‘ಕರ್ನಲ್ ಸೋಫಿಯಾ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಬಿಜೆಪಿ ಸಚಿವ ನಾಪತ್ತೆ’

Date:

ಕರ್ನಲ್‌ ಸೋಫಿಯಾ ಖುರೇಷಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ವಿಜಯ್ ಶಾ ನಾಪತ್ತೆ ಬಗ್ಗೆ ಪೋಸ್ಟರ್ ಬಿಡುಗಡೆ ಮಾಡಿದೆ.

ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ನಡೆದಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ದೇಶದ ಜನರಿಗೆ ಕರ್ನಲ್‌ ಸೋಫಿಯಾ ಖುರೇಷಿ ವಿವರಿಸಿದ್ದರು. ಆದರೆ, ಅವರನ್ನು ಬಿಜೆಪಿ ಸಚಿವ ವಿಜಯ್ ಶಾ ‘ಭಯೋತ್ಪಾದಕರ ಸಹೋದರಿ’ ಎಂದು ಕರೆದಿದ್ದರು. ಅವರ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೊಶ ವ್ಯಕ್ತವಾಗಿತ್ತು. ವಿಜಯ್ ಶಾ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್‌ ಎಫ್‌ಐಆರ್ ದಾಖಲಿಸಿಲು ಪೊಲೀಸರಿಗೆ ಸೂಚಿಸಿತ್ತು. ಅಂತೆಯೇ, ಅವರ ವಿರುದ್ದ ತನಿಖೆಗೆ ಸುಪ್ರೀಂ ಕೋರ್ಟ್‌ ಎಸ್‌ಐಟಿ ರಚನೆ ಮಾಡಿತ್ತು.

ಆದಾಗ್ಯೂ, ವಿಜಯ್ ಶಾ ಅವರನ್ನು ಎಸ್‌ಐಟಿ ಪೊಲೀಸರು ಬಂಧಿಸಿಲ್ಲ. ವಿಚಾರಣೆಗೂ ಒಳಪಡಿಸಿಲ್ಲ. ವಿಜಯ್ ಶಾ ಪ್ರಕರಣದಲ್ಲಿ ಪೊಲೀಸರು ಮತ್ತು ಸರ್ಕಾರದ ನಡೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ. “ಕರ್ನಲ್ ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವ ‘ಕಾಣೆಯಾಗಿದ್ದಾರೆ’. ಹುಡುಕಿಕೊಡಿ” ಎಂದು ಪೋಸ್ಟರ್ ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕರ್ನಲ್ ಸೋಫಿಯಾ, ವಿಜಯ್ ಶಾ, ಬಿಜೆಪಿ ಸಚಿವ, ಮಧ್ಯಪ್ರದೇಶ, ಬಿಜೆಪಿ, ಕಾಂಗ್ರೆಸ್‌, Colonel Sophia, Vijay Shah, BJP Minister, Madhya Pradesh, BJP, Congress,

ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷ ವಿವೇಕ್ ಖಂಡೇಲ್ವಾಲ್ ಅವರು ‘ಗುಮ್ಶುದಾ ಕಿ ತಲಾಶ್’ (ಕಾಣೆಯಾದ ವ್ಯಕ್ತಿಗಾಗಿ ಹುಡುಕಾಟ) ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ಗಳನ್ನು ವಿವೇಕ್ ಹಂಚಿಕೊಂಡಿದ್ದಾರೆ. ಬುಡಕಟ್ಟು ವ್ಯವಹಾರಗಳ ಸಚಿವ ವಿಜಯ್ ಶಾ ಅವರ ಬಗ್ಗೆ ‘ಮಾಹಿತಿ’ ನೀಡಿದವರಿಗೆ 11,000 ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಪಹಲ್ಗಾಮ್‌ ದಾಳಿಗೆ ಒಂದು ತಿಂಗಳು; ಸಿಂಧೂರ ಅಳಿಸಿದ ಹಂತಕರನ್ನು ಹಿಡಿದರೇ ಮೋದಿ?

“ಸಚಿವ ವಿಜಯ್ ಶಾ ಎಲ್ಲಿಯೂ ಕಾಣುತ್ತಿಲ್ಲ. ಸಂಪುಟ ಸಭೆಗಳಲ್ಲಿಯೂ ಕಾಣಿಸದ ಕಾರಣ ನಾವು ಈ ಪೋಸ್ಟರ್‌ಗಳನ್ನು ಹಾಕಿದ್ದೇವೆ” ಎಂದು ಅವರು ಶನಿವಾರ ಹೇಳಿದ್ದಾರೆ. ಅವರು ರಾಜೀನಾಮೆ ನೀಡುವವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ” ಎಂದು ವಿವೇಕ್ ಖಂಡೇಲ್ವಾಲ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...