ನಡುಬೀದಿಯಲ್ಲಿ ಬಿಜೆಪಿ ಶಾಸಕನಿಗೆ ಕಪಾಳಮೋಕ್ಷ; ವಿಡಿಯೋ ವೈರಲ್

Date:

ಉತ್ತರ ಪ್ರದೇಶದ ಲಖೀಂಪುರ್‌ನ ಭಾರತೀಯ ಜನತಾ ಪಕ್ಷದ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದ್ದು, ಇದು ಲಖೀಂಪುರ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ಸ್ಥಳೀಯ ಕೋರ್ಟ್‌ನ ಬಾರ್ ಅಸೋಸಿಯೇಶನ್ ಅಧ್ಯಕ್ಷ ಅವಧೇಶ್ ಸಿಂಗ್ ಶಾಸಕ ವರ್ಮಾ ಅವರಿಗೆ ಕಪಾಳಮೋಕ್ಷ ಮಾಡಿರುವ ದೃಶ್ಯ ಸೆರೆಯಾಗಿದೆ. ನಂತರ ಅವಧೇಶ್ ಬೆಂಬಲಿಗರು ವರ್ಮಾ ಅವರನ್ನು ಹಿಡಿದು ಎಳೆದಾಡಿರುವ ಘಟನೆ ನಡೆದಿದೆ.

ಸ್ಥಳದಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳು ಹಾಜರಿದ್ದರು ಕೂಡಾ ಪರಿಸ್ಥಿತಿಯನ್ನು ತಿಳಿಗೊಳಿಸಲು ಸಾಧ್ಯವಾಗಲಿಲ್ಲ ಎಂದು ವರದಿ ವಿವರಿಸಿದೆ. ಅರ್ಬನ್ ಬ್ಯಾಂಕ್ ಮ್ಯಾನೇಜ್‌ಮೆಂಟ್ ಕಮಿಟಿ ಚುನಾವಣೆಯ ಸಿದ್ಧತೆ ನಡೆಯುತ್ತಿರುವ ವೇಳೆ ಘರ್ಷಣೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಡುಗೆ ಎಣ್ಣೆ ಬೆಲೆ ದಿಢೀರ್‌ ಹೆಚ್ಚಳ: ಗ್ರಾಹಕರ ಜೇಬಿಗೆ ಕತ್ತರಿ

ಈ ಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಸುನೀಲ್ ಸಿಂಗ್ ಮತ್ತು ಶಾಸಕ ಯೋಗೇಶ್ ವರ್ಮಾ ಮನವಿ ಮಾಡಿಕೊಂಡಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಂತರ ಈ ಮಾರಾಮಾರಿ ನಡೆಯಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಅಕ್ಟೋಬರ್ 14ರಂದು ನಡೆಯಲಿರುವ ಚುನಾವಣೆಯಲ್ಲಿ ಅಂದಾಜು 12,000 ಷೇರುದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲಾಗುವುದು ಎಂದು ಎಡಿಎಂ ಸಂಜಯ್ ಸಿಂಗ್ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...