ಪಕ್ಷದ ಕಚೇರಿಯಲ್ಲೇ ಮಹಿಳೆಯ ಜೊತೆ ಬಿಜೆಪಿ ನಾಯಕನ ಅಸಭ್ಯ ವರ್ತನೆ

Date:

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಮಹಿಳೆಯೊಬ್ಬರ ಜೊತೆಗೆ ಅಸಭ್ಯವಾಗಿ ವರ್ತಿಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಪಕ್ಷ ಕಳಂಕಿತ ಮುಖಂಡನಿಗೆ ನೋಟಿಸ್ ನೀಡಿದೆ.

ಪಕ್ಷದ ಕಾರ್ಯಕರ್ತರು ಈ ವಿಡಿಯೊವನ್ನು ನಾಚಿಕೆಗೇಡು ಎಂದು ಆರೋಪಿಸಿ, ಬಿಜೆಪಿ ಮುಖಂಡರಿಗೆ ದೂರು ನೀಡಿದ್ದರು. ಬಿಜೆಪಿ ಜಿಲ್ಲಾ ಮುಖ್ಯಸ್ಥ ಅಮರ್ ಕಿಶೋರ್ ಕಶ್ಯಪ್, ಈ ಘಟನೆ ಬಗ್ಗೆ ಏಳು ದಿನಗಳ ಒಳಗಾಗಿ ವಿವರಣೆ ನೀಡಬೇಕು ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೊದಿಂದ ಪಕ್ಷದ ಘನತೆಯ ಮೇಲೆ ಋಣಾತ್ಮಕ ಪರಿಣಾಮ ಎದುರಾಗುತ್ತಿದ್ದು, ಇದು ಅಶಿಸ್ತು ಎಂಬುದಾಗಿ ಪರಿಗಣಿಸಲ್ಪಡುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದ ನಾರಾಯಣ ಶುಕ್ಲ ನೋಟಿಸ್ ನಲ್ಲಿ ವಿವರಿಸಿದ್ದಾರೆ. ಅಧ್ಯಕ್ಷರ ಸೂಚನೆ ಮೇರೆಗೆ ಈ ನೋಟಿಸ್ ನೀಡಲಾಗುತ್ತಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ವಿವರಣೆ ನೀಡದಿದ್ದಲ್ಲಿ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

ಏಪ್ರಿಲ್ 12ರಂದು ಈ ವಿಡಿಯೊ ರೆಕಾರ್ಡ್ ಮಾಡಲಾಗಿದ್ದು, ಅಸ್ವಸ್ಥತೆ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯಲು ಮಹಿಳೆ ಜಾಗ ಕೇಳಿದ್ದರು ಎನ್ನುವುದು ಕಶ್ಯಪ್ ಅವರ ವಿವರಣೆ. ಆಕೆಯ ಮನವಿ ಮೇರೆಗೆ ಕಾರಿನಲ್ಲಿ ಕಚೇರಿಗೆ ಕರೆತಂದಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕಾರಿನಲ್ಲಿ ಕಚೇರಿ ಎದುರು ಬಂದಿಳಿದ ಮಹಿಳೆಯ ಜತೆಗಿದ್ದ ಮುಖಂಡ ಆಕೆಯ ಭುಜದ ಮೇಲೆ ಕೈಹಾಕಿಕೊಂಡು ತೆರಳುತ್ತಿರುವ ಹಾಗೂ ಆಕೆಯನ್ನು ಆಲಂಗಿಸಿಕೊಂಡಿರುವುದು ಸಿಸಿಟಿವಿ ವಿಡಿಯೊದಲ್ಲಿ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...