ಯುವಕರಿಗೆ 10 ವರ್ಷಗಳಲ್ಲಿ ನಿರುದ್ಯೋಗ ಭಾಗ್ಯ ನೀಡಿದ ಬಿಜೆಪಿ ಸರ್ಕಾರ: ಓವೈಸಿ

Date:

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಯುವಕರಿಗೆ ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಭಾಗ್ಯ ಕರುಣಿಸಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ತಿಳಿಸಿದ್ದಾರೆ.

ಹೈದರಾಬಾದ್‌ನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಓವೈಸಿ, ಬಿಜೆಪಿ ಯೋಜನೆಗಳಾದ ಏಕರೂಪ ನಾಗರಿಕ ಸಂಹಿತೆ, ಸಿಎಎ, ನಿರುದ್ಯೋಗ, ಭಾರತ – ಚೀನಾ ಗಡಿ ವಿವಾದ ಹಾಗೂ ದ್ವೇಷ ಹರಡುವ ತಂತ್ರಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

“ದೇಶದ ಶೇ.60 ರಷ್ಟು ಜನಸಂಖ್ಯೆ 40 ವರ್ಷದೊಳಗಿನವರಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಈ ಜನಸಂಖ್ಯೆಗೆ ಅನುಕೂಲ ಕಲ್ಪಿಸುವುದನ್ನು ಬಿಟ್ಟು ಅದನ್ನು ನಾಶ ಪಡಿಸುತ್ತಿದ್ದಾರೆ. ಅವರು ತಮಗೆ 400 ಬರುತ್ತದೆ ಎಂದು ಹೇಳುತ್ತಾರೆ. ಆದರೆ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 100ಕ್ಕಿಂತ ಹೆಚ್ಚು ದಾಟಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಬಿಜೆಪಿಯನ್ನು ಸೋಲಿಸಬೇಕೆಂದು ಪ್ರತಿಪಾದಿಸಿದ ಓವೈಸಿ, ದ್ವೇಷ ಹರಡುವುದರಿಂದ ಬಿಜೆಪಿ ಏನು ಲಾಭ ಗಳಿಸಿಕೊಂಡಿದೆ. ದೇಶವು ವರ್ಷದಿಂದ ವರ್ಷಕ್ಕೆ ದುರ್ಬಲಗೊಳ್ಳುತ್ತಿದೆ ಎಂದು ಓವೈಸಿ ಹೆಳಿದರು.

“ಇತ್ತೀಚಿಗೆ ಇಲ್ಲಿನ ಬಿಜೆಪಿಯ ಅಭ್ಯರ್ಥಿಯೊಬ್ಬರು ಮಸೀದಿಯನ್ನು ನಾಶ ಪಡಿಸುವಂತ  ಸನ್ನೆಯನ್ನು ಮಾಡಿದ್ದರು. ಇದು ಬಿಜೆಪಿಯು ಹೈದರಾಬಾದ್‌ನಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ನೆಮ್ಮದಿಯನ್ನು ಹಾಳುಮಾಡಲು ಬಯಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೈದರಾಬಾದ್‌ನ ಬಿಜೆಪಿ ಅಭ್ಯರ್ಥಿಯಾದ ಮಾಧವಿ ಲತಾ ಎಂಬುವವರು ಎರಡು ದಿನಗಳ ಹಿಂದೆ ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತಮ್ಮ ಅಣಕು ಸನ್ನೆಯಲ್ಲಿ ಬಿಲ್ಲು ಬಾಣದ ಮೂಲಕ ಮಸೀದಿಯತ್ತ ಗುರಿಯಿಟ್ಟವರಂತೆ ತೋರಿಸಿದ್ದು ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆ ನಂತರ ಬಿಜೆಪಿ ಅಭ್ಯರ್ಥಿ ಕ್ಷಮೆ ಕೋರಿದ್ದರು.

ಓವೈಸಿ ಹೈದರಾಬಾದ್‌ನಿಂದ ಲೋಕಸಭೆಗೆ ಐದನೇ ಬಾರಿ ಪುನರಾಯ್ಕೆ ಬಯಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...