ಸರ್ಕಾರ ರಚನೆಯ ಹಕ್ಕು ಮಂಡನೆಗೆ ರಾಷ್ಟ್ರಪತಿ ಭೇಟಿ ಮಾಡಲಿರುವ ಎನ್‌ಡಿಎ ನಾಯಕರು

Date:

ನರೇಂದ್ರ ಮೋದಿ ನಾಯಕತ್ವದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡನೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು ಜೂನ್‌ 7 ರಂದು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ ಪ್ರಕಟವಾಗಿ ಎನ್‌ಡಿಎ ಒಕ್ಕೂಟ 292 ಸ್ಥಾನಗಳನ್ನು ಗೆದ್ದ ನಂತರ ಒಕ್ಕೂಟದ ನಾಯಕರೊಂದಿಗೆ ದೆಹಲಿಯಲ್ಲಿ ಇಂದು ಸಭೆ ನಡೆಯುತ್ತಿದೆ.

ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲರ ಕಣ್ಣು ಜೆಡಿಯು, ಟಿಡಿಪಿ ಹಾಗೂ ಜನಸೇನಾ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರ ಮೇಲೆದ್ದು, ಸರ್ಕಾರ ರಚನೆಯಲ್ಲಿ ಈ ನಾಯಕರು ಪ್ರಮುಖ ಪಾತ್ರ ವಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

ಎನ್‌ಡಿಎ ಸಭೆಗೂ ತೆರಳುವ ಮುನ್ನ ಮಾತನಾಡಿದ್ದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು,” ನಾವು ಎನ್‌ಡಿಎ ಜೊತೆಗಿದ್ದು, ಒಕ್ಕೂಟದ ಸಭೆಗೆ ತೆರಳುತ್ತಿದ್ದೇನೆ. ಈ ಸಂದರ್ಭದಲ್ಲಿ ಏನಾದರೂ ಬೆಳವಣಿಗೆಗಳು ನಡೆದರೆ ನಾನು ನಿಮಗೆ ಮಾಹಿತಿ ನೀಡುತ್ತೇನೆ” ಎಂದಿದ್ದರು.

“ರಾಜಕೀಯದಲ್ಲಿ ಏರಿಳಿತಗಳು ಸಾಮಾನ್ಯ. ಇತಿಹಾಸದಲ್ಲಿ ಹಲವು ರಾಜಕೀಯ ನಾಯಕರು ಹಾಗೂ ಪಕ್ಷಗಳನ್ನು ತಿರಸ್ಕರಿಸಲಾಗಿದೆ. ಇದೊಂದು ಐತಿಹಾಸಿಕ ಚುನಾವಣೆ. ವಿದೇಶದಲ್ಲಿರುವ ಮತದಾರರು ಕೂಡ ತಮ್ಮ ಊರಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ” ಎಂದು ಚಂದ್ರಬಾಬು ನಾಯ್ಡು ಹೇಳಿದರು.

ಮೂಲಗಳ ಪ್ರಕಾರ ಚಂದ್ರಬಾಬು ನಾಯ್ಡು ಇಂದು ನಡೆಯುವ ಉನ್ನತ ಮಟ್ಟದ ಎನ್‌ಡಿಎ ಸಭೆಯಲ್ಲಿ ನೂತನ ಸರ್ಕಾರದಲ್ಲಿ ಟಿಡಿಪಿ ಪಕ್ಷಕ್ಕೆ ಸ್ಪೀಕರ್‌ ಹುದ್ದೆ ಕೇಳುವ ಸಾಧ್ಯತೆಯಿದೆ.

ಆಂಧ್ರ ಪ್ರದೇಶದ 25 ಲೋಕಸಭಾ ಕ್ಷೇತ್ರದಲ್ಲಿ ಟಿಡಿಪಿ 16 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. 40 ಕ್ಷೇತ್ರಗಳ ಬಿಹಾರದಲ್ಲಿ ಜೆಡಿಯು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಜಯಿಸಿದ್ದು, ಬಹುಮತದ ಸಂಖ್ಯೆಯ ಕೊರತೆ ಎದುರಿಸುತ್ತಿದೆ. ಎನ್‌ಡಿಎ ಮಿತ್ರಪಕ್ಷಗಳು ಇತರ 52 ಸ್ಥಾನಗಳಲ್ಲಿ ಜಯಗಳಿಸಿವೆ.

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುತ್ತಿದ್ದು, ಜೂ.8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...