೀಡದೆ ಮೌನವಹಿಸಿರುವುದರಿಂದ ನಿಮಗೆ ಯಾವುದೇ ರಕ್ಷಣೆ ಸಿಗುವುದಿಲ್ಲ. ನಿಮ್ಮ ದುಸ್ಸಾಹಸಕ್ಕಾಗಿ ನಿಮ್ಮನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸುವ ನನ್ನ ಮಾತನ್ನು ನಾನು ಉಳಿಸಿಕೊಂಡಿದ್ದೇನೆ. ಇಂದು ನಿಮ್ಮ ವಿರುದ್ಧ ಮೊಕದ್ದಮೆ ಹೂಡಿದ್ದೇನೆ. ನೀವು ನಿಮ್ಮ ವಕೀಲರನ್ನು ಬೇಗ ಸಂಪರ್ಕಿಸಿ. ಇಲ್ಲದಿದ್ದರೆ ನೀವು ಶೀಘ್ರದಲ್ಲೇ ನನಗೆ 100 ಕೋಟಿ ರೂಪಾಯಿ ಪರಿಹಾರವನ್ನು ನೀಡಬೇಕಾಗುತ್ತದೆ. ನಾನು ಅದನ್ನು ದೇಣಿಗೆಯಾಗಿ ನೀಡುತ್ತೇನೆ” ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ ತಮ್ಮ ಮೇಲೆ ಆರೋಪ ಹೊರಿಸಿದ ಮಮತಾ ಬ್ಯಾನರ್ಜಿಗೆ ತಮ್ಮ ವಕೀಲರ ಮೂಲಕ ಸುವೇಂದು ಅಧಿಕಾರಿ ಈ ಮೊದಲು ನೋಟಿಸ್ ಕಳುಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...