ಯುವತಿ ಕೊಲೆ ಪ್ರಕರಣ: ಬಿಜೆಪಿ ನಾಯಕನ ಪುತ್ರನಿಗೆ ಜೈಲು ಶಿಕ್ಷೆ

Date:

2022ರಲ್ಲಿ 19 ವರ್ಷದ ಯುವತಿ, ರಿಸೆಪ್ಷನಿಸ್ಟ್‌ ಅಂಕಿತಾ ಭಂಡಾರಿ ಅವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಸೇರಿ ಮೂವರನ್ನು ಅಪರಾಧಿಗಳು ಎಂದು ಉತ್ತರಾಖಂಡ ನ್ಯಾಯಾಲಯ ತೀರ್ಪು ನೀಡಿದೆ.

ಪೌರಿ ಜಿಲ್ಲೆಯಲ್ಲಿ ರಿಷಿಕೇಶ ಬಳಿಯ ವನಂತರಾ ರೆಸಾರ್ಟ್‌ನಲ್ಲಿ ರೆಸೆಪ್ಷನಿಸ್ಟ್‌ ಆಗಿದ್ದ ಅಂಕಿತಾ ಭಂಡಾರಿ ಅವರನ್ನು 2022ರ ಸೆಪ್ಟೆಂಬರ್ 18ರಂದು ಕೊಲೆ ಮಾಡಲಾಗಿದೆ. ಈ ಕೊಲೆಯನ್ನು ರೆಸಾರ್ಟ್‌ನ ಮಾಲೀಕನಾಗಿರುವ ಪುಲ್ಕಿತ್ ಆರ್ಯ ಮತ್ತು ಆತನ ಇಬ್ಬರು ಸಹಚರರಾದ ಸೌರಭ್ ಭಾಸ್ಕರ್ ಮತ್ತು ಅಂಕಿತ್ ಗುಪ್ತಾ ಸೇರಿ ಮಾಡಿದ್ದಾರೆ ಎಂಬುದು ಸಾಬೀತಾಗಿದೆ.

ಮೇ 19ರಂದು ಪ್ರಕರಣದ ಅಂತಿಮ ವಾದಗಳನ್ನು ಆಲಿಸಿದ ಕೋಟ್ವಾರ್‌ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ರೀನಾ ನೇಗಿ ಅವರು ತೀರ್ಪನ್ನು ಮೇ 30ಕ್ಕೆ ಕಾಯ್ದಿರಿಸಿದ್ದರು. ಇದೀಗ, ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿ ತೀರ್ಪು ನೀಡಿದ್ದಾರೆ. ಆದಾಗ್ಯೂ, ಶಿಕ್ಷೆಯ ಪ್ರಮಾಣವನ್ನು ಇನ್ನೂ ಘೋಷಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪರಾಧಿ ಪುಲ್ಕಿತ್ ಇತ್ತೀಚೆಗೆ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿನೋದ್ ಆರ್ಯ ಅವರ ಪುತ್ರ. ಪುಲ್ಕಿತ್ ಮತ್ತು ಅಂಕಿತಾ ನಡುವೆ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿತ್ತು. ಆ ಕಾರಣಕ್ಕೆ ಪುಲ್ಕಿತ್ ಮತ್ತು ಆತನ ಸಹಚರರು ಅಂಕಿತಾ ಅವರನ್ನು ಕಾಲುವೆಯ ಬಳಿ ಎಳೆದೊಯ್ದು, ನಾಲುವೆಗೆ ತಳ್ಳಿದ್ದರು ಎಂದು ಆರೋಪಿಸಲಾಗಿತ್ತು. ಆಕೆಯ ಸಾವಿನ ವಿರುದ್ಧ ಉತ್ತರಾಖಂಡದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು.

ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡ (SIT) ನ್ಯಾಯಾಲಯಕ್ಕೆ 500 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು. ವಿಚಾರಣೆಯ ಸಮಯದಲ್ಲಿ, ತನಿಖಾಧಿಕಾರಿ ಸೇರಿದಂತೆ 47 ಸಾಕ್ಷಿಗಳನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...