ವಂದೇ ಭಾರತ್‌ಗೆ ಚಾಲನೆ ವೇಳೆ ರೈಲ್ವೇ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ

Date:

ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಸಮಯದಲ್ಲಿ ಆಯತಪ್ಪಿ ಬಿಜೆಪಿ ಶಾಸಕಿ ರೈಲ್ವೇ ಹಳಿ ಮೇಲೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಇಟಾವಾ ರೈಲು ನಿಲ್ದಾಣದಲ್ಲಿ ನಡೆದಿದೆ.

ಆಗ್ರಾ ಮತ್ತು ವಾರಣಾಸಿ ನಡುವೆ ಸಂಚರಿಸುವ ವಂದೇ ಭಾರತ್ ರೈಲಿಗೆ ಮಂಗಳವಾರ ಚಾಲನೆ ನೀಡಲಾಗಿದೆ. ಇಟಾವಾ ರೈಲು ನಿಲ್ದಾಣದಲ್ಲಿ ನಡೆದ ಚಾಲನಾ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ, ಸಚಿವರು ಭಾಗಿಯಾಗಿದ್ದರು.ಈ ವೇಳೆ, ಇಟಾವಾದ ಬಿಜೆಪಿ ಶಾಸಕಿ ಸದರ್ ಸರಿತಾ ಬದೌರಿಯಾ ಅವರು ಆಯತಪ್ಪಿ ಪ್ಲಾಟ್‌ಫಾರ್ಮ್‌ನಿಂದ ರೈಲ್ವೇ ಹಳಿ ಮೇಲೆ ಬಿದ್ದಿದ್ದಾರೆ.

ವಂದೇ ಭಾರತ್‌ಗೆ ಹಸಿರು ನಿಶಾನೆ ತೋರಿಸಿ, ಫೋಟೋ ತೆಗೆದುಕೊಳ್ಳಲು ಶಾಸಕಿ ಮುಂದಾಗಿದ್ದಾರೆ. ಈ ವೇಳೆ, ಸ್ಥಳದಲ್ಲಿದ್ದ ಜನರ ನಡುವೆ ನೂಕು-ನುಗ್ಗಲು ನಡೆದಿದೆ. ಪರಿಣಾಮ ಶಾಸಕಿ ಹಳಿ ಮೇಲೆ ಬಿದ್ದಿದ್ದಾರೆ. ಸದ್ಯ, ಅವರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...