ಗೌರಿ ಲಂಕೇಶ್, ದಾಭೋಲ್ಕರ್ ಹತ್ಯೆ ಆರೋಪಿಗಳ ವಕೀಲರನ್ನು ಸನ್ಮಾನಿಸಿದ ಬಿಜೆಪಿ ಶಾಸಕ ರಾಜಾ ಸಿಂಗ್!

Date:

ಹಿಂದೂ ಜನಜಾಗೃತಿ ಸಮಿತಿ ಎಂಬ ಬಲಪಂಥೀಯ ಸಂಘಟನೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಆರೋಪಿಗಳನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸುವ ವಕೀಲರನ್ನು ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಸನ್ಮಾನಿಸಿದ ಬೆಳವಣಿಗೆ ನಡೆದಿದೆ.

ವಿವಾದಾತ್ಮಕ ಬಿಜೆಪಿಯ ಶಾಸಕ ರಾಜಾ ಸಿಂಗ್, ಹೈದರಾಬಾದ್‌ನಲ್ಲಿ 101 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ 18 ಕೋಮುವಾದಕ್ಕೆ ಪ್ರಚೋದನೆ ಪ್ರಕರಣಗಳು ಕೂಡ ಒಳಗೊಂಡಿದೆ. ಜೂನ್ 24 ಮತ್ತು 30 ರ ನಡುವೆ ಗೋವಾದಲ್ಲಿ ನಡೆದ ವೈಶ್ವಿಕ್ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ನಾಲ್ವರು ವಕೀಲರನ್ನು ರಾಜಾ ಸಿಂಗ್ ಸನ್ಮಾನಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪ್ರತಿನಿಧಿಸುತ್ತಿರುವ ಪಿ ಕೃಷ್ಣಮೂರ್ತಿ, ಉಮಾಶಂಕರ್ ಮೇಗುಂಡಿ, ದಿವ್ಯಾ ಮೇಗುಂಡಿ ಮತ್ತು ಅವಿನಾಶ ಮಸೂತಿ ಅವರನ್ನು ಅವರು ಸನ್ಮಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನ ಆಕೆಯ ಮನೆಯ ಹೊರಗೆ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಮುಖಂಡ ಅಮೋಲ್ ಕಾಳೆ ಅವರು ಗೌರಿ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗೌರಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡವು 18 ಮಂದಿ ಭಾಗಿಯಾಗಿರುವುದನ್ನು ಪತ್ತೆ ಹಚ್ಚಿದೆ.

ಶಾಸಕ ರಾಜಾಸಿಂಗ್ ವಕೀಲರನ್ನು ಸನ್ಮಾನಿಸುತ್ತಿರುವ ಫೋಟೋವನ್ನು ಖುದ್ದು ಹಿಂದೂ ಜನಜಾಗೃತಿ ಸಮಿತಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಯ ಆರೋಪಿಗಳನ್ನು ಪ್ರತಿನಿಧಿಸುತ್ತಿರುವ ವಕೀಲರಾದ ಪ್ರಕಾಶ್ ಸಾಲ್ಸಿಂಕರ್, ಘನಶ್ಯಾಮ್ ಉಪಾಧ್ಯಾಯ, ಮೃಣಾಲ್ ವ್ಯಾವಹರೆ ಸಾಖರೆ ಮತ್ತು ಸ್ಮಿತಾ ದೇಸಾಯಿ ಅವರನ್ನು ರಾಜಾ ಸಿಂಗ್ ಸನ್ಮಾನಿಸಿದ್ದಾರೆ.

ದಾಭೋಲ್ಕರ್ ಅವರನ್ನು 2013ರ ಆಗಸ್ಟ್ 13ರಂದು ಪುಣೆಯ ಓಂಕಾರೇಶ್ವರ ದೇವಸ್ಥಾನದ ಬಳಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪುಣೆಯ ವಿಶೇಷ ನ್ಯಾಯಾಲಯವು ಮೇ 2024 ರಲ್ಲಿ ದಾಭೋಲ್ಕರ್ ಅವರನ್ನು ಹತ್ಯೆಗೈದ ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ದೋಷಿ ಎಂದು ತೀರ್ಪು ನೀಡಿದೆ. ಗೌರಿ ಹತ್ಯೆಯ ಆರೋಪಿಗಳಲ್ಲಿ ಕಲಾಸ್ಕರ್ ಕೂಡ ಒಬ್ಬನಾಗಿದ್ದಾನೆ.

ಇದನ್ನು ಓದಿದ್ದೀರಾ? ಮೊದಲ ಭಾಷಣದಲ್ಲೇ ಶಿವ ದೇವರ ಫೋಟೋ ತೋರಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

ಹಿಂದೂ ಜನಜಾಗೃತಿ ಸಮಿತಿಯ ವೆಬ್‌ಸೈಟ್ ಪ್ರಕಾರ, ಜೂನ್ 24 ಮತ್ತು 30ರ ನಡುವೆ ಗೋವಾದಲ್ಲಿ ನಡೆದ ವೈಶ್ವಿಕ್ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ದೇಶಾದ್ಯಂತದ ಸುಮಾರು 800 ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...